ಬ್ರೇಕಿಂಗ್ ನ್ಯೂಸ್
02-02-24 09:20 pm Mangalore Correspondent ಕರಾವಳಿ
ಮಂಗಳೂರು, ಫೆ.2: ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ನಡೆಯುತ್ತಿರುವ ಪೂಜೆಗೆ ಮಧ್ಯಂತರ ತಡೆ ಕೋರಿ ಮಸೀದಿ ಸಮಿತಿ ಸಲ್ಲಿಸಿದ್ದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.
ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಮಸೀದಿ ಕಮಿಟಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದು ಫೆ.6ಕ್ಕೆ ವಿಚಾರಣೆಗೆ ಬರಲಿದೆ. ಈ ನಡುವೆ, ಪೂಜೆಗೆ ತಡೆ ಕೋರಲು ಕೋರ್ಟ್ ನಿರಾಕರಿಸಿದೆ. ಜನವರಿ 31 ರಂದು ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ಪ್ರಾರಂಭವಾಗಿದ್ದು ಜಿಲ್ಲಾಡಳಿತ ಬಿಗಿ ಬಂದೋಬಸ್ತ್ ಕಲ್ಪಿಸಿದೆ.
ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಅಂಜುಮನ್ ಇಂತೆಜಾಮಿಯಾ ಮಸ್ಜಿದ್ ಸಮಿತಿ ಗುರುವಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ತಡೆ ನೀಡಲು ನಿರಾಕರಿಸಿದ್ದಾರೆ. ಶುಕ್ರವಾರದ ಮುಸ್ಲಿಮರ ಪ್ರಾರ್ಥನೆ ಹಿನ್ನೆಲೆಯಲ್ಲಿ ವಾರಣಾಸಿ ಮಸೀದಿ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಭಾರೀ ಭದ್ರತೆ ಏರ್ಪಡಿಸಿದೆ. ಅಲ್ಲದೆ, ಮಸೀದಿ ಕಮಿಟಿಯು ಜಿಲ್ಲಾ ಕೋರ್ಟಿನ ಆದೇಶ ವಿರೋಧಿಸಿ ಶುಕ್ರವಾರ ವಾರಣಾಸಿ ನಗರ ಬಂದ್ ಮಾಡುವಂತೆ ವರ್ತಕರಿಗೆ ಕರೆ ನೀಡಿತ್ತು. ಮುಸ್ಲಿಂ ಏರಿಯಾಗಳಲ್ಲಿ ಮತ್ತು ಮಾರುಕಟ್ಟೆಗಳಲ್ಲಿ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಬಂದ್ ಮಾಡಿದ್ದರು. ಮುಸ್ಲಿಂ ಬಾಹುಳ್ಯದ ಪ್ರದೇಶಗಳು ಪೂರ್ತಿ ಬಂದ್ ಆಗಿದ್ದವು.
The Allahabad high court on Friday declined an interim stay on the Varanasi court order allowing Hindu prayers in the Gyanvapi mosque cellar, known as Vyas Tehkhana, asking the Muslim side to amend its plea.
12-07-25 10:47 pm
HK News Desk
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
12-07-25 11:00 pm
Mangalore Correspondent
Mangalore Accident, Bolero, Deralakatte: ದೇರಳ...
12-07-25 10:26 pm
Gas Leak at MRPL, Mangalore, death: ಎಂಆರ್ ಪಿಎ...
12-07-25 01:42 pm
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
12-07-25 11:10 pm
Mangalore Correspondent
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm