ಬ್ರೇಕಿಂಗ್ ನ್ಯೂಸ್
07-03-24 06:46 pm Mangalore Correspondent ಕರಾವಳಿ
ಮಂಗಳೂರು, ಮಾ.7: ಜಮೀನು ನಕ್ಷೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರು ತಾಲೂಕು ಕಚೇರಿಯ ಭೂಮಾಪನ ಕಚೇರಿಯ ಸರ್ವೇಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ದಾಳಿಗೈದು 4 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸರ್ವೇಯರನ್ನು ಬಂಧಿಸಿದ್ದಾರೆ. ಭೂಮಾಪನ ಕಚೇರಿಯ ಸರ್ವೇಯರ್ ಶೀತಲ್ ರಾಜ್ ಸಿಕ್ಕಿಬಿದ್ದವರು.
ಜಮೀನು ಪಹಣಿಯಲ್ಲಿನ ಹೆಸರನ್ನು ತೆಗೆಯಲು ನಿಯಮ ಪ್ರಕಾರ, ಜಮೀನನ್ನು ಸರ್ವೆ ಮಾಡಿ ನಕ್ಷೆ ತಯಾರಿಸಿ ತತ್ಕಾಲ್ ಮುಖಾಂತರ ತೆಗೆಯಬೇಕಿರುತ್ತದೆ. ಜಮೀನಿಗೆ ಸಂಬಂಧಪಟ್ಟ ಗುರುಪುರ ಹೋಬಳಿಯ ನೀರುಮಾರ್ಗ ಗ್ರಾಮದ ಲಿಲ್ಲಿ ಪೀಟರ್ ವಾಸ್ ಅವರಿಗೆ 72 ವರ್ಷವಾಗಿದ್ದು ಆರೋಗ್ಯ ಸರಿ ಇಲ್ಲದ ಕಾರಣ ಅವರ ಪರವಾಗಿ ರಾಜೇಶ್ ಎಂಬ ಸಂಬಂಧಿಕ ವ್ಯಕ್ತಿ ಅರ್ಜಿ ಹಾಕಿದ್ದರು. ಸ್ಟೆಲ್ಲಾ ಜಾನೆಟ್ ವಾಸ್ ಎಂಬವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಲ್ಲದೆ, ಅದಕ್ಕಾಗಿ 1500 ರೂ. ಪಾವತಿಸಿ ರಶೀದಿ ಪಡೆದಿದ್ದರು.
ಫೆಬ್ರವರಿ 29 ರಂದು ಮಂಗಳೂರಿನ ಸರ್ವೇ ಇಲಾಖೆಯಲ್ಲಿ ಕೆಲಸ ಮಾಡುವ ಶೀತಲ್ ರಾಜ್ ಎಂಬ ಸರ್ವೆಯರ್ ಜಮೀನಿನ ಸರ್ವೆ ನಡೆಸಿ ಸ್ಥಳ ಮಹಜರು ಮಾಡಿದ್ದರು. ಬಳಿಕ ಜಮೀನಿನ ನಕ್ಷೆ ನೀಡಲು ಸ್ವಲ್ಪ ಖರ್ಚಿದೆ ಎಂದು ಹೇಳಿದ್ದು 5 ಸಾವಿರ ಕೊಡುವಂತೆ ಬೇಡಿಕೆ ಇರಿಸಿದ್ದರು. ಬಳಿಕ ಕಡಿಮೆ ಮಾಡುವಂತೆ ಹೇಳಿದ್ದಕ್ಕೆ ನಾಲ್ಕು ಸಾವಿರ ರೂ.ಗೆ ಇಳಿಸಿದ್ದರು. ಈ ಬಗ್ಗೆ ನೊಂದ ಅರ್ಜಿದಾರ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಗುರುವಾರ ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿ ನಾಲ್ಕು ಸಾವಿರ ಲಂಚದ ಹಣ ಸ್ವೀಕಾರ ಮಾಡುವಾಗಲೇ ಲೋಕಾಯುಕ್ತ ಪೊಲೀಸರು ಆರೋಪಿ ಶೀತಲ್ ರಾಜ್ ನನ್ನು ಬಂಧಿಸಿದ್ದಾರೆ. ಎಸ್ಪಿ ಸೈಮನ್ ನೇತೃತ್ವದಲ್ಲಿ ಡಿವೈಎಸ್ಪಿ ಚೆಲುವರಾಜು, ಗಾನ ಪಿ. ಕುಮಾರ್ ಕಾರ್ಯಾಚರಣೆ ನಡೆಸಿದ್ದರು.
Four thousand bribe, Mangalore surveyor sheethal Raj caught by Lokayukta at Mini vidhana soudha.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am