ಬ್ರೇಕಿಂಗ್ ನ್ಯೂಸ್
16-02-24 07:29 pm Mangalore Correspondent ಕರಾವಳಿ
ಮಂಗಳೂರು, ಫೆ.16: ತುಳು ಭಾಷೆಯನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಈಗಾಗಲೇ ಕೇರಳ ಮತ್ತು ಕರ್ನಾಟಕ ಮುಖ್ಯಮಂತ್ರಿಗಳಿಗೆ ಹತ್ತು ಸಾವಿರಕ್ಕೂ ಹೆಚ್ಚು ತುಳುವರು ಪತ್ರ ಬರೆದಿದ್ದಾರೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿಗೆ ಬರುತ್ತಿದ್ದು, ಅವರನ್ನು ಮುಖತಃ ಭೇಟಿಯಾಗಿ ಈ ಆಗ್ರಹವನ್ನು ಮಾಡಲಾಗುವುದು. ತುಳು ಚಿತ್ರರಂಗದ ಪ್ರಮುಖರು, ತುಳು ಭಾಷೆಯ ಹೋರಾಟಗಾರರು ಜೊತೆಯಾಗಿ ಏರ್ಪೋರ್ಟ್ ನಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗುತ್ತೇವೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳು ಭಾಷೆಯನ್ನು ಕರಾವಳಿಯ ಮೂರು ಜಿಲ್ಲೆಗಳಲ್ಲಿ ನೇರವಾಗಿ 40 ಲಕ್ಷಕ್ಕೂ ಹೆಚ್ಚು ಜನ ಮಾತನಾಡುತ್ತಾರೆ. ವ್ಯಾವಹಾರಿಕ ನೆಲೆಯಲ್ಲಿ ಮಂಗಳೂರು, ಕಾಸರಗೋಡು, ಮುಂಬೈ, ಬೆಂಗಳೂರು ಹೀಗೆ ಎಲ್ಲ ಕಡೆಯೂ ತುಳುವರಿದ್ದು, ಒಂದೂವರೆ ಕೋಟಿಗೂ ಹೆಚ್ಚು ಜನರು ಮಾತನಾಡುತ್ತಾರೆ. ಒಂದೆರಡು ಲಕ್ಷದಷ್ಟು ಜನರು ಮಾತನಾಡುವ ಭಾಷೆಗಳನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಿದ್ದಾರೆ. 99 ಭಾಷೆಗಳು ಸೇರ್ಪಡೆಯಾಗಲು ಸಾಲಿನಲ್ಲಿದ್ದು, ಅದರಲ್ಲಿ ತುಳು ಕೂಡ ಒಂದು.
ಆದರೆ, ತುಳು ಭಾಷೆಯನ್ನು ಆಯಾ ರಾಜ್ಯದಲ್ಲಿ ಅಧಿಕೃತ ಭಾಷೆಯಾಗಿ ಮಾಡಿದರೆ, ಸಂವಿಧಾನಕ್ಕೆ ಸೇರ್ಪಡೆಯಾಗಲು ಒಂದು ಹೆಜ್ಜೆ ಮುಂದಿಟ್ಟಂತಾಗುತ್ತದೆ. ಅಧಿಕೃತ ಭಾಷೆಯ ಮಾನ್ಯತೆ ನೀಡುವುದರಿಂದ ಯಾವುದೇ ಖರ್ಚು ಬೇಕಾಗುವುದಿಲ್ಲ. ಬೇರೆ ರಾಜ್ಯಗಳಲ್ಲಿ ಮಾಡಿರುವಂತೆ ಕರ್ನಾಟಕದಲ್ಲಿಯೂ ಮಾಡಬೇಕೆಂದು ನಾವು ಒತ್ತಾಯ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನಾವು ಮನವಿ ನೀಡಲಿದ್ದೇವೆ ಎಂದು ತಿಳಿಸಿದರು.
ತುಳುನಾಡ ರಕ್ಷಣಾ ವೇದಿಕೆಯ ಯೋಗೀಶ್ ಶೆಟ್ಟಿ ಜೆಪ್ಪು ಮಾತನಾಡಿ, ತುಳು ಭಾಷೆಯನ್ನು ಇದಕ್ಕೂ ಮೊದಲೇ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕಿತ್ತು. ನಮ್ಮಲ್ಲಿ ಮೂರು ಜಿಲ್ಲೆಗಳ ಸಂಸದರು, ತುಳುವನ್ನೇ ಮಾತನಾಡುವ ಸಾಕಷ್ಟು ಮಂದಿ ಶಾಸಕರಿದ್ದಾರೆ. ಸೂಕ್ತ ಪ್ರಯತ್ನದ ಕೊರತೆ ಮತ್ತು ನಿರ್ಲಕ್ಷ್ಯದಿಂದಾಗಿ ಈ ಸ್ಥಿತಿಯಾಗಿದೆ. ಇನ್ನಾದರೂ ನಾವು ಒತ್ತಡ ಹಾಕದೇ ಇದ್ದರೆ, ತುಳು ಭಾಷೆಗೆ ಗೌರವ ಸಿಗುವುದಿಲ್ಲ. ನಾವೆಲ್ಲ ಸೇರಿ ಹಕ್ಕೊತ್ತಾಯ ಮಾಡಬೇಕಾಗಿದೆ ಎಂದು ಹೇಳಿದರು. ಈ ಭಾಗದ ಶಾಸಕರನ್ನು ಕರೆದಿದ್ದೀರಾ ಎಂಬ ಪ್ರಶ್ನೆಗೆ, ಅವರನ್ನು ಯಾಕೆ ಕರೆಯಬೇಕು. ಅವರು ವಿಧಾನಸಭೆಯಲ್ಲಿ ಈ ಬಗ್ಗೆ ಪ್ರಶ್ನೆ ಮಾಡಬೇಕು ಎಂದರು. ದಲಿತ ಹೋರಾಟಗಾರ ಲೋಲಾಕ್ಷ, ಎಸ್ ವಿಎಸ್ ಉಳ್ಳಾಲ ಇದ್ದರು.
"We are in a fight to make the Tulu language official. Regarding this, we had written letters to our Prime Minister, chief minister of Karnataka and Kerala. Chief minister Siddaramaiah had called everyone to Bengaluru, and we got information that on February 17, he is coming to Mangaluru for the Congress convention event.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 05:22 pm
Mangalore Correspondent
Akanksha Suicide, Dharmasthala, Mangalore: ಏರ...
19-05-25 12:31 pm
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm