ಬ್ರೇಕಿಂಗ್ ನ್ಯೂಸ್
08-02-24 04:26 pm Udupi Correspondent ಕರಾವಳಿ
ಉಡುಪಿ, ಫೆ.8: ಭಾರೀ ಅವ್ಯವಹಾರದ ಆರೋಪಕ್ಕೀಡಾದ ಕಾರ್ಕಳ ತಾಲೂಕಿನ ಪರಶುರಾಮ ಥೀಮ್ ಪಾರ್ಕ್ ಕುರಿತ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಓಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದ್ದಾರೆ.
ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗಿತ್ತು. ಪರಶುರಾಮ ಪ್ರತಿಮೆ ಮತ್ತು ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದರು. ಆನಂತರ, ಪರಶುರಾಮ ಪ್ರತಿಮೆಯೇ ನಾಪತ್ತೆಯಾಗಿದ್ದೂ ಆಗಿತ್ತು. ಅಲ್ಲದೆ, ಆ ಮೂರ್ತಿ ಅರ್ಧ ನಕಲಿ, ಕಂಚಿನಿಂದ ನಿರ್ಮಿಸಿಲ್ಲ ಎನ್ನುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು.


ಪರಶುರಾಮ ಮೂರ್ತಿ ನಕಲಿ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ನಿರ್ಮಿತಿ ಕೇಂದ್ರದವರೇ ಮೂರ್ತಿಯನ್ನು ತೆರವು ಮಾಡಿದ್ದರು. ಅದರ ಪೂರ್ತಿ ಕಾಮಗಾರಿ ಆಗಿಲ್ಲ ಎಂದು ಹೇಳಿ ಥೀಮ್ ಪಾರ್ಕ್ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿತ್ತು. ಪರಶುರಾಮ ಮೂರ್ತಿ ಮತ್ತು ಥೀಮ್ ಪಾರ್ಕ್ ಕಾಮಗಾರಿ ಒಟ್ಟು 11 ಕೋಟಿ ವೆಚ್ಚದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಉಸ್ತುವಾರಿಯಲ್ಲೇ ನಡೆದಿತ್ತು. ಹೀಗಾಗಿ ಅವ್ಯವಹಾರಕ್ಕೆ ಕಾರ್ಕಳ ಶಾಸಕರೇ ಕಾರಣ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಈ ಬಗ್ಗೆ ಕಾಂಗ್ರೆಸ್ ಮತ್ತು ಸಾಮಾಜಿಕ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದರೂ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು.
ಎರಡು ದಿನಗಳ ಹಿಂದೆ ಕಾರ್ಕಳ ಕಾಂಗ್ರೆಸ್ ಪ್ರಮುಖರೊಬ್ಬರು, ಥೀಮ್ ಪಾರ್ಕ್ ಅವ್ಯವಹಾರದ ಬಗ್ಗೆ ತನಿಖೆ ಮಾಡದೇ ಇದ್ದರೆ ಪಕ್ಷದ ಚಟುವಟಿಕೆಯಿಂದ ದೂರ ಇರುವುದಾಗಿ ಹೇಳಿದ್ದರು. ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಪ್ರಕರಣವನ್ನು ವಿಶೇಷ ತನಿಖಾ ಸಂಸ್ಥೆಗೆ ವಹಿಸುವ ವರೆಗೂ ನಾವು ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಅಭಿಯಾನ ಆರಂಭಿಸಿದ್ದರು. ಒಂದೆಡೆ ಕಾರ್ಯಕರ್ತರ ಒತ್ತಡ, ಮತ್ತೊಂದೆಡೆ ಸುದ್ದಿ ಮಾಧ್ಯಮದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣವನ್ನು ಸಿಓಡಿ ತನಿಖೆಗೆ ವಹಿಸಿದ್ದಾರೆ.
Chief minister (CM) Siddaramaiah has directed the initiation of a CID (Criminal Investigation Department) probe into the Parashuram Theme Park issue in Karkala. The directive was issued on February 6, by the CM himself.The decision to launch the investigation comes in response to mounting concerns raised by numerous social activists and leaders from the Karkala Congress.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm