ಬ್ರೇಕಿಂಗ್ ನ್ಯೂಸ್
07-02-24 10:55 am Mangalore Correspondent ಕರಾವಳಿ
ಪುತ್ತೂರು, ಫೆ.7: ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕ ವಿರೋಧಿ ಒಂದಷ್ಟು ಅತೃಪ್ತ ನಾಯಕರು ಪಕ್ಷದ ಕಚೇರಿಗೆ ಬೀಗ ಜಡಿದಿರುವುದು ಕೇಸರಿ ಭದ್ರಕೋಟೆಯಲ್ಲಿ ಕಂಪನ ಸೃಷ್ಟಿಸಿತ್ತು. ಆದರೆ, ಎರಡೇ ದಿನದಲ್ಲಿ ಬೀಗ ತೆರೆಯಲಾಗಿದ್ದು, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತೆರಳಿ ಅತೃಪ್ತ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆಯೇ ಸತೀಶ್ ಕುಂಪಲ ಸುಳ್ಯಕ್ಕೆ ಆಗಮಿಸಿದ್ದು ಅವರ ಜೊತೆಗೆ ಜಿಲ್ಲೆಯ ಪಕ್ಷದ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಅವರು ಇದ್ದರು. ಮಂಡಲಾಧ್ಯಕ್ಷರ ನೇಮಕ ಪಕ್ಷದ ನಿರ್ಧಾರ. ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಪಕ್ಷದ ನಿರ್ಧಾರವನ್ನು ಎಲ್ಲರೂ ಪಾಲನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಧ್ಯಕ್ಷರು ತಾಲೂಕು ಮಟ್ಟದ ನಾಯಕರಿಗೆ ಮನವರಿಕೆ ಮಾಡಿದ್ದಾರೆ.
ಇದೇ ವೇಳೆ, ತಾಲೂಕು ಕೋರ್ ಕಮಿಟಿಯಲ್ಲಿ ಚರ್ಚೆಯಾಗದ ಹೆಸರನ್ನು ಪರಿಗಣಿಸಿದ್ದು ಹೇಗೆ ಎನ್ನುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮುಂದಿನ ಕೋರ್ ಕಮಿಟಿ ಮತ್ತು ತಾಲೂಕು ಕಮಿಟಿಯಲ್ಲಿ ನಮ್ಮ ಹಿಂದಿನ ತಂಡದ ಸದಸ್ಯರನ್ನು ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮಧ್ಯಾಹ್ನ ವೇಳೆಗೆ ನೂತನ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಅವರು ಪಕ್ಷದ ಕಚೇರಿಗೆ ಬಂದು ಜಿಲ್ಲಾಧ್ಯಕ್ಷರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಆದಷ್ಟು ಬೇಗ ಪದಗ್ರಹಣಕ್ಕೆ ಅವಕಾಶ ನೀಡಬೇಕು. ತಾಲೂಕು ತಂಡದಲ್ಲಿ ಹೊಸಬರನ್ನು ಸೇರಿಸಿಕೊಳ್ಳಲು ಅವಕಾಶ ನೀಡಬೇಕು. ಪಕ್ಷವನ್ನು ಮತ್ತೆ ಸಕ್ರಿಯಗೊಳಿಸಬೇಕು ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಅತೃಪ್ತರ ಬೀಗ ಜಡಿಯುವ ನಾಟಕಕ್ಕೆ ಅಲ್ಪ ವಿರಾಮ ಬಿದ್ದಿದೆ.
BJP Sullia party office forcefully locked in Sullia, Satish Kumapla intervens to solve issue.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am