ಬ್ರೇಕಿಂಗ್ ನ್ಯೂಸ್
11-03-24 03:29 pm Mangaluru Correspondent ಕರಾವಳಿ
ಬಂಟ್ವಾಳ, ಮಾ.11: ಆಟೋರಿಕ್ಷಾ ಓಡಿಸುತ್ತಿದ್ದಾಗ ಟ್ರಾಫಿಕ್ ಪೋಲೀಸರು ತಡೆದು ದಂಡ ಹಾಕಿದರು ಎಂಬ ಸಿಟ್ಟಿನಲ್ಲಿ ಚಾಲಕನೊಬ್ಬ ಟ್ರಾಫಿಕ್ ಪೊಲೀಸರು ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಬಳಿಯ ಕೈಕಂಬದಲ್ಲಿ ನಡೆದಿದೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಾಕಿ ಅನಾಹುತಕ್ಕೆ ಕಾರಣನಾದ ಆಟೋ ಚಾಲಕನ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ರಂಪಾಟ ನಡೆಸಿದ ಆರೋಪಿಯಾಗಿದ್ದು ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಸೋಮವಾರ ಬೆಳಗ್ಗೆ ಟ್ರಾಫಿಕ್ ಎಸ್‌ಐ ಸುತೇಶ್ ಅವರು ಕೈಕಂಬದಲ್ಲಿ ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ, ಖಾಕಿ ಸಮವಸ್ತ್ರ ಹಾಕದೆ ಮೊಬೈಲ್ ನಲ್ಲಿ ಮಾತನಾಡುತ್ತ ರಿಕ್ಷಾ ಓಡಿಸುತ್ತಿದ್ದ ಚಾಲಕನನ್ನು ನಿಲ್ಲಿಸಿದ್ದಾರೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕಾಗಿ 2 ಸಾವಿರ ದಂಡ ಹಾಕಿ ನೋಟೀಸ್ ನೀಡಿದ್ದಾರೆ.


ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ ಸಾರ್ವಜನಿಕವಾಗಿ ಬೀದಿ ರಂಪಾಟ ಮಾಡಿದ್ದಲ್ಲದೆ, ನನಗೆ ಇಂತಹ ರಿಕ್ಷಾನೇ ಬೇಡವೆಂದು ಹೇಳಿ ಪೆಟ್ರೋಲ್ ಹಚ್ಚಲು ಮುಂದಾಗಿದ್ದಾನೆ. ಅನ್ಸಾರ್ ಬಳಿಕ ರಿಕ್ಷಾವನ್ನು ಪೋಲೀಸರ ಎದುರಿನಲ್ಲಿಯೇ ಸುಟ್ಟು ಹಾಕುವುದಾಗಿ ಬೆದರಿಸಿದ್ದಾನೆ. ನನ್ನ ರಿಕ್ಷಾ, ನಾನೇ ಬೆಂಕಿ ಕೊಡುತ್ತೇನೆ. ನೀವು ಯಾರು ಕೇಳೋಕೆ ಅಂತ ಪೊಲೀಸರನ್ನು ಪ್ರಶ್ನೆ ಮಾಡಿದ್ದಾನೆ. ಅಷ್ಟರಲ್ಲಿ ಸಾರ್ವಜನಿಕರು ಸೇರಿದ್ದು ಆತನಿಗೆ ಬುದ್ಧಿ ಹೇಳಿದ್ದಾರೆ. ಎಸ್.ಐ. ಸುತೇಶ್ ಅವರು ಆರೋಪಿ ವಿರುದ್ಧ ದೂರು ನೀಡಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
An auto driver tries to set his auto on fire after #police fine him for talking on the phone and not using his uniform while driving. An angry driver pours petrol into his auto and tries to set it on fire at #Bantwal in #Mangalore. #BreakingNews pic.twitter.com/ala5SeuIPd
— Headline Karnataka (@hknewsonline) March 11, 2024
An auto driver tries to set his auto on fire after police fine him for talking on the phone and not using his uniform while driving. An angry driver pours petrol into his auto and tries to set it on fire at Bantwal in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm