ಬ್ರೇಕಿಂಗ್ ನ್ಯೂಸ್
02-02-24 08:40 pm Mangalore Correspondent ಕರಾವಳಿ
ಮಂಗಳೂರು, ಫೆ.2: ಗ್ಯಾನವಾಪಿ ಮಸೀದಿ ಮಾದರಿಯಲ್ಲೇ ಮಳಲಿ ಮಸೀದಿಯನ್ನು ಪ್ರಾಚ್ಯವಸ್ತು ಇಲಾಖೆಯಿಂದ ಉತ್ಖನನ ಮಾಡಿಸಬೇಕು ಎಂದು ಹೋರಾಟಕ್ಕೆ ಮುಂದಾಗಿದ್ದ ವಿಶ್ವ ಹಿಂದು ಪರಿಷತ್ ಒತ್ತಾಯಕ್ಕೆ ಬಲ ಬಂದಿದೆ. ಮಳಲಿ ಮಸೀದಿ ವಕ್ಫ್ ಆಸ್ತಿಯಾಗಿದ್ದು, ಮಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ವಿಚಾರಣೆ ನಡೆಸುವ ಅಧಿಕಾರ ಇಲ್ಲವೆಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.
2022ರ ಎಪ್ರಿಲ್ 21ರಂದು ಮಳಲಿ ಮಸೀದಿಯನ್ನು ನವೀಕರಣ ಮಾಡಲು ಮುಂದಾಗಿದ್ದಾಗ, ಒಳಗಡೆ ದೇವಸ್ಥಾನ ಶೈಲಿಯ ವಾಸ್ತುಶಿಲ್ಪ ಸಾರ್ವಜನಿಕರಲ್ಲಿ ಕುತೂಹಲ ಮತ್ತು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆನಂತರ, ವಿಶ್ವ ಹಿಂದು ಪರಿಷತ್ ಪ್ರಮುಖರು ಹೋರಾಟ ಕೈಗೆತ್ತಿಕೊಂಡು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸುವುದು ಸೇರಿದಂತೆ ಗ್ಯಾನವಾಪಿ ಮಾದರಿಯಲ್ಲೇ ಕೋರ್ಟ್ ಉಸ್ತುವಾರಿಯಲ್ಲೇ ತನಿಖೆಗೆ ಆಯೋಗ ರಚಿಸುವಂತೆ ಕೇಳಿಕೊಂಡಿದ್ದರು. ಇದೇ ವೇಳೆ, ಮಸೀದಿ ಕಮಿಟಿಯವರು ಹಿಂದುಗಳ ಪರ ದಾವೆಗೆ ಆಕ್ಷೇಪ ಸಲ್ಲಿಸಿದ್ದು, ಮಸೀದಿಯು ವಕ್ಫ್ ಆಸ್ತಿಯಾಗಿದ್ದು, ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ಮಾಡಲು ಬರುವುದಿಲ್ಲ. ಈ ಕುರಿತು ಮೈಸೂರಿನ ಟ್ರಿಬ್ಯುನಲ್ ನಲ್ಲಿಯೇ ವಿಚಾರಣೆ ನಡೆಸಬೇಕು ಎಂದು ವಾದಿಸಿದ್ದರು. ಆದರೆ ಮಸೀದಿ ಕಮಿಟಿಯ ವಾದವನ್ನು ಮಂಗಳೂರಿನ ನ್ಯಾಯಾಲಯ ಪುರಸ್ಕರಿಸಿರಲಿಲ್ಲ. ಅಲ್ಲದೆ, ಮಸೀದಿ ನವೀಕರಣ ಮಾಡದಂತೆ ಮಂಗಳೂರಿನ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿತ್ತು.
ಮಂಗಳೂರು ಕೋರ್ಟಿನ ತೀರ್ಪನ್ನು ಪ್ರಶ್ನಿಸಿ ಮಸೀದಿ ಕಮಿಟಿಯವರು ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲಿ ವಾದ- ಪ್ರತಿವಾದ ನಡೆದಿತ್ತು. ಒಂದು ವರ್ಷದಿಂದ ನಡೆದುಬಂದ ವಿಚಾರಣೆ ಮುಗಿದಿದ್ದು, ಎರಡು ದಿನಗಳ ಹಿಂದೆ ಹೈಕೋರ್ಟ್ ಮಸೀದಿ ಕಮಿಟಿಯ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ. ಮಸೀದಿ ಕಮಿಟಿಯ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿರುವುದು ವಿಎಚ್ ಪಿ ಹೋರಾಟಕ್ಕೆ ಬಲ ಬಂದಂತಾಗಿದೆ. ಅಲ್ಲದೆ, ಮಂಗಳೂರಿನ ಸಿವಿಲ್ ನ್ಯಾಯಾಲಯದಲ್ಲಿಯೇ ವಿಚಾರಣೆ ಮುಂದುವರಿಸಲು ಅನುಮತಿ ನೀಡಿದ್ದಾಗಿ ತಿಳಿದುಬಂದಿದೆ. ಹೈಕೋರ್ಟ್ ತೀರ್ಪು ಇನ್ನಷ್ಟೇ ಕೈಸೇರಬೇಕಿದ್ದು, ತೀರ್ಪಿನಲ್ಲೇನಿದೆ ಎನ್ನುವ ಬಗ್ಗೆ ಈಗಲೇ ಹೇಳಲಾಗದು ಎಂದು ವಿಎಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯ ತಿಳಿಸಿದ್ದಾರೆ.
Manglore Malali Masjid Row, Masjid application rejected in High court. VHP gets more power.Hindu temple-like architectural design was purportedly found underneath the Masjid on April 21. Communal clashes occurred within a month, leading to police imposing Section 144 in and around the disputed area for 24 hours to de-escalate the situation.
28-08-25 11:56 am
HK News Desk
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:27 am
Mangalore Correspondent
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm