ಬ್ರೇಕಿಂಗ್ ನ್ಯೂಸ್
12-02-24 02:08 pm Mangalore Correspondent ಕರಾವಳಿ
ಮಂಗಳೂರು, ಫೆ.12: ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆಯಾಗಲೀ, ಲೋಕಸಭಾ ಕ್ಷೇತ್ರಗಳ ಟಿಕೆಟ್ ಯಾರಿಗೆ ನೀಡಬೇಕೆಂಬುದರ ಬಗ್ಗೆ ನಿಮಗೆ ಚಿಂತೆ ಬೇಡ. ಅದನ್ನು ನಾವು ನೋಡಿಕೊಳ್ಳುತ್ತೇವೆ. ಎಲ್ಲ 28 ಕ್ಷೇತ್ರಗಳನ್ನೂ ಗೆಲ್ಲುವ ಟಾಸ್ಕ್ ಮಾತ್ರ ಪೂರ್ಣಗೊಳಿಸಲು ಗಮನ ಕೊಡಿ ಎಂದು ಅಮಿತ್ ಶಾ ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಒಂದು ದಿನದ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ಅವರು, ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ಬಿಜೆಪಿ ಮುಖಂಡರೊಂದಿಗೆ ಕೋರ್ ಕಮಿಟಿ ಸಭೆ ನಡೆಸಿದರು. ಪಕ್ಷದ ಪ್ರಮುಖರು ಭಾಗಿಯಾಗಿದ್ದ ಈ ಸಭೆಯಲ್ಲಿ ಹೈಕಮಾಂಡ್‌ನ ಕಾರ್ಯಸೂಚಿ ಬಗ್ಗೆ ಸಂದೇಶ ನೀಡಿದ ಅಮಿತ್ ಶಾ, ಅಭ್ಯರ್ಥಿಗಳ ಆಯ್ಕೆಯ ಚಿಂತೆಯನ್ನು ಹೈಕಮಾಂಡ್‌ಗೆ ಬಿಡಿ. ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲುವ ಟಾಸ್ಕ್ ಪೂರ್ಣಗೊಳಿಸಲು ಓಡಾಟ ಶುರು ಮಾಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ.
ಇಡೀ ದೇಶದಲ್ಲಿ ಮೋದಿ ಸರ್ಕಾರದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಮಮಂದಿರ ಉದ್ಘಾಟನೆ ಬಳಿಕ ಪಕ್ಷದ ಪರವಾದ ಅಲೆ ಹೆಚ್ಚಾಗಿದೆ. ಹಾಗಾಗಿ ಹಿಂದಿನ ಎಲ್ಲ ದಾಖಲೆಗಳನ್ನು ಮುರಿಯುವ ನಿಟ್ಟಿನಲ್ಲಿ ಎಲ್ಲ 28 ಕ್ಷೇತ್ರಗಳಲ್ಲೂ ಜಯ ದಾಖಲಿಸಬೇಕು ಎಂಬ ಸೂಚನೆ ಕೊಟ್ಟರು. ಮೂರನೇ ಬಾರಿಗೆ ನರೇಂದ್ರ ಮೋದಿ ಅವರನ್ನು ಪ್ರಧಾನ ಮಂತ್ರಿಯಾಗಿಸಬೇಕು, ದೇಶದಲ್ಲಿ ಬಿಜೆಪಿ 400 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ, ರಾಜ್ಯದಲ್ಲಿಯೂ 28 ಅಭ್ಯರ್ಥಿಗಳನ್ನು ಗೆಲ್ಲಿಸಿ ಹೊಸ ದಾಖಲೆ ಬರೆಯಿರಿ ಎಂದು ಅಮಿತ್ ಶಾ ಸೂಚನೆ ನೀಡಿದ್ದಾರೆ.
ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರಗಳಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸಿ. ಆಮೂಲಕ ಅವುಗಳನ್ನು ಬಿಜೆಪಿ ಮತಗಳನ್ನಾಗಿ ಪರಿವರ್ತಿಸಲು ನಿಗಾವಹಿಸಿ ಎಂದು ಮುಖಂಡರಿಗೆ ಅಮಿತ್ ಶಾ ಟಾಸ್ಕ್ ನೀಡಿದ್ದಾರೆ.
ಮೈಸೂರು ಕ್ಲಸ್ಟರ್ ಮಟ್ಟದ ಸಭೆಯಲ್ಲಿ ಮೈಸೂರು–ಕೊಡಗು, ಚಾಮರಾಜನಗರ, ಹಾಸನ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಶಾಸಕರು, ಪರಿಷತ್ ಸದಸ್ಯರು, ಪಕ್ಷದ ಮುಖಂಡರು ಸೇರಿ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡರು. ಈ ಭಾಗದಲ್ಲಿ ಕಾಂಗ್ರೆಸ್ ಶಾಸಕರು ಹೆಚ್ಚಿದ್ದು, ಬಿಜೆಪಿಗೆ ಎದುರಾಗಬಹುದಾದ ಸವಾಲುಗಳು ಮತ್ತು ಅದನ್ನು ಎದುರಿಸುವ ಕುರಿತು ಶಾ ಮುಖಂಡರಿಗೆ ಕಿವಿಮಾತು ಹೇಳಿದರು.
ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರದ ಮಾನ ಕಳೆಯುವ ಪ್ರಯತ್ನ ನಡೆಸಿದ ಕಾಂಗ್ರೆಸ್‌ಗೆ ಅವರದ್ದೇ ಹಾದಿಯಲ್ಲಿ ತಿರುಗೇಟು ನೀಡಬೇಕು. ಕಳೆದ ಹತ್ತು ವರ್ಷದಲ್ಲಿ ಕರ್ನಾಟಕಕ್ಕೆ ಕೇಂದ್ರ ನೀಡಿರುವ ಅನುದಾನವನ್ನು ಅಂಕಿ–ಅಂಶ ಸಮೇತ ಜನರ ಮುಂದಿರಿಸಬೇಕು. ಬಿಜೆಪಿ– ಜೆಡಿಎಸ್ ಮೈತ್ರಿಕೂಟವು ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲಬೇಕು ಎಂದು ಸೂಚನೆ ನೀಡಿದ್ದಾರೆ.
ಪ್ರಚಾರದ ರೋಡ್ ಮ್ಯಾಪ್ ಕುರಿತು ರಾಜ್ಯ ಮುಖಂಡರಿಂದ ಮಾಹಿತಿ ಪಡೆದ ಅಮಿತ್ ಷಾ, ಕೆಲವು ಸೂಚನೆಗಳನ್ನು ನೀಡಿದರು. ಜೆಡಿಎಸ್‌ಗೆ ಕ್ಷೇತ್ರಗಳನ್ನು ಬಿಟ್ಟುಕೊಡುವ ಬಗ್ಗೆ ಹಾಗೂ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆ ನಡೆಯಲಿಲ್ಲ. ಆದರೆ, ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.
Mangalore 28 constituency winning is our agenda says Amith Shah. There is not need to worry about JDS merger and seats during the meeting held.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 10:14 pm
Mangalore Correspondent
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
Akanksha Death, Punjab, Dharmasthala, Mangalo...
18-05-25 12:42 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm