ಬ್ರೇಕಿಂಗ್ ನ್ಯೂಸ್
23-01-24 03:09 pm Mangalore Correspondent ಕರಾವಳಿ
ಮಂಗಳೂರು, ಜ.23: ಮ್ಯೂಚ್ವಲ್ ಫಂಡ್ ವ್ಯವಹಾರದ ಜೊತೆಗೆ ಸಿಎ ಓದುತ್ತಿದ್ದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.
ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ಹ (23) ಸಾವಿಗೆ ಶರಣಾದ ಯುವಕ. ಸೋಮವಾರ ಷೇರ್ ಮಾರ್ಕೆಟ್ ರಜೆ ಇದ್ದುದರಿಂದ ಮನೆಯಲ್ಲೇ ಇದ್ದ ಕಾರ್ಲ್ ಲಾರೆನ್ಸ್ ಮಧ್ಯಾಹ್ನ ಊಟ ಮಾಡಿ ಕೊಠಡಿ ಸೇರಿದ್ದ. ಸಂಜೆ ನಾಲ್ಕು ಗಂಟೆ ವೇಳೆಗೆ ಬಾಗಿಲು ಬಡಿದರೂ ಹೊರ ಬಂದಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೊಠಡಿಯಿಂದ ಹೊರ ಬಂದಿಲ್ಲ ಎಂದು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ರಾತ್ರಿ ಬಾಗಿಲು ಒಡೆದು ನೋಡಿದಾಗ, ಲಾರೆನ್ಸ್ ಬೆಟ್ ಶೀಟನ್ನೇ ಕಿಟಕಿಗೆ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಲಾರೆನ್ಸ್ ತನ್ನ ತಂದೆಯ ಜೊತೆಗೆ ಸೇರಿ ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿದ್ದ. ಸಾವಿಗೇನು ಕಾರಣ ಎಂದು ತಿಳಿದುಬಂದಿಲ್ಲ. ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಮನೆ ಮತ್ತು ಪರಿಸರದಲ್ಲಿ ಒಳ್ಳೆಯ ಯುವಕನಾಗಿದ್ದ ಲಾರೆನ್ಸ್ ದಿಢೀರ್ ಸಾವಿಗೀಡಾಗಿದ್ದು ಕುಟುಂಬಸ್ಥರಲ್ಲಿ ಗಾಬರಿ ಹುಟ್ಟಿಸಿದೆ.
23 year old CA Student Carl Aranha commits suicide at house in Mangalore. It is said he was helping his father in Share market and mutual fund business. Case has been registered at Kadri Police Station.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am