ಬ್ರೇಕಿಂಗ್ ನ್ಯೂಸ್
25-01-24 05:46 pm Mangalore Correspondent ಕರಾವಳಿ
ಪುತ್ತೂರು, ಜ.25: ಜಾಂಡಿಸ್ ರೋಗದಿಂದಾಗಿ ಲಿವರ್ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನೆಹರು ನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್ ವೈಫಲ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್ ಹಾನಿಯಾಗಿದ್ದು, ಲಿವರ್ ಟ್ರಾನ್ಸ್‌ಪ್ಲಾಂಟ್ ಮಾಡಬೇಕೆಂದು ತಿಳಿಸಿದ್ದರು.

ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಬ್ಯಾಂಕ್ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್ ದಾನ ಮಾಡಿದ್ದರೂ ವಿಧಿಯಾಟಕ್ಕೆ ತುತ್ತಾದ ಐಶ್ವರ್ಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.
In a tragic incident reported from Nehru Nagar, a young girl named Aishwarya (29) lost her life despite her younger sister, Anusha, selflessly donating her liver in an attempt to save Aishwarya from liver failure.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am