ಬ್ರೇಕಿಂಗ್ ನ್ಯೂಸ್
22-03-24 09:57 pm Mangalore Correspondent ಕರಾವಳಿ
ಮಂಗಳೂರು, ಮಾ.22: ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ ಒಳಗೆ ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಕ್ರಮ ಜರುಗಿಸಿಲ್ಲ. ಆದರೆ ಗೋ ಹಂತಕರ ವಿರುದ್ಧ ಹೋರಾಡುವ ಹಿಂದೂ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸು ಹಾಕುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ರಾಜ್ಯ ಸರಕಾರ ಬರ ಪರಿಹಾರ ಕಾರ್ಯದಲ್ಲಿ ಸಂಪೂರ್ಣ ವಿಫಲವಾಗಿದೆ. 875ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಜನರು ವಲಸೆ ಹೋಗುತ್ತಿದ್ದಾರೆ. ಆದರೆ ಸಚಿವ ಶಿವಾನಂದ ಪಾಟೀಲ, ಸರಕಾರದ ಪರಿಹಾರದ ಆಸೆಗಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿಕೆ ನೀಡಿ ರೈತರನ್ನೇ ಅಣಕಿಸಿದ್ದಾರೆ ಎಂದು ಟೀಕಿಸಿದರು.
ಪರಿಶಿಷ್ಟ ಜಾತಿ, ವರ್ಗದವರ ಅಭಿವೃದ್ಧಿಗೆ ಸಂಬಂಧಿಸಿದ 11 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ಬೇರೆ ಉದ್ದೇಶಕ್ಕೆ ಹಾಗೂ ಗ್ಯಾರಂಟಿಗಳಿಗೆ ಸರಕಾರ ಬಳಸಿಕೊಂಡಿದೆ. ದಲಿತರು, ಶೋಷಿತ ಸಮುದಾಯದವರ ಬಗ್ಗೆ ಸಿದ್ದರಾಮಯಯ್ಯನವರ ಮೊಸಳೆ ಕಣ್ಣೀರಿಗೆ ಇದೇ ಸಾಕ್ಷಿ. ಇದು ದಲಿತ ವಿರೋಧಿ ಸರಕಾರವಾಗಿದ್ದು, ಈ ಸಮುದಾಯಗಳ ಮೇಲಿನ ಅನ್ಯಾಯ ನಿರಂತರವಾಗಿ ನಡೆಯುತ್ತಿದೆ.
ರಾಜ್ಯದ ಖಜಾನೆ ಖಾಲಿಯಾಗಿದೆ. ಹಿಂದಿನ ಯುಪಿಎ ಸರಕಾರಕ್ಕೆ ಹೋಲಿಸಿದರೆ ಕೇಂದ್ರದ ಬಿಜೆಪಿ ಸರಕಾರವು ರಾಜ್ಯಕ್ಕೆ ಶೇ 200ಕ್ಕೂ ಹೆಚ್ಚು ಮೊತ್ತವನ್ನು ಕೊಟ್ಟಿದ್ದರೂ ಕೇಂದ್ರದತ್ತ ಬೊಟ್ಟು ಮಾಡಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಿ ಜನರ ದಾರಿ ತಪ್ಪಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎಂದು ಭರತ್ ಶೆಟ್ಟಿ ಹೇಳಿದರು. ಸಂಜಯ ಪ್ರಭು, ಪ್ರೇಮಾನಂದ ಶೆಟ್ಟಿ, ಸಂಧ್ಯಾ ವೆಂಕಟೇಶ್, ವಸಂತ ಜೆ. ಪೂಜಾರಿ ಉಪಸ್ಥಿತರಿದ್ದರು.
MLA Dr Bharath Shetty has slammed the state government over misuse of taxpayers money for its inability to provide even a single guarantee for everyone and also for Karnataka becoming a safe haven for terrorists under the Siddaramaiah's regime.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm