ಬ್ರೇಕಿಂಗ್ ನ್ಯೂಸ್
21-02-24 08:24 pm Mangalore Correspondent ಕರಾವಳಿ
ಮಂಗಳೂರು, ಫೆ.21: ವಿಧಾನಸಭೆ ಅಧಿವೇಶನದಲ್ಲಿ ಪಬ್ ದಾಳಿ ಮಾಡಿದ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಮಂಗಳೂರಿನ ಬಜರಂಗದಳ ಮುಖಂಡರು ತಿರುಗಿ ಬಿದ್ದಿದ್ದಾರೆ.
ವಿಧಾನಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್ ವಿರುದ್ಧ ಧ್ವನಿ ಎತ್ತುವ ಸಂದರ್ಭದಲ್ಲಿ ಹಳೆಯ ಘಟನೆಯನ್ನು ಮೆಲುಕು ಹಾಕಿದ್ದಾರೆ. ಮಂಗಳೂರಿನಲ್ಲಿ ಪಬ್ ದಾಳಿಯಾದ ಸಂದರ್ಭ ರಾಜ್ಯದ ಗೃಹ ಸಚಿವನಾಗಿದ್ದೆ. ಅಧಿವೇಶನದಲ್ಲಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಗದ್ದಲ ಎಬ್ಬಿಸಿದ್ದರು. ಆಗ ತುಂಬ ಒತ್ತಡ, ಫೋನ್ ಕರೆಗಳು ಬಂದರೂ ಮಣಿಯದೇ ಪಬ್ ದಾಳಿ ಮಾಡಿದ್ದ ಬಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ಅದೇ ರೀತಿ ನೀವು ಕೂಡ ಯಾವುದೇ ಒತ್ತಡಕ್ಕೆ ಮಣಿಯದೆ ಕೆಲಸ ಮಾಡಬೇಕು ಎಂದು ಅಧಿವೇಶನದಲ್ಲಿ ಹೇಳಿಕೆ ನೀಡಿದ್ದರು. ಅಶೋಕ್ ಅವರು ಬಹಿರಂಗವಾಗಿ ಈ ರೀತಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶ ಭುಗಿಲೆದ್ದಿದೆ.


ಬಜರಂಗದಳ ಮಂಗಳೂರು ವಿಭಾಗ ಸಹ ಸಂಯೋಜಕ ಪುನೀತ್ ಅತ್ತಾವರ ಈ ಬಗ್ಗೆ ಫೇಸ್ಬುಕ್ ನಲ್ಲಿ ಬರೆದಿದ್ದು ನೀವು ಮಂಗಳೂರಿಗೆ ಬಂದಾಗ ನೋಡಿಕೊಳ್ಳುತ್ತೇವೆ ಎಂದು ಅಶೋಕ್ ಗೆ ಬೆದರಿಕೆ ಹಾಕಿದ್ದಾರೆ. ಪುನೀತ್ ಹಾಕಿರುವ ಪೋಸ್ಟ್ ಈ ರೀತಿ ಇದೆ. "ನೀವು ಆರ್ ಅಶೋಕ್ ಅಲ್ಲ.. ನಿಮ್ಮ ಹೆಸರನ್ನು ಎ ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜಸ್ಟ್ ಮೆಂಟ್ ಅಶೋಕ್ ಅವರೇ..!! ನಿಮ್ಮ ನಾಲಗೆಯನ್ನು ನಾಲಗೆ ರೀತಿ ಬಳಸಿ, ಎಕ್ಕಡದ ರೀತಿ ಬಳಸಿಕೊಳ್ಳಬೇಡಿ... ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ... ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ. ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ.. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳಿ..
ಪ್ರತಿಪಕ್ಷ ನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ...!! ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ.. ಒಂದೋ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ, ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಬರೆದಿದ್ದಾರೆ. ಈ ರೀತಿಯ ಪೋಸ್ಟ್ ಗೆ ಪರ- ವಿರೋಧ ವ್ಯಕ್ತವಾಗಿದ್ದು ಚರ್ಚೆ ನಡೆದಿದೆ.
Mangalore Bajrang dal leader Puneeth Attavar slams BJP R Ashok over pub attack says we will look after you when you come to Mangalore. Ashok while speaking in the Assembly said 'Pub Attackers' Bajrang dal, this statement has made members of Bajrang dal go angry.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm