ಬ್ರೇಕಿಂಗ್ ನ್ಯೂಸ್
09-02-24 03:12 pm Mangalore Correspondent ಕರಾವಳಿ
ಮಂಗಳೂರು, ಫೆ.9: ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ 40 ವರ್ಷಗಳಿಂದ ಹನುಮ ಧ್ವಜ ಹಾರಾಡುತ್ತಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾರನ್ನೋ ಮೆಚ್ಚಿಸಲು, ವೋಟ್ ಬ್ಯಾಂಕಿಗಾಗಿ ಹನುಮ ಧ್ವಜ ತೆರವುಗೊಳಿಸಿದ್ದಾರೆ. ಅದೇ ಜಾಗದಲ್ಲಿ ಹನುಮಧ್ವಜ ಮರುಸ್ಥಾಪನೆ ಮಾಡದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ, ಕೆರಗೋಡು ಚಲೋ ಮಾಡುತ್ತೇವೆ ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಮಂಡ್ಯದಲ್ಲಿ ಹನುಮ ಧ್ವಜ ತೆರವು ಖಂಡಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನೆ ನಡೆಯಿತು. ಶರಣ್ ಪಂಪ್ವೆಲ್ ನೇತೃತ್ವದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡಿ ಧರಣಿ ಮಾಡಲಾಯಿತು. ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು, ರಾಜ್ಯ ಸರಕಾರದ ಹನುಮ ವಿರೋಧಿ ಧೋರಣೆ ಖಂಡಿಸಿ ಮಂಡ್ಯ ಜಿಲ್ಲೆ ಇಂದು ಸಂಪೂರ್ಣ ಬಂದ್ ಆಗಿದೆ. ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುತ್ತಿದೆ. ಸರಕಾರದ ಈ ನೀತಿಯನ್ನು ವಿಶ್ವ ಹಿಂದು ಪರಿಷತ್, ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ ಎಂದರು.
ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ಮರುಸ್ಥಾಪನೆಗೆ ಅನುಮತಿ ನೀಡದೆ ಇದ್ದಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುತ್ತೇವೆ. ಹನುಮ ಧ್ವಜ ಮರು ಸ್ಥಾಪನೆಗೆ ಕೆರಗೋಡು ಚಲೋ ಹಮ್ಮಿಕೊಳ್ಳುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಕೆರಗೋಡು ಚಲೋ ಪ್ರತಿಭಟನೆಗೆ ರಾಜ್ಯದ ಎಲ್ಲಾ ಭಾಗದಿಂದ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಕೆರೆಗೋಡಿಗೆ ಬರಲಿದ್ದಾರೆ. ಕೆರಗೋಡು ಚಲೋ ಪ್ರತಿಭಟನೆ ಅಂಗವಾಗಿ ಅಲ್ಲಿ ನಾವೇ ಹನುಮದ್ವಜ ಹಾರಿಸಲಿದ್ದೇವೆ. ಮುಂದೆ ನಡೆಯುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಬೇಕು ಎಂದು ಹೇಳಿದರು.
ಶಾಸಕ ಹರೀಶ್ ಪೂಂಜ ಅವರು ಹಿಂದುಗಳ ತೆರಿಗೆ ಹಿಂದುಗಳ ಹಕ್ಕು ಎಂದು ವಿವಾದಾತ್ಮಕ ಪೋಸ್ಟ್ ಹಾಕಿದ್ದಕ್ಕೆ ಶರಣ್ ಪಂಪವೆಲ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ದೇಶ ರಾಮ ರಾಜ್ಯ ಆಗ್ಬೇಕು, ಎಲ್ಲರಿಗೂ ಸಮಾನತೆ ಸಿಗ್ಬೇಕು. ಬಿ.ಆರ್ ಅಂಬೇಡ್ಕರ್ ಅವರ ಸಂವಿಧಾನದ ಪ್ರಕಾರ ಎಲ್ಲವೂ ನಡೆಯಬೇಕು. ಈ ದೇಶದಲ್ಲಿ ಬಹುಸಂಖ್ಯಾತರು ಹೆಚ್ಚಿದ್ದಾರೆ. ಹಿಂದುಗಳು ಹೆಚ್ಚಿನ ಸಂಖ್ಯೆಯಲ್ಲಿ ತೆರಿಗೆ ಕಟ್ಟುತ್ತಿದ್ದಾರೆ. ಹಿಂದುಗಳ ತೆರಿಗೆ ಹಣವನ್ನು ಉಪಯೋಗಿಸಿ ಅಲ್ಪಸಂಖ್ಯಾತರಿಗೆ ಕೋಟಿ ಕೋಟಿ ಹಣ ನೀಡಲಾಗುತ್ತಿದೆ. ಅಲ್ಪಸಂಖ್ಯಾತರನ್ನು ಮೆಚ್ಚಿಸಲು ರಾಜ್ಯ ಸರಕಾರ ಕೋಟಿ ಕೋಟಿ ಹಣ ನೀಡುತ್ತಿದೆ. ಈ ಬಜೆಟ್ ನಲ್ಲಿ 10 ಸಾವಿರ ಕೋಟಿ ಹಣವನ್ನು ಮುಸಲ್ಮಾನ್ರಿಗೆ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಆಮೂಲಕ ಹಿಂದುಗಳಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ. ತೆರಿಗೆ ಹಣವನ್ನು ಎಲ್ಲರಿಗೂ ಒಂದೇ ರೀತಿಯಲ್ಲಿ ಹಂಚಬೇಕು ಎಂದು ಶರಣ್ ಪಂಪವೆಲ್ ಹೇಳಿದರು.
Condemning the removal of the Hanuman flag by the authorities, the Hindu organisations are observing a protest in Karnataka on Friday.The authorities have also beefed up security in Mandya district.The shops and establishments in Mandya district mostly remained closed in the backdrop of protest. The police have also tightened the security at the residence of Congress MLA Ganiga Ravi.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm