ಬ್ರೇಕಿಂಗ್ ನ್ಯೂಸ್
12-02-24 07:13 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.12: ಡ್ರಾಯಿಂಗ್ ಶಿಕ್ಷಕನೊಬ್ಬ ತನ್ನ ಬಗ್ಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಸಾವಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದು ಧರ್ಮಸ್ಥಳ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ವಾರದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಮೃತಪಟ್ಟಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಧರ್ಮಸ್ಥಳದ ನಿವಾಸಿ 16 ವರ್ಷದ ಹುಡುಗಿ ಮೃತ ವಿದ್ಯಾರ್ಥಿನಿ. ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಬೇರೊಬ್ಬ ವಿದ್ಯಾರ್ಥಿನಿಗೆ ಅವಮಾನ ಆಗುವ ರೀತಿಯಲ್ಲಿ ಮೆಸೇಜ್ ಮಾಡಿದ್ದ. ಈ ಬಗ್ಗೆ ಆಕೆ ವಿಷಯವನ್ನು ವಿದ್ಯಾರ್ಥಿನಿಗೆ ತಿಳಿಸಿದ್ದಳು. ಇದರಿಂದ ನೊಂದ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಳು. ಮರುದಿನ ತಾಯಿ ಜೊತೆ ಹೋಗಿ ವಿದ್ಯಾರ್ಥಿನಿ ವಿಚಾರಿಸಿದ್ದಾಳೆ.
ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಾಣ ಅಂಗಡಿಯಿಂದ ಖರೀದಿಸಿ ತಂದಿದ್ದಾಳೆ ಎನ್ನಲಾಗಿದೆ. ಶಾಲೆಯಲ್ಲಿ ಬಿಸ್ಕೆಟ್ ಜೊತೆ ಇಲಿ ಪಾಷಾಣ ಪೇಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದು ಪ್ರಜ್ಞೆ ಕಳಕೊಂಡಿದ್ದಳು. ತಕ್ಷಣ ಶಾಲೆಯ ಶಿಕ್ಷಕರು ಆಕೆಯನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಮೇರೆಗೆ IPC 354D, 509, POSO Act 12 , 75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ರೂಪೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
Drawing teacher valgur messages to student, students dies committing Rat poison at Belthangady Dharmasthala.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm