ಬ್ರೇಕಿಂಗ್ ನ್ಯೂಸ್
21-02-24 07:48 pm Mangalore Correspondent ಕರಾವಳಿ
ಮಂಗಳೂರು, ಫೆ.21: ಕೇರಳದ ತಿರುವನಂತರಪುರ- ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ಮಂಗಳೂರಿಗೆ ವಿಸ್ತರಣೆ ಮಾಡಲಾಗಿದೆ.
ಬುಧವಾರ ರೈಲ್ವೇ ಸಚಿವಾಲಯ ಈ ಬಗ್ಗೆ ಆದೇಶ ಹೊರಡಿಸಿದೆ. ಇದರ ಪ್ರಕಾರ ವಂದೇ ಭಾರತ್ ರೈಲು ನಂ. 20632/20631 ಇನ್ನು ಮುಂದೆ ತಿರುವನಂತಪುರ- ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೇ ವೇಳಾಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ.
ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.
ಮಂಗಳೂರು ರೈಲು ನಿಲ್ದಾಣ ಪಾಲ್ಘಾಟ್ ರೈಲ್ವೇ ವಿಭಾಗಕ್ಕೆ ಸೇರಿದ್ದರೂ, ವಂದೇ ಭಾರತ್ ರೈಲನ್ನು ಕೇರಳಕ್ಕೆ ಮಾತ್ರ ಸೀಮಿತಗೊಳಿಸುವ ಲಾಬಿಯಿಂದಾಗಿ ಕಾಸರಗೋಡಿನಿಂದ ತಿರುವನಂತಪುರಕ್ಕೆ ಆರಂಭಿಸಲಾಗಿತ್ತು. ಈ ರೀತಿಯ ನಿರ್ಧಾರದಿಂದ ರೈಲ್ವೇಗೆ ಲಾಭ ಇರಲಿಲ್ಲ. ಕೇರಳದ ಹೆಚ್ಚಿನ ಪ್ರಯಾಣಿಕರು ಮಂಗಳೂರಿಗೆ ಬರುತ್ತಿದ್ದರೇ ವಿನಾ ಕಾಸರಗೋಡು ವರೆಗೆ ಬರುವುದು ಕಡಿಮೆಯಿತ್ತು. ಕೇರಳದ ಸಂಸದರ ಲಾಬಿಯಿಂದಾಗಿ ಅಧಿಕಾರಿಗಳು ಮಂಗಳೂರು ನಿಲ್ದಾಣ ಬದಿಗಿಟ್ಟು ಕೇರಳಕ್ಕೆ ಆರು ತಿಂಗಳ ಮೊದಲೇ ವಂದೇ ಭಾರತ್ ರೈಲು ಓಡಾಟ ಆರಂಭಿಸಿದ್ದರು. ಇದೀಗ ಅದೇ ರೈಲನ್ನು ಮಂಗಳೂರಿಗೆ ವಿಸ್ತರಣೆ ಮಾಡಿದ್ದು ಪ್ರಯಾಣಿಕರಿಗೆ ಅನುಕೂಲ ಮಾಡಿದ್ದಾರೆ.
ಇದೇ ವೇಳೆ, ಮಂಗಳೂರು - ಗೋವಾ ವಂದೇ ಭಾರತ್ ರೈಲನ್ನು ಕೋಜಿಕ್ಕೋಡ್ ವಿಸ್ತರಿಸಲು ಕೇರಳದ ಸಂಸದರು ಲಾಬಿ ಮಾಡಿದ್ದಾರೆ. ಈಗ ನಷ್ಟದಲ್ಲಿ ಓಡುತ್ತಿರುವ ಈ ರೈಲು ಮುಂಬೈಗೆ ವಿಸ್ತರಣೆ ಆಗಬೇಕೆಂದು ಮಂಗಳೂರು, ಉಡುಪಿ ಜನರ ಬಯಕೆ. ಈ ಬಗ್ಗೆ ಮಂಗಳೂರು ಸಂಸದರೂ ರೈಲ್ವೇ ಸಚಿವರಿಗೆ ಮನವಿ ಮಾಡಿದ್ದಾರೆ. ಯಾವ ಲಾಬಿ ವರ್ಕೌಟ್ ಆಗುತ್ತೆಂದು ನೋಡಬೇಕಷ್ಟೆ.
Vande Bharat Express Thiruvananthapuram kasaragod finally extended till Mangalore.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am