ಬ್ರೇಕಿಂಗ್ ನ್ಯೂಸ್
02-03-24 08:37 pm Mangalore Correspondent ಕರಾವಳಿ
ಮಂಗಳೂರು, ಮಾ.2: ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿರುವ ಅರುಣ್ ಪುತ್ತಿಲ ಮತ್ತು ಇತರರು ಪಕ್ಷಕ್ಕೆ ಸೇರಲು ಮುಕ್ತ ಆಹ್ವಾನ ನೀಡುತ್ತಿದ್ದೇವೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ತತ್ವ ಸಿದ್ಧಾಂತ ಒಪ್ಪುವ ಪ್ರತಿಯೊಬ್ಬರನ್ನೂ ಬಿಜೆಪಿಗೆ ಕರೆತರಲು ಉತ್ಸುಕರಾಗಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸತೀಶ್ ಕುಂಪಲ, ಜಾಲತಾಣದಲ್ಲಿ ಕೆಲವು ಕಡೆ ಅರುಣ್ ಪುತ್ತಿಲ ಸೇರ್ಪಡೆಗೆ ಬಿಜೆಪಿಯಲ್ಲಿಯೇ ವಿರೋಧ ಎಂದು ತಪ್ಪು ಮಾಹಿತಿ ನೀಡಲಾಗುತ್ತಿದೆ. ಪುತ್ತೂರಿನಲ್ಲಿಯೂ ಪಕ್ಷದ ಪ್ರಮುಖರು ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ರಾಜ್ಯಾಧ್ಯಕ್ಷರು ಮತ್ತು ಸಂಘಟನಾ ಕಾರ್ಯದರ್ಶಿ ಹಲವು ಬಾರಿ ಮಾತುಕತೆ ನಡೆಸಿದ್ದು ಅವರಿಗೆ ಪಕ್ಷ ಸೇರಲು ಮುಕ್ತ ಆಹ್ವಾನ ನೀಡಿದ್ದಾರೆ. ಹಾಗಿದ್ದ ಮೇಲೂ ಪಕ್ಷ ಸೇರದೇ ಇರುವುದಕ್ಕೆ ಅವರೇ ಕಾರಣ ಕೊಡಬೇಕು ಎಂದರು.
ಹುದ್ದೆಯ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಮಾತುಕತೆ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿ ಅಥವಾ ಮಂಡಲಾಧ್ಯಕ್ಷ ಹುದ್ದೆಯ ಬಗ್ಗೆ ಅಪೇಕ್ಷೆ ಇಟ್ಟಿದ್ದಾರೆ. ರಾಷ್ಟ್ರೀಯ ಪಕ್ಷ ಆಗಿರುವುದರಿಂದ ಷರತ್ತು ಮುಂದಿಟ್ಟು ಪಕ್ಷಕ್ಕೆ ಬರುತ್ತೇನೆ ಎನ್ನುವುದು ಸರಿಯಲ್ಲ. ಪಕ್ಷ ಸೇರಿದ ಬಳಿಕ ಅವರಿಗೆ ತಕ್ಕುದಾದ ಸ್ಥಾನವನ್ನು ನೀಡಲಾಗುತ್ತದೆ ಎಂದು ಹೇಳಿದರು.

ಅರುಣ್ ಪುತ್ತಿಲ ಒಬ್ಬ ರಾಷ್ಟ್ರೀಯವಾದಿ. ಮೋದಿ ಪ್ರಧಾನಿಯಾಗಬೇಕೆಂದು ಅವರಲ್ಲೂ ಇದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಜಿಲ್ಲೆಯಲ್ಲಿ ಮುನಿಸು ಇರುವವರನ್ನು ಮನವೊಲಿಸುವ ಕೆಲಸ ಮಾಡುತ್ತಿದ್ದೇವೆ. ಅರುಣ್ ಪುತ್ತಿಲ ಮತ್ತು ಅವರ ಬೆಂಬಲಿಗರ ಜೊತೆಗೆ ಮಾತುಕತೆ ನಡೆಸಿದ್ದೇವೆ. ಪಕ್ಷ ಸೇರುವಾಗ ನೇರವಾಗಿ ಬಂದು ಸೇರಿಕೊಳ್ಳಲಿ. ಹುದ್ದೆಯನ್ನು ಆಬಳಿಕ ಪಕ್ಷ ತೀರ್ಮಾನಿಸುತ್ತದೆ ಎಂಬುದನ್ನು ಹೇಳಬಯಸುತ್ತೇನೆ ಎಂದರು.
The BJP said here on Saturday that the door is open for Sangh Parivar activist Arun Kumar Puthila to join the party without imposing any condition. As a rebel (Independent) candidate in the last Assembly elections from Puttur, Mr. Puthila came second, relegating the BJP to third.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am