ಬ್ರೇಕಿಂಗ್ ನ್ಯೂಸ್
18-01-24 11:49 am Mangaluru Correspondent ಕರಾವಳಿ
ಮಂಗಳೂರು, ಜ.18: ಮರಳು ಮಾಫಿಯಾಗಳೊಂದಿಗೆ ಶಾಮೀಲಾಗಿದ್ದಾರೆ ಮತ್ತು ಮೇಲಧಿಕಾರಿಗಳ ಜೊತೆಗೆ ಉಡಾಫೆಯಾಗಿ ವರ್ತಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಇತ್ತೀಚೆಗೆ ಜಪ್ಪಿನಮೊಗರು ಕಡೆಕಾರಿನಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ತಲಪಾಡಿ ಗ್ರಾಪಂ ಸದಸ್ಯ, ಕಾಂಗ್ರೆಸ್ ಪುಢಾರಿಗೆ ಸೇರಿದ್ದೆನ್ನಲಾದ ಎಂಟು ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ್ದರು. ಮರಳು ಮತ್ತು ಟಿಪ್ಪರ್ ವಾಹನಗಳನ್ನು ಮುಂದಿನ ತನಿಖೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಿದ್ದರು. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ವ್ಯಾಪಕ ಮರಳುಗಾರಿಕೆ ನಡೆಯುತ್ತಿದ್ದರಿಂದ ಎಸಿಪಿ ಧನ್ಯಾ ನಾಯಕ್ ಕಾರ್ಯಾಚರಣೆ ನಡೆಸಲು ಸೂಚಿಸಿದ್ದರೂ, ಇನ್ಸ್ ಪೆಕ್ಟರ್ ಭಜಂತ್ರಿ ನಿರ್ಲಕ್ಷ್ಯ ವಹಿಸಿದ್ದರು. ಈ ವೇಳೆ, ಭಜಂತ್ರಿಯವರು ತನ್ನ ಮೇಲಧಿಕಾರಿ ಎಸಿಪಿ ಜೊತೆಗೆ ಉಡಾಫೆಯಿಂದ ಮಾತನಾಡಿದ್ದರು ಎನ್ನಲಾಗಿದೆ.

ಮರಳು ಮಾಫಿಯಾಗಳೊಂದಿಗೆ ಶಾಮೀಲಾಗಿರುವುದು ಮತ್ತು ತನ್ನೊಂದಿಗೆ ಉಡಾಫೆಯಾಗಿ ವರ್ತಿಸಿದ ಬಗ್ಗೆ ಎಸಿಪಿ ಧನ್ಯಾ ನಾಯಕ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ವರದಿ ನೀಡಿದ್ದರು. ಇದಲ್ಲದೆ, ಇತ್ತೀಚೆಗೆ ಭಜಂತ್ರಿ ಅವರ ನಿವಾಸದ ಬಳಿಯ ಕೆಲವರು ಪೊಲೀಸ್ ಆಯುಕ್ತರನ್ನು ಭೇಟಿಯಾಗಿ, ತಮ್ಮೊಂದಿಗೆ ದರ್ಪ ತೋರುತ್ತಿದ್ದಾರೆಂದು ಹೇಳಿದ್ದರಂತೆ. ಈ ಬಗ್ಗೆ ಕಮಿಷನರ್ ಪ್ರಶ್ನೆ ಮಾಡಿದಾಗ, ನಾವು ಬದುಕೋದು ಹೇಗೆ ಸ್ವಾಮಿ ಎಂದು ಅವರೊಂದಿಗೂ ಸೋಗಿನ ಮಾತುಗಳನ್ನಾಡಿದ್ದರು ಎನ್ನಲಾಗುತ್ತಿದೆ. ಭಜಂತ್ರಿ ಈ ಹಿಂದೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿದ್ದಾಗಲೂ ಮೇಲಧಿಕಾರಿಗಳ ಜೊತೆಗೆ ಉಡಾಫೆಯಿಂದ ವರ್ತಿಸಿ ಸಸ್ಪೆಂಡ್ ಆಗಿದ್ದರು.
ಸ್ಪೀಕರ್ ಯುಟಿ ಖಾದರ್ ಆಪ್ತನಾಗಿರುವ ಕಾಂಗ್ರೆಸ್ ಪುಢಾರಿ ಕೊಣಾಜೆ, ಉಳ್ಳಾಲ ಭಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸರಿಗೆ ಮಾಹಿತಿಯಿದ್ದರೂ ನಿರ್ಲಕ್ಷ್ಯ ವಹಿಸಿದ್ದರು. ಈ ಹಿಂದೊಮ್ಮೆ ತಲಪಾಡಿಯಲ್ಲಿ ವೈಭವದ ಇಸ್ಪೀಟ್ ಜೂಜಾಟ ನಡೆಯುವಲ್ಲಿಗೆ ಪೊಲೀಸರು ದಾಳಿ ನಡೆಸಿದ್ದರು. ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದರೂ, ಪ್ರಮುಖ ಆರೋಪಿಯಾಗಿದ್ದ ಈ ಪುಢಾರಿ ಪರಾರಿಯಾಗಿದ್ದ. ಇದೀಗ ಮರಳುಗಾರಿಕೆಯಲ್ಲಿ ಆತನದ್ದೇ ಕೈವಾಡ ಎಂದು ಹೇಳುತ್ತಿದ್ದರೂ, ಪೊಲೀಸರು ಆ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿಲ್ಲ.
Police Inspector Siddagowda H Bhajantri of the Mangalore Kankanady town police was suspended due to his unprofessional conduct towards a senior police official and his endorsement of illicit sand mining. Additionally, Bhajantri is allegedly impolite to regular citizens who visit the police station, according to locals.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm