ಬ್ರೇಕಿಂಗ್ ನ್ಯೂಸ್
12-03-24 10:54 pm Mangalore Correspondent ಕರಾವಳಿ
ಮಂಗಳೂರು, ಮಾ.12: ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರು ಬ್ಲಾಕ್ ಕಾಂಗ್ರೆಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯು ಐ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಮಾಜಿ ಎಂಎಲ್ಸಿ ಐವಾನ್ ಡಿಸೋಜ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಬಿಜೆಪಿ ಸಂಸದನ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಐವಾನ್ ಡಿಸೋಜ ಮಾತನಾಡಿ, ಅನಂತ ಕುಮಾರ್ ಹೆಗಡೆ ಈ ರೀತಿಯ ಹೇಳಿಕೆ ಇದು ಮೊದಲು ನೀಡಿರುವುದಲ್ಲ. ಎರಡು ವರ್ಷಗಳ ಹಿಂದೆಯೂ ಇದೇ ರೀತಿ ಸಂವಿಧಾನ ಬದಲಾಯಿಸುತ್ತೇವೆಂದು ಹೇಳಿಕೆ ನೀಡಿದ್ದರು. ನಾಲ್ಕು ವರ್ಷ ಕಾಲ ಇವರು ಕ್ಷೇತ್ರದಲ್ಲಿ ಇದ್ದಾರೆಂದೇ ತಿಳಿದಿರಲಿಲ್ಲ. ಈಗ ದಿಢೀರ್ ಆಗಿ ಎಚ್ಚತ್ತುಕೊಂಡು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ. ಜನರನ್ನು ದಿಕ್ಕು ತಪ್ಪಿಸುವ, ಗೊಂದಲಕ್ಕೀಡು ಮಾಡುವ ಹೇಳಿಕೆ ನೀಡುತ್ತಿದ್ದಾರೆ. ಸಂವಿಧಾನ ವಿರುದ್ಧ ಹೇಳಿಕೆ ನೀಡಿರುವುದು ಅಪರಾಧವಾಗಿದ್ದು ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಹರೀಶ್ ಕುಮಾರ್ ಮಾತನಾಡಿ, ಇವರಿಗೆ ಅಭಿವೃದ್ಧಿ ಕೆಲಸ ಹೇಳಿಕೊಂಡು ಚುನಾವಣೆ ಎದುರಿಸುವ ಧಮ್ ಇಲ್ಲ. ಇದಕ್ಕಾಗಿ ಜನರನ್ನು ಗೊಂದಲಕ್ಕೀಡು ಮಾಡುವ ಹೇಳಿಕೆ ನೀಡುತ್ತಿದ್ದಾರೆ. 400 ಸ್ಥಾನ ಪಡೆದಲ್ಲಿ ಇಡೀ ಸಂವಿಧಾನ ಬದಲಾಯಿಸುತ್ತೇವೆಂದು ಹೇಳುವುದೇ ಅಪರಾಧ. ಇಂತಹ ಹೇಳಿಕೆ ನೀಡಿರುವ ಅನಂತ ಕುಮಾರ್ ಹೆಗಡೆ ಅವರನ್ನು ಉಚ್ಚಾಟನೆ ಮಾಡಬೇಕು. ಬಿಜೆಪಿಯವರು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದರು.
Can change Constitution if BJP gets 400 seats in Lok Sabha, congress protest in Mangalore. Bharatiya Janata Party (BJP) MP Anant Kumar Hegde stirred a fresh controversy with his remarks that “BJP securing over 400 seats in the upcoming Lok Sabha elections” will lead to the enactment of “changes in the Indian constitution”. Speaking at Halageri, a village in Haveri district’s Siddapura on Saturday, March 9, Anant Kumar spoke about the significance of attaining the numerical threshold of 400 seats, pointing out that while the BJP enjoys a two-thirds majority in the Lok Sabha, similar dominance is lacking in the Rajya Sabha and in various state governments.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm