ಬ್ರೇಕಿಂಗ್ ನ್ಯೂಸ್
20-02-24 10:16 am Mangalore Correspondent ಕರಾವಳಿ
ಮಂಗಳೂರು, ಫೆ.20: ಸಂತ ಜೆರೊಸಾ ಶಾಲೆಯಲ್ಲಿ ಹಿಂದು ಧರ್ಮ ಅವಹೇಳನದ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಪೋಷಕರೊಬ್ಬರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಮಾಡಲಾಗಿದೆ. ಈ ಬಗ್ಗೆ ಪೋಷಕಿ ಮಂಗಳೂರಿನ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಅಲ್ಲದೆ, ಜೆರೊಸಾ ಘಟನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಕಾರಣಕ್ಕೆ ಶಿಕ್ಷಕಿಯೂ ಆಗಿರುವ ಪೋಷಕಿ ಕವಿತಾ ಅವರನ್ನು ತಾವು ಕೆಲಸ ಮಾಡುತ್ತಿದ್ದ ಶಾಲೆಯಿಂದ ಕಿತ್ತು ಹಾಕಲಾಗಿದೆ. ತೊಕ್ಕೊಟ್ಟಿನ ಹೋಲಿ ಏಂಜಲ್ ಪ್ರಾಥಮಿಕ ಶಾಲೆಯಲ್ಲಿ ಕವಿತಾ ಶಿಕ್ಷಕಿಯಾಗಿದ್ದರು. ಕವಿತಾ ಅವರು ಮಂಗಳೂರಿನ ಜಪ್ಪಿನಮೊಗರು ನಿವಾಸಿಯಾಗಿದ್ದು ಮಗಳು ಸಂತ ಜೆರೋಸಾ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿ. ರಾಮನ ಬಗ್ಗೆ ಅವಹೇಳನಗೈದ ಶಿಕ್ಷಕಿ ಸಿಸ್ಟರ್ ಪ್ರಭಾ ಬಗ್ಗೆ ಮನೆಯಲ್ಲಿ ಹೇಳಿಕೊಂಡಿದ್ದಳು.
ಘಟನೆಯ ಬಳಿಕ ಫೆ.10 ರಂದು ಹಿಂದು ಸಂಘಟನೆಗಳ ಜೊತೆಗೆ ಡಿಡಿಪಿಐ ಕಚೇರಿಗೆ ಬಂದಿದ್ದ ಕವಿತಾ, ಹಿಂದು ಧರ್ಮ ಅವಹೇಳನ ಮಾಡಿರುವ ಶಿಕ್ಷಕಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದ್ದರು. ಈ ವೇಳೆ ಕವಿತಾ ಅವರು ಮಾತನಾಡಿದ್ದ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಅಷ್ಟಕ್ಕೇ ಶಿಕ್ಷಕಿ ಹುದ್ದೆಯಿಂದಲೇ ಕವಿತಾ ಅವರನ್ನು ಕ್ರೈಸ್ತ ಶಿಕ್ಷಣ ಸಂಸ್ಥೆ ಹೋಲಿ ಎಂಜಲ್ ಶಾಲೆಯ ಆಡಳಿತ ಮಂಡಳಿ ಕಿತ್ತು ಹಾಕಿದೆ. ಹೋಲಿ ಎಂಜಲ್ ಶಾಲೆಯಲ್ಲಿ ಕವಿತಾ ಪ್ರಾಥಮಿಕ ತರಗತಿ ಶಿಕ್ಷಕಿಯಾಗಿದ್ದರು.
ನಿಮ್ಮ ಸೇವೆ ಇನ್ನು ಅಗತ್ಯ ಇಲ್ಲ ಎಂದು ಹೋಲಿ ಎಂಜಲ್ ಶಾಲೆಯನ್ನು ನಡೆಸುತ್ತಿರುವ ಫಾದರ್ ಹೇಳಿದ್ದಾಗಿ ಕವಿತಾ ತಿಳಿಸಿದ್ದಾರೆ. ಅಲ್ಲದೆ, ಕವಿತಾ ಅವರ ಮೊಬೈಲ್ ಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು ರಾತ್ರಿ ವೇಳೆ ವಾಟ್ಸಪ್ ನಂಬರಿಗೆ ಅಶ್ಲೀಲವಾಗಿ ಆಡಿಯೋ ಮೆಸೇಜ್ ಗಳನ್ನು ಹಾಕುತ್ತಿದ್ದಾರೆ. ಕತಾರ್ ದೇಶದಿಂದ ರಾತ್ರಿ ವೇಳೆ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಗೆ ಸೋಮವಾರ ರಾತ್ರಿ ದೂರು ನೀಡಿದ್ದಾರೆ.
Mangalore Gerosa school audio viral, teacher of Holy Angel school dismissed, teacher gets threat calls. The school dismissed teacher Kavitha for taking to media against the school as her daughter is studying at Gerosa.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am