ಬ್ರೇಕಿಂಗ್ ನ್ಯೂಸ್
23-02-24 02:40 pm Mangalore Correspondent ಕರಾವಳಿ
ಉಳ್ಳಾಲ, ಫೆ.23: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು, ಬೀರಿಯ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂಬ ಯುವತಿ ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ ತೆರಳಿ ಅಲ್ಲಿನ ಏರ್ಪೋರ್ಟಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯ ನಿರ್ವಹಿಸಿದ್ದರು. ಪ್ರತಿದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಗುರುವಾರ ಕ್ಯಾಬ್ ತಪ್ಪಿದ ಹಿನ್ನಲೆ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದು ಅಪಘಾತವಾಗಿದೆ.
ಚಿಂತಾಜನಕ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದಿಸೆಯಲ್ಲೇ ರೋಟರಿ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.
ಹೊಸ ಕಾರು ಖರೀದಿಸಿದ್ದ ವಿದಿಶಾ ದುಬೈಯಲ್ಲಿ ವಾಹನ ಚಾಲನಾ ಪರವಾನಿಗೆ ಪಡೆದ ಬಳಿಕ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬಾಯಿಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು. ಪೋಷಕರು ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.
Dubai Road Accident, Mangalore ullal based 28 year old girl Vidisha killed. She is the daughter of former Mangalore Taluk Panchyath vice President Rajeev. She was working at the dubai airport since 5 years. She was driving her car and later lost control and rammed the divider.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm