ಬ್ರೇಕಿಂಗ್ ನ್ಯೂಸ್
24-01-24 01:53 pm Mangalore Correspondent ಕರಾವಳಿ
ಬಂಟ್ವಾಳ, ಜ.24: ಹೆಸರಾಂತ ಯಕ್ಷಗಾನ ಕಲಾವಿದ, ಕಂಚಿನ ಕಂಠದ ಮಾತುಗಾರಿಕೆಯಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದ ನಾರಾಯಣ ಶೆಟ್ಟಿ ಕನ್ನಡ, ತುಳು ಭಾಷೆಯ ಪ್ರಸಂಗಗಳಲ್ಲಿ ಮಿಂಚು ಹರಿಸಿದ್ದರು. ಕಂಚಿನ ಕಂಠದ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಯಿಂದಾಗಿ ಪೆರುವಾಯಿ ಶೈಲಿಯೆಂದೇ ಹೆಸರಾಗಿದ್ದರು.
ಕಟೀಲು ಮೇಳದಲ್ಲಿ ಸುದೀರ್ಘ ಕಾಲ ಕಲಾವಿದರಾಗಿದ್ದ ಅವರು ರಕ್ತಬೀಜ, ಹಿರಣ್ಯಕಶಿಪು, ಕಂಸ, ಸುಂದರರಾವಣ, ಋತುಪರ್ಣ, ಹನುಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಹೀಗೆ ಹೆಚ್ಚು ರಾಕ್ಷಸ ಪಾತ್ರಗಳನ್ನು ಮಾಡಿ ರಂಗದಲ್ಲಿ ಮಿಂಚಿದ್ದರು. ಕುಂಡಾವು ಮೇಳದ ಮೂಲಕ ರಂಗ ಪ್ರವೇಶ ಮಾಡಿದ್ದ ಅವರು, ಕರ್ನಾಟಕ ಮೇಳ, ಧರ್ಮಸ್ಥಳ, ಪೊಳಲಿ, ಕದ್ರಿ, ಕುಂಬಳೆ ಮೇಳಗಳಲ್ಲಿ ತಿರುಗಾಟ ಮಾಡಿದ್ದರು. 1942ರಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಜನಿಸಿದ್ದ ನಾರಾಯಣ ಶೆಟ್ಟಿ ಸುದೀರ್ಘ 50 ವರ್ಷಗಳ ಕಾಲ ಯಕ್ಷಗಾನ ಸೇವೆ ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯ ಕಾರಣದಿಂದ ತಿರುಗಾಟ ನಿಲ್ಲಿಸಿದ್ದರು. ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ತುಳು ಪ್ರಸಂಗಗಳಲ್ಲಿ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳಿಗೆ ಪ್ರಸಿದ್ಧಿ ಪಡೆದಿದ್ದರು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
Mangalore Peruvia Narayana Shetty yakshagana artist dies at 82.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm