ಬ್ರೇಕಿಂಗ್ ನ್ಯೂಸ್
18-03-24 02:55 pm Mangalore Correspondent ಕರಾವಳಿ
ಮಂಗಳೂರು, ಮಾ.18: ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.
ಸುಳ್ಯ ತಾಲೂಕಿನ ಕಡಮಕಲ್, ಕೂಜಿಮಲೆ, ಉಪ್ಪುಕಳ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ಎಎನ್ಎಫ್ ಪಡೆಗಳು ಕಾಡಂಚಿನ ಗ್ರಾಮಗಳಲ್ಲಿ ಸಂಚಾರ ನಡೆಸಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿಭಾಗದಲ್ಲಿ ಪೊಲೀಸರ್ ಅಲರ್ಟ್ ಆಗಿದ್ದಾರೆ.


ಕೆಲವು ದಿನಗಳ ಹಿಂದೆ ಕಡಮಕಲ್ ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆನಂತರ, ಕೂಜಿಮಲೆ ಮತ್ತು ಕಲ್ಮಕಾರ್ ಗ್ರಾಮದಲ್ಲಿ ರಸ್ತೆಗೆ ಬಂದಿದ್ದ ಎಂಟು ಮಂದಿಯಿದ್ದ ನಕ್ಸಲರು ಅಲ್ಲಿ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಕ್ಸಲರು ಈ ವೇಳೆ ಶಸ್ತ್ರಸಜ್ಜಿತರಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಕ್ಸಲರ ಪತ್ತೆಗಾಗಿ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ಪಡೆಯ ಸಿಬಂದಿ ದಿಢೀರ್ ಆಗಿ ಕಡಮಕಲ್ ಎಸ್ಟೇಟ್ ಪರಿಸರಕ್ಕೆ ಬಂದಿದ್ದು ಶೋಧ ಕಾರ್ಯಾಚರಣೆ ನಡೆಸಿದೆ.
ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಅಮಾಸೆಬೈಲು ಭಾಗದಲ್ಲಿ ನಕ್ಸಲರು ಕಾಣಿಸಿದ್ದ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ಬಂದಿದ್ದರು. ಆನಂತರ, ಅಲ್ಲಿಯೂ ಎಎನ್ಎಫ್ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆದರೆ, ನಕ್ಸಲರು ಅವರಿಗೆ ಸಿಕ್ಕಿರಲಿಲ್ಲ. ಅಲ್ಲಿದ್ದವರೇ ಈಗ ದಕ್ಷಿಣ ಕನ್ನಡದ ಮೂಲಕ ಕೊಡಗಿನತ್ತ ಚಲಿಸುತ್ತಿದ್ದಾರೆಯೇ ಎನ್ನುವ ಶಂಕೆ ಎದುರಾಗಿದೆ.
Mangalore Naxal combing operations at Sullia after residents see naxal moment.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am