ಬ್ರೇಕಿಂಗ್ ನ್ಯೂಸ್
08-02-24 10:39 pm Udupi Correspondent ಕರಾವಳಿ
ಉಡುಪಿ, ಫೆ.8: ಪರಶುರಾಮ ಥೀಂ ಪಾರ್ಕ್ ಹೆಸರಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಿಓಡಿ ತನಿಖೆಗೆ ಆದೇಶ ಮಾಡಿರುವುದನ್ನು ಮಾಜಿ ಸಚಿವ, ಭ್ರಷ್ಟಾಚಾರದ ಆರೋಪಕ್ಕೀಡಾದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸ್ವಾಗತಿಸಿದ್ದಾರೆ.
ಈ ಬಗ್ಗೆ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಸುನಿಲ್ ಕುಮಾರ್, ಥೀಮ್ ಪಾರ್ಕ್ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.
"ಈ ಬಗ್ಗೆ ತನಿಖೆ ನಡೆಯಬೇಕೆಂದು ಆರು ತಿಂಗಳ ಹಿಂದೆಯೇ ನಾನು ಆಗ್ರಹಿಸಿದ್ದೆ. ಸರಕಾರ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸುವ ಜತೆಗೆ ಥೀಂ ಪಾರ್ಕ್ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಆದಷ್ಟು ಬೇಗ ಥೀಂ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಒತ್ತಾಯಿಸುತ್ತೇನೆ” ಎಂದು ಬರೆದಿದ್ದಾರೆ.
ಕಳೆದ ಆರು ತಿಂಗಳಿನಿಂದ ಪರಶುರಾಮ ಥೀಮ್ ಪಾರ್ಕ್ ಸಾರ್ವಜನಿಕ ಪ್ರವೇಶಕ್ಕೆ ನಿಷೇಧವಿದ್ದು ಪರಶುರಾಮನ ಮೂರ್ತಿಯನ್ನೇ ಅರ್ಧಕ್ಕೆ ಕೆಡವಿ ಸ್ಥಳಾಂತರ ಮಾಡಲಾಗಿದೆ. ಕಾಮಗಾರಿ ನಿರ್ವಹಿಸಿದ್ದ ನಿರ್ಮಿತಿ ಕೇಂದ್ರ ಕಾಮಗಾರಿ ಪೂರ್ತಿಗೊಳಿಸಲು ಎಂದು ಹೇಳಿದ್ದರೂ, ಮೇಲ್ನೋಟಕ್ಕೆ ಕಂಚಿನದ್ದೆಂದು ಹೇಳಿ ಫೈಬರ್ ಮೂರ್ತಿ ಸ್ಥಾಪಿಸಿರುವುದು ಪತ್ತೆಯಾಗಿತ್ತು. ಇದೇ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿಗೂ ಕಾರಣವಾಗಿತ್ತು. ಇದೀಗ ಮುಖ ಮುಚ್ಚಿಕೊಳ್ಳಲು ಸುನಿಲ್ ಕುಮಾರ್ ಸಿಓಡಿ ತನಿಖೆಯನ್ನು ಸ್ವಾಗತಿಸಿದ್ದಲ್ಲದೆ, ಸುಳ್ಳು ಆರೋಪಗಳಿಗೆ ವಿರಾಮ ಹಾಕಲು ತನಿಖೆ ನಡೆಸಬೇಕೆಂದು ಹೇಳಿ ಸರ್ಕಾರದ ತನಿಖೆಯನ್ನೇ ಅಣಕಿಸಿದ್ದಾರೆ.
CM Siddaramaiah orders CID probe into Parashuram Theme Park issue, MLA Sunil Kumar welcomes decision. Chief Minister Siddaramaiah has ordered a probe by the Criminal Investigation Department (CID) into the alleged corruption charges in the implementation of the Parashurama Theme Park Project at Bailoor in Karkala taluk of Udupi district.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am