ಬ್ರೇಕಿಂಗ್ ನ್ಯೂಸ್
12-02-24 07:43 pm Mangalore Correspondent ಕರಾವಳಿ
ಮಂಗಳೂರು, ಫೆ.12: ಹಿಂದು ದೇವರ ಅವಹೇಳನ ಆರೋಪದ ಹಿನ್ನೆಲೆಯಲ್ಲಿ ಇಡೀ ದಿನ ಪೋಷಕರ ಧರಣಿ, ಶಾಸಕ ವೇದವ್ಯಾಸ ಕಾಮತ್ ಧಿಕ್ಕಾರದ ಕೂಗು, ತೀವ್ರ ಹೋರಾಟದ ಎಚ್ಚರಿಕೆ ಬೆನ್ನಲ್ಲೇ ಬಿಸಿ ತಟ್ಟಿಸಿಕೊಂಡ ಜಿಲ್ಲಾಡಳಿತ ಶಾಲಾಡಳಿತ ಮಂಡಳಿಯ ಜೊತೆಗೆ ಮಾತುಕತೆ ನಡೆಸಿ ಆರೋಪಿತ ಶಿಕ್ಷಕಿಯನ್ನು ವಜಾಗೊಳಿಸುವ ನಿರ್ಧಾರಕ್ಕೆ ಬಂದಿದೆ.
ಈ ಬಗ್ಗೆ ವೆಲೆನ್ಸಿಯಾದ ಜೆರೋಸಾ ಶಿಕ್ಷಣ ಸಂಸ್ಥೆಯವರು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಆರೋಪಿತ ಸಿಸ್ಟರ್ ಪ್ರಭಾ ಅವರನ್ನು ತಕ್ಷಣದಿಂದ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಆ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಕ ಮಾಡಲಾಗುವುದು. ಜಿಲ್ಲಾ ಮಟ್ಟದ ಅಧಿಕಾರಿಗಳ ತನಿಖೆಗೆ ನಾವು ಸಹಕರಿಸುತ್ತೇವೆ. ಸದರಿ ತನಿಖೆಯ ಅಂತಿಮ ಆದೇಶಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಶಾಲೆಯ ಪರವಾಗಿ ಮುಖ್ಯ ಶಿಕ್ಷಕಿ ಅನಿತಾ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಈ ಘಟನೆ ದುರದೃಷ್ಟಕರವಾಗಿದ್ದು, ನಮ್ಮ ಮತ್ತು ಪೋಷಕರ ಮಧ್ಯೆ ಅಪನಂಬಿಕೆಯನ್ನು ಸೃಷ್ಟಿಸಿದೆ. ನಾವು ಎಲ್ಲ ಧರ್ಮಗಳು, ನಂಬಿಕೆಗಳನ್ನು ಸಮಾನವಾಗಿ ಸ್ವೀಕರಿಸುತ್ತೇವೆ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರ ಸಹಕಾರವನ್ನು ಬಯಸುತ್ತೇವೆ. ಜೆರೋಸಾ ಶಿಕ್ಷಣ ಸಂಸ್ಥೆಗೆ 60 ವರ್ಷಗಳ ಇತಿಹಾಸವಿದ್ದು, ಈವರೆಗೆ ಇಂತಹ ಘಟನೆ ನಡೆದಿಲ್ಲ ಎಂದವರು ಹೇಳಿದ್ದಾರೆ. ಸಂಜೆಯ ವೇಳೆಗೆ ಶಾಸಕ ವೇದವ್ಯಾಸ ಕಾಮತ್, ಶಾಲಾಡಳಿತ ಮಂಡಳಿ ಸದಸ್ಯರು ಮತ್ತು ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿಗೆ ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ ಇಲ್ಲಿಯೇ ಧರಣಿ ನಡೆಸುತ್ತೇನೆ ಎಂದು ಬೆದರಿಕೆ ಒಡ್ಡಿದ್ದರು. ಹೀಗಾಗಿ ಜಿಲ್ಲಾಧಿಕಾರಿ ಅಲ್ಲಿ ಸೇರಿದ್ದವರನ್ನು ಸಮಾಧಾನ ಪಡಿಸಿ ಪೊಲೀಸ್ ಕಮಿಷನರ್ ಜೊತೆಗೆ ಶಾಲೆಯ ಒಳಗಡೆ ಹೋಗಿ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಸಂಜೆ 4.30ರಿಂದ 6.45ರ ವರೆಗೂ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತುಕತೆ ನಡೆಸಿದ್ದಾರೆ. ಬಳಿಕ ಹೊರಬಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಪ್ರಕರಣದ ತನಿಖೆಗೆ ಎಲ್ಲರೂ ಸಹಕರಿಸಬೇಕು. ಆದಷ್ಟು ತ್ವರಿತವಾಗಿ ತನಿಖೆ ನಡೆಸುತ್ತೇವೆ. ಶಿಕ್ಷಕಿ ವಿರುದ್ಧ ಶಾಲಾಡಳಿತ ಮಂಡಳಿ ಸದಸ್ಯರು ಕ್ರಮ ತೆಗೆದುಕೊಂಡಿದ್ದಾರೆ. ಮಕ್ಕಳ ಶಿಕ್ಷಣದ ದೃಷ್ಟಿಯಿಂದ ಎಲ್ಲ ಪೋಷಕರು ಸಹಕಾರ ನೀಡಬೇಕು ಎಂದು ಹೇಳಿದ್ದಾರೆ. ಸುದೀರ್ಘ ಮಾತುಕತೆಯಾದರೂ, ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವ ಆದೇಶ ಬರದೇ ಇದ್ದುದರಿಂದ ಸಂಜೆ 6 ಗಂಟೆಯಾಗುತ್ತಿದ್ದಂತೆ ಮತ್ತೆ ಪೋಷಕರು ಶಾಲೆಯ ಆವರಣದಲ್ಲಿ ಸೇರಿದ್ದರು. ಜಿಲ್ಲಾಧಿಕಾರಿ ಮತ್ತು ಶಾಲೆಯ ಮುಖ್ಯ ಶಿಕ್ಷಕಿ ಹೊರಬಂದು ಹೇಳಿಕೆ ನೀಡುತ್ತಿದ್ದಂತೆ, ಪೋಷಕರು ಜೈಕಾರ ಕೂಗಿ ಸ್ಥಳದಿಂದ ನಿರ್ಗಮಿಸಿದ್ದಾರೆ.
Mangalore Jeppu Gerosa School controversy, Teacher dismissed from school after protest from parents. Finally the school HeadMinister Anitha confirmed the media that teacher Prabha has been dismissed from the school.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm