ಬ್ರೇಕಿಂಗ್ ನ್ಯೂಸ್
19-02-24 11:45 am Mangalore Correspondent ಕರಾವಳಿ
ಮಂಗಳೂರು, ಫೆ.19: ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಎಫ್ಐಆರ್ ಹಾಕಿದ್ದಾರೆಂದು ಆರೋಪಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಕ್ಲಾಕ್ ಟವರ್ ವೃತ್ತದಲ್ಲಿ ವಿಎಚ್ ಪಿ ಮತ್ತು ಬಜರಂಗದಳ ಕಾರ್ಯಕರ್ತರು ಇಂದು ಹರತಾಳ ಹಮ್ಮಿಕೊಂಡಿದ್ದರು. ಜೆರೋಸಾ ಶಾಲೆಯ ಘಟನೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರು ಮತ್ತು ಹಿಂದು ಸಂಘಟನೆಯ ಶರಣ್ ಪಂಪ್ವೆಲ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರ ಕ್ರಮ ವಿರೋಧಿಸಿ ಪ್ರತಿಭಟನೆ ನಡೆದಿತ್ತು. ನೂರಾರು ಕಾರ್ಯಕರ್ತರು ಸೇರಿದ್ದರು. ಆದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ.












ಕಾರ್ಯಕರ್ತರು ತಾವು ಪೊಲೀಸ್ ಕಮಿಷನರ್ ಕಚೇರಿ ವರೆಗೆ ಹೋಗಿ ಮನವಿ ಕೊಡುತ್ತೇವೆ ಎಂದಾಗಲೂ ಅವಕಾಶ ಕೊಡಲಿಲ್ಲ. ಪೊಲೀಸರು ರಸ್ತೆಗೆ ಬ್ಯಾರಿಕೇಡ್ ಹಾಕಿದಾಗ ಕಾರ್ಯಕರ್ತರು ನುಗ್ಗಿ ಬಂದಿದ್ದು ಪೊಲೀಸರು ಅಡ್ಡಹಾಕಿದ್ದಾರೆ. ನೆಲದಲ್ಲಿ ಹೊರಳಾಡಿದ ಕಾರ್ಯಕರ್ತರನ್ನು ಎತ್ತಿ ಪೊಲೀಸ್ ಬಸ್ಸಿಗೆ ಹಾಕಿದ್ದಾರೆ. ಜೈಶ್ರೀರಾಮ್ ಘೋಷಣೆ ಕೂಗುತ್ತಲೇ ಕಾರ್ಯಕರ್ತರು ಅರೆಸ್ಟ್ ಆಗಿದ್ದಾರೆ.
ಜೆರೋಸಾ ಶಾಲೆಯ ಘಟನೆ ಖಂಡಿಸಿ ಮತ್ತು ಎಫ್ಐಆರ್ ವಿರೋಧಿಸಿ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ಮುಂದೆ ಪ್ರತಿಭಟನೆ, ಹರತಾಳಕ್ಕೆ ಕರೆ ನೀಡಲಾಗಿತ್ತು. ಕೊನೆಕ್ಷಣದಲ್ಲಿ ಪ್ರತಿಭಟನೆ ಸ್ವರೂಪ ಬದಲಾಗಿದ್ದು ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ಆಯೋಜಿಸಲಾಗಿತ್ತು.
Mangalore Gerosa school, VHP members try to attempt police Commissioner Office Police take hundreds of members to custody. Vhp was held at protest near Mini Vidhana Soudha slammed the FIR made against Mla Bharath Shetty and Vedavyas Kamath. Police took hundreds of members to custody when they tired to move towards Police Commissioner Office.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm