ಬ್ರೇಕಿಂಗ್ ನ್ಯೂಸ್
15-02-24 11:07 pm Mangaluru Correspondent ಕರಾವಳಿ
ಮಂಗಳೂರು, ಫೆ.15: ನಗರ ಹೊರವಲಯದ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಫ.17ರಂದು ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಕರಾವಳಿಯಿಂದಲೇ ರಣಕಹಳೆ ಮೊಳಗಲಿದೆ.
ಮೊದಲ ಬಾರಿಗೆ ಚುನಾವಣೆಗೆ ಒಂದು ತಿಂಗಳಿರುವಾಗ, ಗಾಂಧಿ ಕುಟುಂಬ ಸದಸ್ಯರಿಲ್ಲದೆ ಕಾಂಗ್ರೆಸ್ ಪಕ್ಷ ಕಾರ್ಯಕರ್ತರನ್ನು ಸೆಳೆಯಲು ಮುಂದಾಗಿದೆ. ಸಭೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಲು ಪಕ್ಷದ ಜಿಲ್ಲಾ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಸ್ಕ್ ನೀಡಿದ್ದಾರೆ. ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ಇತ್ತೀಚೆಗೆ ಮಂಗಳೂರಿಗೆ ಬಂದಿದ್ದ ಡಿಕೆ ಶಿವಕುಮಾರ್, ಸಭೆಯಲ್ಲಿ ಎಲ್ಲ ಸಚಿವರು, ಶಾಸಕರು ಕೂಡ ಪಾಲ್ಗೊಳ್ಳಲಿದ್ದಾರೆ ಎಂದಿದ್ದರು. ಆದರೆ ಸಭೆಯಲ್ಲಿ ಹೆಚ್ಚು ಜನ ಸೇರಿಸುವುದು ಜಿಲ್ಲಾ ನಾಯಕರಿಗೆ ಟಾಸ್ಕ್ ಆಗಿರತ್ತೆ. ನಾವು ಬೇರೆ ಜಿಲ್ಲೆಗಳಲ್ಲಿ ಹೆಚ್ಚು ಜನ ಸೇರಿಸುತ್ತೇವೆ. ನಮಗೆ ಹೆಚ್ಚು ಬಲ ಇಲ್ಲ ಎಂದು ವಿರೋಧಿಗಳು ಹೇಳುವ ಕರಾವಳಿಯಲ್ಲೇ ಅತಿ ಹೆಚ್ಚು ಜನರನ್ನು ನಾವು ತೋರಿಸಬೇಕಾಗಿದೆ ಎಂದು ಜಿಲ್ಲೆಯ ನಾಯಕರಿಗೆ ಸೂಚನೆ ನೀಡಿದ್ದರು.
ಸಭೆಯ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮಾಜಿ ಸಚಿವ, ಸಭೆಯ ಪ್ರಚಾರ ಸಮಿತಿ ಅಧ್ಯಕ್ಷ ರಮಾನಾಥ ರೈ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ನೀಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿಯವರು ಹೇಳಿದ್ದರು. ನಾವು ನುಡಿದಂತೆ ಐದು ಗ್ಯಾರಂಟಿಗಳನ್ನೂ ನೀಡಿದ್ದೇವೆ. ಗ್ಯಾರಂಟಿ ಯೋಜನೆಗಳೆಲ್ಲ ಜನಸಾಮಾನ್ಯರಿಗೆ ತಲುಪಿದೆ ಎನ್ನುವುದಕ್ಕೆ ಹೆಮ್ಮೆಯಾಗುತ್ತದೆ. ಹಾಗಾಗಿ ಈ ಬಾರಿ ಜನರು ಕಾಂಗ್ರೆಸ್ ಕೈಹಿಡಿಯುತ್ತಾರೆ ಎಂಬ ಭರವಸೆ ಇದೆ. ಬಿಜೆಪಿಯವರು ವಿರೋಧ ಪಕ್ಷ ಇಲ್ಲದಂತೆ ಮಾಡುತ್ತೇವೆ ಎಂಬ ಕನಸಿನಲ್ಲಿದ್ದಾರೆ. ಹಿಂದೆ ಇಂದಿರಾ ಕಾಲದಲ್ಲಿಯೂ ಇಂತಹದ್ದೇ ಸ್ಥಿತಿಯಿತ್ತು. ಕಾಲ ಕಾಲಕ್ಕೆ ಜನರು ತೀರ್ಪು ನೀಡುತ್ತಾರೆ, ಯಾವುದೂ ಶಾಶ್ವತವಲ್ಲ ಎಂದರು.
ನೀವು ಪ್ರತಿ ಬಾರಿಯೂ ಕೊನೆಕ್ಷಣದಲ್ಲಿ ಅಭ್ಯರ್ಥಿ ಘೋಷಿಸಿ ಸೋಲುತ್ತೀರಿ, ಸೋಲಿನ ಸರಪಣಿ ಕಡಿದುಕೊಳ್ಳಲು ಯಾವ ಪ್ರಯತ್ನ ಮಾಡಿದ್ದೀರಿ ಎಂದು ಕೇಳಿದ ಪ್ರಶ್ನೆಗೆ, ಅದಕ್ಕೆ ನಮ್ಮದೇ ಆದ ಪ್ರಯತ್ನ ಮಾಡಿದ್ದೇವೆ, ಪಕ್ಷ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಅವಿಭಜಿತ ಜಿಲ್ಲೆ ನಮ್ಮದು. ಎರಡೂ ಜಿಲ್ಲೆಯನ್ನು ಗೆಲ್ಲುವುದು ನಮ್ಮ ಗುರಿ. ಅದಕ್ಕಾಗಿ ಎರಡೂ ಜಿಲ್ಲೆಯ ಜನರನ್ನು ಸೇರಿಸಿ ರಾಜ್ಯ ಮಟ್ಟದ ಸಮಾವೇಶ ಮಾಡುತ್ತಿದ್ದೇವೆ ಎಂದು ಹೇಳಿದರು.
Mallikarjun Kharge will visit Mangalore for the Congress mega event on February 17 at Shayadri College grounds.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 05:22 pm
Mangalore Correspondent
Akanksha Suicide, Dharmasthala, Mangalore: ಏರ...
19-05-25 12:31 pm
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm