ಬ್ರೇಕಿಂಗ್ ನ್ಯೂಸ್
18-02-24 11:06 pm Mangalore Correspondent ಕರಾವಳಿ
ಉಳ್ಳಾಲ, ಫೆ.18: ತೊಕ್ಕೊಟ್ಟಿನಲ್ಲಿ ನಡೆಯಲಿರುವ ಡಿವೈಎಫ್ ಐ 12 ನೇ ರಾಜ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಗರದೆಲ್ಲೆಡೆ ಆದರ್ಶ ಪುರುಷರ ಭಾವಚಿತ್ರಗಳುಲ್ಲ ಫ್ಲೆಕ್ಸ್ , ಕಮಾನುಗಳು ರಾರಾಜಿಸುತ್ತಿದ್ದು, ಹರೇಕಳದ ಡಿವೈಎಫ್ ಐ ಕಚೇರಿ ಬಳಿ ಟಿಪ್ಪು ಸುಲ್ತಾನ್ ನ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ಇದನ್ನ ತೆರವುಗೊಳಿಸುವಂತೆ ಕೊಣಾಜೆ ಪೊಲೀಸರು ನೋಟೀಸು ನೀಡಿದ್ದಾರೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಇದೇ ಫೆ.25, 26, 27 ರಂದು ನಡೆಯಲಿರುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಅಲ್ಲಲ್ಲಿ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ.
ಹರೇಕಳದ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಸಂಘಟನೆ ಕಾರ್ಯಕರ್ತರು ಟಿಪ್ಪು ಸುಲ್ತಾನ್ ನ ಕಾರ್ಡ್ ಬೋರ್ಡ್ ಪ್ರತಿಮೆ ಅಳವಡಿಸಿದ್ದಾರೆ. ಟಿಪ್ಪುವಿನ ಕಟೌಟ್ ಅಳವಡಿಸಲು ಅನುಮತಿ ಪಡೆಯದಿರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಕಟೌಟ್ ತೆರವುಗೊಳಿಸಲು ಹರೇಕಳ ಡಿವೈಎಫ್ ಐ ಮುಖಂಡರಿಗೆ ನೋಟಿಸ್ ನೀಡಿದ್ದಾರೆ.

ಶನಿವಾರದಂದು ಕೊಣಾಜೆ ಠಾಣಾಧಿಕಾರಿ ನೋಟೀಸು ನೀಡಿದ್ದು ಹರೇಕಳ ಪಂಚಾಯತ್ ಪಿಡಿಒ ರಜೆಯಲ್ಲಿದ್ದ ಕಾರಣ ಕಟೌಟ್ ತೆರವು ಆಗಿಲ್ಲ. ಹರೇಕಳ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಕಾರ್ಡ್ ಬೋರ್ಡ್ನಿಂದ 6 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿದೆ. ಕಟೌಟ್ ತೆರವುಗೊಳಿಸಲು ಮುಂದಾದ ಕೊಣಾಜೆ ಪೊಲೀಸರ ವಿರುದ್ಧ ಡಿವೈಎಪ್ ಐ ಜಿಲ್ಲಾಧ್ಯಕ್ಷ ಇಮ್ತಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಯಾವ ಸರಕಾರ ಇದೆಯೆಂದು ಕಿಡಿಕಾರಿದ್ದಾರೆ. ಟಿಪ್ಪು , ರಾಣಿ ಅಬ್ಬಕ್ಕ ಸೇರಿದಂತೆ ಯಾರೊಬ್ಬರ ಕಟೌಟ್ ತೆರವುಗೊಳಿಸದಂತೆ ಡಿವೈಎಫ್ ಐ ಕಾರ್ಯಕರ್ತರು ಕಾವಲಿರುತ್ತಾರೆಂದು ಇಮ್ತಿಯಾಝ್ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Police issue notice to Dfyi to remove Tippu statue at Ullal in Mangalore.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am