ಬ್ರೇಕಿಂಗ್ ನ್ಯೂಸ್
12-03-24 08:40 pm Mangalore Correspondent ಕರಾವಳಿ
ಮಂಗಳೂರು, ಮಾ.12: ನಗರದ ಸರ್ಕಿಟ್ ಹೌಸ್ - ಬಿಜೈ ರಸ್ತೆಗೆ ಮಾಜಿ ರಕ್ಷಣಾ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಲೋಕಸಭಾ ಚುನಾವಣೆ ಬಳಿಕ ಈ ರಸ್ತೆಯ ಹೆಸರು ಅಧಿಕೃತ ನಾಮಫಲಕದೊಂದಿಗೆ ಹಾಕಲಾಗುವುದು ಎಂದು ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಬಿಜೈ ಪರಿಸರದಲ್ಲಿ ಹುಟ್ಟಿದ ಜಾರ್ಜ್ ಫೆರ್ನಾಂಡಿಸ್ ಒಂಬತ್ತು ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಕಾರ್ಮಿಕ ನಾಯಕರಾಗಿದ್ದಾರೆ. ಕೊಂಕಣ್ ರೈಲ್ವೆ ಹರಿಕಾರರಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿಗೆ ದೇಶದ ಪ್ರಧಾನಿ ಮೋದಿ ಪದ್ಮವಿಭೂಷಣ ನೀಡಿದ್ದಾರೆ. ಮಂಗಳೂರು ಮನಪಾ ಸಾಮಾನ್ಯ ಸಭೆಯಲ್ಲಿ ಜಯಾನಂದ್ ಅಂಚನ್ ಅವರ ಅವಧಿಯಲ್ಲಿ ಈ ಬಗ್ಗೆ ಮನವಿ ಮಾಡಲಾಗಿತ್ತು. ಕೊಂಕಣಿ ಲೇಖಕರ ಸಂಘದ ಸಂಚಾಲಕ ರಿಚಾರ್ಡ್ ಮೋರಾಸ್ ಅವರು ಕೂಡ ರಸ್ತೆಗೆ ಮರು ನಾಮಕರಣ ಮಾಡುವಂತೆ ಮನವಿ ಮಾಡಿದ್ದರು. ರಸ್ತೆ ಮರು ನಾಮಕರಣದ ಬಗ್ಗೆ ತಕ್ಷಣ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಧನ್ಯವಾದಗಳು ಎಂದು ಹೇಳಿದರು.
ಮಂಗಳೂರಿನ ನಾರಾಯಣ ಗುರು ವೃತ್ತ ನಿರ್ವಹಣೆಯನ್ನು ಮೂಡಾದಿಂದ ಮಾಡಲಾಗುತ್ತಿದೆ. ಈ ವೃತ್ತದ ನಿರ್ವಹಣೆಯನ್ನು ಕುದ್ರೋಳಿ ದೇವಸ್ಥಾನ ಆಡಳಿತ ಮಂಡಳಿ ಕೇಳಿದ್ದು ಈ ಬಗ್ಗೆ ಪರೀಶಿಲನೆ ನಡೆಸ್ತೇವೆ ಎಂದರು.
ನೀರಿನ ಕೊರತೆ ವಿಚಾರ ಪ್ರಸ್ತಾಪಿಸಿದ ಮೇಯರ್, ಸದ್ಯ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಕೊರತೆ ಇಲ್ಲ. ಬೇಸಿಗೆಗೂ ನೀರಿನ ಸಮಸ್ಯೆ ಆಗುವುದಿಲ್ಲ. ಈಗಾಗಲೇ ಜಿಲ್ಲಾಧಿಕಾರಿ ಕೈಗಾರಿಕೆಗಳಿಗೆ ನೀರಿನ ಮಿತ ಬಳಕೆ ಮಾಡುವಂತೆ ಸೂಚಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಜನರು ನೀರನ್ನು ಮಿತ ಬಳಕೆ ಮಾಡಬೇಕು ಎಂದು ಹೇಳಿದರು.
Mayor Sudheer Shetty Kannur announced on March 12 that the road stretch from Circuit House to Bejai Circle will be renamed after the late Padma Bhushan recipient, George Fernandes.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am