ಬ್ರೇಕಿಂಗ್ ನ್ಯೂಸ್
02-02-24 01:47 pm Mangalore Correspondent ಕರಾವಳಿ
ಉಳ್ಳಾಲ, ಫೆ.2: ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಸಾಗುತ್ತಿದ್ದ ಟ್ರಾಲ್ ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರ ಮಧ್ಯದಲ್ಲಿದ್ದ ಕಲ್ಲಿಗೆ ಬಡಿದು ಮುಳುಗಿದ್ದು, ಅಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಎರಡು ಬೋಟ್‍ನ ಮೀನುಗಾರರು ಮುಳುಗುತ್ತಿದ್ದ ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ.
ಮುಳುಗಡೆಯಾಗಿರುವ ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು ಬೋಟ್‍ಗೂ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ ಅವರಿಗೆ ಸೇರಿದ `ನವಾಮಿ - ಶಿವಾನಿ' ಬೋಟ್ ದುರಂತಕ್ಕೀಡಾಗಿದ್ದು, ಬೋಟ್ ಚಲಾಯಿಸುತ್ತಿದ್ದ ನಯನಾ ಅವರ ಪತಿ ಪ್ರವೀಣ್ ಸುವರ್ಣ, ಉತ್ತರ ಪ್ರದೇಶದ ಮೀನುಗಾರರಾದ ಸಮರ ಬಹದ್ದೂರ್, ರಾಮ್ ಮನೋಜ್, ರೋಹಿತ್, ಪ್ರಕಾಶ್, ವಾಸು ಅವರಲ್ಲಿ ಮೂವರನ್ನು ನಾಡದೋಣಿಯಲ್ಲಿ ಆಗಮಿಸಿದ ರಾಮ ಸುವರ್ಣ ಮತ್ತು ಯತೀಶ್ ಸುವರ್ಣ ರಕ್ಷಿಸಿದರೆ, ಉಳಿದ ಇಬ್ಬರನ್ನು ಮತ್ತು ಬೋಟನ್ನು ಪ್ರಕಾಶ್ ಖಾರ್ವಿ ಮಾಲಕತ್ವದ ದುರ್ಗಾ ಲಕ್ಷ್ಮಿ ಮತ್ತು ಮನೋಜ್ ಖಾರ್ವಿ ಮಾಲಕತ್ವದ ಶ್ರೀಗೌರಿ ಬೋಟ್‍ನ ಮೀನುಗಾರರು ರಕ್ಷಿಸಿದ್ದಾರೆ.
ಗುರುವಾರ ಸಂಜೆ ಪ್ರವೀಣ್ ಸುವರ್ಣ ಸೇರಿದಂತೆ ಉತ್ತರ ಪ್ರದೇಶದ ಐವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಇಂದು ನಸುಕಿನ ಜಾವ ನಾಲ್ಕು ಗಂಟೆಗೆ ಮೀನುಗಾರಿಕೆ ಮುಗಿಸಿ ಮೀನಿನೊಂದಿಗೆ ಉಳ್ಳಾಲ ಸಮುದ್ರ ತೀರದ ಮೂಲಕ ದಡಕ್ಕೆ ಆಗಮಿಸುತ್ತಿದ್ದರು. ಈ ಸಂದರ್ಭದಲ್ಲಿ ಬೋಟ್‍ನ ಪ್ರೊಪೆಲರ್ ಗೆ ಸಮುದ್ರದಲ್ಲಿ ಯಾವುದೋ ವಸ್ತು ತಾಗಿ ಪ್ರೊಫೆಲರ್ ನಿಂತಿದ್ದು, ಬೆಳಗಿನ ಜಾವ ಸಮುದ್ರ ಇಳಿತದಿಂದ ಸಮುದ್ರದಲ್ಲಿ ನಿಂತಿದ್ದ ಬೋಟ್ ಸಮುದ್ರದ ತೆರೆಗಳ ಹೊಡೆತಕ್ಕೆ ಕಡಲ್ಕೊರೆತದ ಶಾಶ್ವತ ಕಾಮಗಾರಿಯಾದ ರೀಫ್ ಬಳಿ ಹಾಕಿದ್ದ ಸರ್ವೇ ಕಲ್ಲಿಗೆ ಬಡಿದು ಬೋಟ್ ಮುಳುಗಲು ಆರಂಭಗೊಂಡಿದೆ. ಹಡಗು ಮುಳುಗುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಮೀನುಗಾರಿಕೆಗೆ ತೆರಳಿದ್ದ ದುರ್ಗಾಲಕ್ಷ್ಮೀ ಮತ್ತು ಶ್ರೀ ಗೌರಿ ಬೋಟ್‍ನ ಮೀನುಗಾರರು ಮುಳುಗುತ್ತಿದ್ದವರನ್ನ ರಕ್ಷಿಸಿ, ಬೋಟನ್ನು ಸಮುದ್ರ ಕಿನಾರೆಗೆ ಎಳೆದೊಯ್ದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishing boat capsizes at ullal in Mangalore, five rescued
28-08-25 11:56 am
HK News Desk
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:27 am
Mangalore Correspondent
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm