ಬ್ರೇಕಿಂಗ್ ನ್ಯೂಸ್
25-02-24 12:59 pm Mangalore Correspondent ಕರಾವಳಿ
ಬಂಟ್ವಾಳ, ಫೆ 25: ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಫೆ.25ರ ಭಾನುವಾರ ಬಿಸಿರೋಡಿನ ಕೈಕಂಬದಲ್ಲಿ ನಡೆದಿದೆ.
ಆಲಡ್ಕ ನಿವಾಸಿ ಆಶ್ರಫ್ (32) ಮೃತಪಟ್ಟ ಯುವಕ.
ಆಶ್ರಫ್ ಅವರ ಸ್ನೇಹಿತ ತನ್ವೀರ್ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಆತನನ್ನ ಡ್ರಾಪ್ ಮಾಡಲು ತನ್ನ ಸ್ಕೂಟರ್ ನಲ್ಲಿ ಬಿಸಿ ರೋಡಿಗೆ ತೆರಳಿದ್ದರು. ಬೆಳಿಗ್ಗೆ ಸುಮಾರು 5.30ರ ವೇಳೆ ಆಶ್ರಫ್ ಕೈಕಂಬದಲ್ಲಿರುವ ತರಕಾರಿ ಅಂಗಡಿಗೆ ಇನ್ನೇನು ಸ್ನೇಹಿತನನ್ನು ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಖಾಲಿ ಮಾಡಿ ವಾಪಾಸ್ ಹೋಗುವ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಗಂಭೀರವಾಗಿ ಗಾಯಗೊಂಡ ಆಶ್ರಫ್ ನನ್ನು ಕೂಡಲೇ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೈಕಂಬದಲ್ಲಿರುವ ರಖಂ ತರಕಾರಿ ಅಂಗಡಿಯ ಮುಂಭಾಗದಲ್ಲಿ ಅನೇಕ ಬಾರಿ ಅಪಘಾತಗಳು ನಡೆದು ಪ್ರಾಣ ಹಾನಿಯಾಗಿದ್ದರೂ ಸರ್ಕಾರ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Accident in Kaikamba B C Road in Mangalore, truck rams two wheeler, bike rider killed. The deceased has been identified as Ashraf (32), a resident of Aladka. Ashraf had gone to assist his friend Tanveer, who works at a vegetable shop in Kaikamba.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am