ಬ್ರೇಕಿಂಗ್ ನ್ಯೂಸ್
13-02-24 12:23 pm Mangalore Correspondent ಕರಾವಳಿ
ಮಂಗಳೂರ, ಫೆ.13: ಸೈಂಟ್ ಜೆರೋಸಾ ಶಾಲೆಯ ಸಿಸ್ಟರ್ ಹಿಂದು ಧರ್ಮ ನಿಂದನೆ ಮಾಡಿದ್ದರೆ ಅದರ ಮೇಲೆ ಕ್ರಮ ಆಗಲಿ, ಶಿಕ್ಷೆಯೂ ಆಗಲಿ. ಅದಕ್ಕೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದರದ್ದೇ ಆದ ಕ್ರಮ, ನಿಯಮಗಳಿವೆ. ಆ ಪ್ರಕಾರ ತನಿಖೆ ನಡೆದು ಅಪರಾಧ ಸಾಬೀತಾದರೆ ಶಿಕ್ಷೆ ವಿಧಿಸುವುದು ಸರಿಯಾದ ವಿಧಾನ. "ಬೀದಿ ನ್ಯಾಯ" ವಿಧಿಸಲು ಇದು ಅರಾಜಕ ದೇಶ ಅಲ್ಲ, ಸರ್ವಾಧಿಕಾರಿಗಳ ನಾಡೂ ಅಲ್ಲ. ಶಾಸಕರಾದವರಿಗೆ ಈ ಜ್ಞಾನ ಇರಬೇಕು. ಶಾಸಕ ವೇದವ್ಯಾಸ ಕಾಮತ್ ಇದನ್ನೆಲ್ಲ ಧಿಕ್ಕರಿಸಿ ಶಾಲೆಗೆ ಮುತ್ತಿಗೆ ಹಾಕಿ ಗೂಂಡಾಗಿರಿ ಮೆರೆದಿರುವುದು ಆಘಾತಕಾರಿ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಅದರಲ್ಲೂ ಪ್ರಾಥಮಿಕ ಶಾಲೆಯ ಮುಗ್ಧ ವಿದ್ಯಾರ್ಥಿಗಳನ್ನು ತಮ್ಮದೇ ಶಾಲೆಯ ವಿರುದ್ದ ಮುತ್ತಿಗೆಗೆ ಬಳಸಿರುವುದು, ಧಾರ್ಮಿಕ ಘೋಷಣೆಗಳನ್ನು ಕೂಗಿಸಿರುವುದು ನಾಚಿಕೆಗೇಡಿನ ಕೃತ್ಯ. ಶಾಸಕನಿಗಿರಬೇಕಾದ ಕನಿಷ್ಟ ಪ್ರಜ್ಞೆ, ಸಮಾಜದ ಭವಿಷ್ಯದ ಕುರಿತು ಕಾಳಜಿ ವೇದವ್ಯಾಸ ಕಾಮತರಿಗೆ ಇಲ್ಲ ಎಂಬುದು ಇಂದಿನ ಘಟನೆಯಿಂದ ಸಾಬೀತಾಗಿದೆ. ಮಂಗಳೂರಿನ ಸಾಮಾನ್ಯ, ಕಡಿಮೆ ಆದಾಯದ ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಡಕಾಗಿರುವ ಡೊನೇಷನ್ ಹಾವಳಿ, ದುಬಾರಿ ಫೀಸು, ನಿಯಮ ಬಾಹಿರ ಶಿಕ್ಷಣ ವ್ಯವಸ್ಥೆಯ ಕುರಿತು ವಿಧಾನ ಸಭೆಯಲ್ಲಿ ಧ್ವನಿ ಎತ್ತಬೇಕಿದ್ದ ಶಾಸಕರು, ಅದರ ಬದಲಿಗೆ ಅಧಿವೇಶನ ತೊರೆದು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯೊಂದರ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು, ಮತೀಯ ಭಾವನೆ ಕೆರಳಿಸಲು ಪ್ರಕರಣವನ್ನು ಬಳಸುತ್ತಿರುವುದು ಖಂಡನೀಯ.
ಇದರ ಹಿಂದೆ ಲೋಕಸಭಾ ಚುನಾವಣೆಯ ಸಿದ್ದತೆ ಇರುವುದು ಸ್ಪಷ್ಟ. ಜಿಲ್ಲಾಡಳಿತ, ಸರಕಾರ ಇಂತಹ ಗೂಂಡಾಗಿರಿಯನ್ನು ಸಹಿಸಬಾರದು, ಕಾನೂನಿನ ಪಾಠ, ಜವಾಬ್ದಾರಿಯನ್ನು ಶಾಸಕರಿಗೆ ಮನವರಿಕೆ ಮಾಡಿಕೊಡಬೇಕು, ಹಿಂಸೆಗೆ ಪ್ರಚೋದಿಸುವ, ಗೂಂಡಾಗಿರಿ ಮೆರೆದಿರುವ ಶಾಸಕ ವೇದವ್ಯಾಸ ಕಾಮತರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ ಸಮಿತಿ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Mangalore Jeppu Gerosa school controversy, Muneer Katipalla slams Vedavyas Kamath over his behaviour at school premises. Mla was found shouting slogans along with little school students.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 07:00 pm
Mangalore Correspondent
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
Dharmasthala Case, FIR YouTuber MD Sameer: ಧರ...
12-07-25 11:00 pm
Mangalore Accident, Bolero, Deralakatte: ದೇರಳ...
12-07-25 10:26 pm
Gas Leak at MRPL, Mangalore, death: ಎಂಆರ್ ಪಿಎ...
12-07-25 01:42 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm