ಬ್ರೇಕಿಂಗ್ ನ್ಯೂಸ್
17-02-24 03:55 pm Mangalore Correspondent ಕರಾವಳಿ
ಮಂಗಳೂರು, ಫೆ.17: ಜೆರೋಸಾ ಶಾಲೆಯ ಘಟನೆ ಬಗ್ಗೆ ವಿಶೇಷ ತನಿಖೆಗಾಗಿ ಶಿಕ್ಷಣ ಇಲಾಖೆಯ ಗುಲ್ಬರ್ಗ ವಿಭಾಗದ ಅಪರ ಆಯುಕ್ತ, ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಶಾಸಕರು ನಡೆದುಕೊಂಡ ರೀತಿಯನ್ನು ಎಲ್ಲರೂ ನೋಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ತಲೆತಗ್ಗಿಸುವಂತೆ ಮಾಡಿದ್ದಾರೆ. ಮಕ್ಕಳನ್ನು, ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿರುವುದು ಒಳ್ಳೆದಲ್ಲ. ಎಫ್ಐಆರ್ ಹಿಂತೆಗೆಯಲು ಆಗಲ್ಲ, ದೂರಿನ ಬಗ್ಗೆ ತನಿಖೆ ಆಗುತ್ತೆ. ತಪ್ಪು ಸಾಬೀತಾದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.
ಶಿಕ್ಷಕಿಯ ವಿರುದ್ಧ ಶಿಕ್ಷಣ ಇಲಾಖೆಯವರು ತನಿಖೆ ಮಾಡುತ್ತಾರೆ. ಪೊಲೀಸರು ಮಾಡೋದಲ್ಲ, ಹಾಗಾಗಿ ಎಫ್ಐಆರ್ ದಾಖಲು ಮಾಡಿಲ್ಲ. ಯಾರು ತಪ್ಪು ಮಾಡಿದರೂ ತನಿಖೆಯಲ್ಲಿ ತಿಳಿದು ಬರುತ್ತದೆ ಎಂದು ಶಿಕ್ಷಕಿ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಈ ಘಟನೆಯಿಂದ ಜಿಲ್ಲೆಗೆ ಡ್ಯಾಮೇಜ್ ಆಗಿದೆ. ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಶಾಲೆಯೆದುರು ಗೂಂಡಾಗಿರಿ ಮೆರೆದಿದ್ದಾರೆ. ರಾಜಕೀಯ ಸ್ವಾರ್ಥಕ್ಕಾಗಿ ಧರ್ಮದ ಹೆಸರಲ್ಲಿ ಪ್ರಚೋದನೆ ನೀಡಿದ್ದಾರೆ. ಹೊರಗಿನ ಜನ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ಕೇಳುತ್ತಿದ್ದಾರೆ. ಭರತ್ ಶೆಟ್ಟಿ, ಶರಣ್ ಪಂಪ್ವೆಲ್ ಮೇಲೆ ಸುಳ್ಳು ಕೇಸ್ ದಾಖಲಾಗಿಲ್ಲ. ಎಲ್ಲಿ ಹೇಳಿಕೆ ನೀಡಿದರೂ ಅದು ತಪ್ಪೇ. ಲಂಡನ್ ನಲ್ಲಿ ಕುಳಿತು ಹೇಳಿದರೂ ತಪ್ಪೇ. ಕಾನ್ವೆಂಟ್ ಶಾಲೆಗಳಿಗೆ ಹೋಗಬೇಡಿ ಅನ್ನೋದು ತಪ್ಪಲ್ವಾ.. ಪ್ರಚೋದನಕಾರಿ ಹೇಳಿಕೆಯ ವಿರುದ್ಧ ಕೇಸ್ ಹಾಕಲಾಗಿದೆ. ಪೊಲೀಸ್ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಗುಂಡೂರಾವ್ ಹೇಳಿದರು.
Mangalore Gerosa school controversy, no return of FIR against Vedavyas Bharath shetty says Minister Dinesh Gundu Rao. Speaking to media persons the Minister said that IAS officer has been appointed to probe the case of school.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm