ಬ್ರೇಕಿಂಗ್ ನ್ಯೂಸ್
27-11-20 07:32 pm Udupi Reporter ಕರಾವಳಿ
ಉಡುಪಿ, ನವೆಂಬರ್ 27: ರಾಷ್ಟ್ರ ವಿರೋಧಿ ಬರಹ ಹಾಗೂ ರಾಷ್ಟ್ರ ವಿರೋಧಿ ಘೋಷಣೆ ಯಾರೇ ಹಾಕಿದರೂ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳೂರಿನಲ್ಲಿ ಉಗ್ರ ಸಂಘಟನೆಯನ್ನು ಬೆಂಬಲಿಸುವ ಗೋಡೆ ಬರಹ ಬರೆದಿರುವ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ನಳಿನ್ ಕುಮಾರ್ ಕಟೀಲ್, ರಾಷ್ಟ್ರ ವಿರೋಧಿ ಘೋಷಣೆ ಹಾಕಿದವರ ವಿರುದ್ಧ ನಮ್ಮ ಸರಕಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.
ದೇಶದ ಬೇರೆ ಬೇರೆ ಕಡೆಗಳಲ್ಲಿ ಲವ್ ಜಿಹಾದ್ ಸುದ್ದಿಯಾಗುತ್ತಿದೆ. ಈಗಾಗಲೇ ಪಕ್ಷ ಮತ್ತು ಪಕ್ಷದ ಕೋರ್ ಕಮಿಟಿಯಲ್ಲಿ ತೀರ್ಮಾನ ತೆಗೆದುಕೊಂಡಿದ್ದೇವೆ, ಸಿಎಂ ಒಪ್ಪಿಗೆ ನೀಡಿದ್ದಾರೆ. ಕರ್ನಾಟಕದಲ್ಲೂ ಲವ್ ಜಿಹಾದ್ ಮಾಡಿದವರ ಬಗ್ಗೆ ಕಠಿಣ ಕ್ರಮವನ್ನು ಸರಕಾರ ತೆಗೆದುಕೊಳ್ಳಲಿದೆ ಎಂದರು.
ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ನಳಿನ್ ಕುಮಾರ್ ಕಟಿಲ್, ಇದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಅವರು ಕೇಂದ್ರ ನಾಯಕರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಡಿಕೆಶಿಯವರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿಲ್ಲ:
ಮಂತ್ರಿಗಳು ಸಚಿವ ಸ್ಥಾನಕ್ಕೆ ಲಾಬಿ ಮಾಡಲು ದೆಹಲಿಗೆ ಹೋಗಿದ್ದಾರಾ ಎಂಬ ಪತ್ರಕರ್ತರ ಪ್ರಶ್ನೆಗೆ, ಕೇಂದ್ರದ ಅನುದಾನ ತರುವುದಕ್ಕೆ ಮಂತ್ರಿಗಳು ದೆಹಲಿಗೆ ಹೋಗುತ್ತಾರೆ. ಹೋದಾಗ ಕೇಂದ್ರ ನಾಯಕರ ಭೇಟಿ ಆಗುವುದು ಸಹಜ ಎಂದು ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಸಿಬಿಐ ತನಿಖೆ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಕೆಶಿಯವರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿಲ್ಲ, ಇದು ತಪ್ಪು. ಸಿಬಿಐ ಎಲ್ಲರ ಜೊತೆಗೂ ಸಮಾನವಾಗಿ ಕೆಲಸ ಮಾಡುತ್ತದೆ. ಕಾಂಗ್ರೆಸ್ ಸರಕಾರ ಕೂಡಾ ಹಲವಾರು ಜನರ ತನಿಖೆ ಮಾಡಿದೆ. ಹಾಗಾದರೆ, ಕಾಂಗ್ರೆಸ್ ಪಕ್ಷ ಸಿಬಿಐಯನ್ನು ದುರುಪಯೋಗಪಡಿಸಿಕೊಂಡಿತ್ತು ಎಂದು ಕೇಳಬೇಕಾಗುತ್ತದೆ ಎಂದಿದ್ದಾರೆ.
In an incident reported from the Bejai area in the city, miscreants have reportedly written “Lashkar Zindabad” on the wall of a appartment comound for which BJP President has ordered for strict action against the culprits.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm