ಬ್ರೇಕಿಂಗ್ ನ್ಯೂಸ್
23-11-20 05:50 pm Udupi Correspondent ಕರಾವಳಿ
ಕುಂದಾಪುರ, ನ.23: ಇಲ್ಲಿನ ಎಂ ಕೋಡಿ ಬೀಚ್ ನಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಉತ್ತರ ಕರ್ನಾಟಕದ ನರಗುಂದ ತಾಲೂಕಿನ ಮಂಜು (38) ಎಂದು ಗುರುತಿಸಲಾಗಿದೆ. ಪತ್ನಿ ಜೊತೆ ಮಂಜು ಬೀಚ್‌ಗೆ ತೆರಳಿದ್ದು, ಈ ವೇಳೆ ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸಮುದ್ರದಲ್ಲಿ ಈಜಲು ಇಳಿದಿದ್ದರೆನ್ನಲಾಗಿದೆ. ಆದರೆ, ಅಲೆಗಳ ಅಬ್ಬರಕ್ಕೆ ಸಿಲುಕಿ ಮಂಜು ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದ ವ್ಯಕ್ತಿ ಮಂಜುವನ್ನು ರಕ್ಷಣೆ ಮಾಡಲು ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರಾದ ಹಸೈನಾರ್, ಝೈನ್, ನಾಗರಾಜ್ ಕೋಡಿ, ವೆಂಕಟೇಶ್ ಕೋಡಿ, ಸಲಾಂ ಎಂಬವರು ಇಬ್ಬರನ್ನೂ ದಡಕ್ಕೆ ಎಳೆತಂದಿದ್ದಾರೆ. ಆದರೆ ಅಷ್ಟರಲ್ಲಿ ಮಂಜು ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಇವರು ಕುಂದಾಪುರದ ಗಾಂಧಿ ಮೈದಾನದಲ್ಲಿ ವಾಸ ಮಾಡಿಕೊಂಡಿದ್ದರೆನ್ನಲಾಗಿದೆ.
‘ಎಂಕೋಡಿ ಬೀಚ್‌ನಲ್ಲಿ ಹಲವು ಮಂದಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿ ಸುರಕ್ಷತೆಗೆ ಸಂಬಂಧಿಸಿ ಯಾವುದೇ ಸರಿಯಾದ ವ್ಯವಸ್ಥೆಗಳಿಲ್ಲ. ಸರಕಾರ ಇದರತ್ತ ಗಮನ ಹರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
A man drowned in Kodi Beach in Kundupura. The deceased has been identified as Manju from Uttar Karnataka.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm