ಬ್ರೇಕಿಂಗ್ ನ್ಯೂಸ್
25-11-20 09:06 pm Mangaluru Correspondent ಕರಾವಳಿ
ಮಂಗಳೂರು, ನ. 25: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದೆಡೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಹೋರಾಟ ನಡೆಯುತ್ತಿರುವಾಗಲೇ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕಳ ಹೆಸರನ್ನೇ ಇಡಬೇಕೆಂದು ಒತ್ತಾಯಿಸಿದೆ.
ಸಮಿತಿಯ ಸ್ವಾಗತಾಧ್ಯಕ್ಷ ಕೆ. ಜಯರಾಮ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಡುವಂತೆ ನಮ್ಮ ಸಮಿತಿ ವತಿಯಿಂದ 23 ವರ್ಷಗಳಲ್ಲಿ ಅನೇಕ ಬಾರಿ ಒತ್ತಾಯ ಮಾಡಿದ್ದೇವೆ. ಪ್ರತೀ ವರ್ಷ ಅಬ್ಬಕ್ಕ ಉತ್ಸವದಲ್ಲಿಯೂ ಈ ಬಗ್ಗೆ ಠರಾವು ಮಂಡಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಣಿ ಅಬ್ಬಕ್ಕಳ ಹೆಸರಿಡುವಂತೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದೇವೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈವರೆಗೆ ರಾಣಿ ಅಬ್ಬಕ್ಕಳ ಹೆಸರು ಮಾತ್ರ ಚಾಲ್ತಿಯಲ್ಲಿತ್ತು. ಆದರೆ, ಸದ್ಯ ಬೇರೆ ಬೇರೆ ಹೆಸರುಗಳು ಕೇಳಿ ಬರತೊಡಗಿದೆ ಎಂದು ಹೇಳಿದರು.
ವೀರರಾಣಿ ಅಬ್ಬಕ್ಕಳು ಭಾರತದ ಪ್ರಪ್ರಥಮ ಹೋರಾಟಗಾರ್ತಿ, ಧೀರೋದಾತ್ತ ವನಿತೆ. ಆದರೆ ರಾಜ್ಯದಲ್ಲಿ ಅಬ್ಬಕ್ಕಳಿಗೆ ಸಿಗಬೇಕಾದ ಗೌರವ ಇನ್ನೂ ಸಿಕ್ಕಿಲ್ಲ. ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಟ್ಟರೆ, ಹೊರ ರಾಜ್ಯ, ವಿದೇಶದಿಂದ ಆಗಮಿಸುವ ಸಾರ್ವಜನಿಕರಿಗೂ ವೀರ ವನಿತೆಯ ಪರಿಚಯವಾಗುತ್ತದೆ. ಅಲ್ಲದೆ, ಅದು ಆಕೆಗೆ ಗೌರವ ನೀಡಿದಂತಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಗೌರವ ಉಪಾಧ್ಯಕ್ಷ ಸದಾನಂದ ಬಂಗೇರ, ಉಪಾಧ್ಯಕ್ಷ ಆಲಿಯಬ್ಬ ಇದ್ದರು.
Veera Rani Abbakka Utsava Samithi office bearers have said that they have been repeatedly demanding to name the Mangaluru International Airport after Veera Rani Abbakka since the committee was founded in the year 1997.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
08-05-25 12:47 pm
HK News Desk
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
07-05-25 10:30 pm
Mangalore Correspondent
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm