ಬ್ರೇಕಿಂಗ್ ನ್ಯೂಸ್
02-04-24 11:18 am Mangalore Correspondent ಕರಾವಳಿ
ಬಂಟ್ವಾಳ, ಏ 2: ಮನೆಯ ಮೇಲಿಂದ ಕೆಳಗೆಬಿದ್ದು 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ಕಳೆದ ರಾತ್ರಿ ನಡೆದಿದೆ. ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಪುತ್ರ ಆದಿಶ್, ಮೃತ ಬಾಲಕ.
ಬಾಲಕನಿಗೆ ಮೊಬೈಲ್ ಗೀಳು ಇತ್ತು. ಯಾವಾಗಲೂ ಮೊಬೈಲ್ನಲ್ಲೇ ಮುಳುಗಿರುತ್ತಿದ್ದನಂತೆ. ರಾತ್ರಿ ವೇಳೆ ಮೊಬೈಲ್ ನೋಡುತ್ತ ಹೋಗುವಾಗ ಆಯತಪ್ಪಿ ಮನೆಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮನೆಯವರಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆ ಮೇಲೆ ಹೋಗಿದ್ದ ವೇಳೆ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿತ್ತು. ಬಾಲಕನ ತಂದೆ ಬೆಳಗ್ಗೆ ಎದ್ದು ಹೊರಗೆ ಬಂದಾಗ ಆತ ಕೆಳಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ಮನೆ ಮೇಲಿಂದ ಬಟ್ಟೆ ತೊಳೆಯುವ ಕಲ್ಲಿನ ಮೇಲೆ ಬಾಲಕ ಬಿದ್ದಿರುವುದು ಕಂಡುಬಂದಿದೆ.
ಬಾಲಕನಿಗೆ ರಾತ್ರಿ ವೇಳೆಯೂ ಮೊಬೈಲ್ ಬಳಕೆ ಹಾಗೂ ಟಿವಿ ನೋಡುವ ಅಭ್ಯಾಸ ಇತ್ತು. ಮನೆ ತಗ್ಗು ಪ್ರದೇಶದಲ್ಲಿರುವ ಕಾರಣಕ್ಕೆ ಪಿಲ್ಲರ್ ಹಾಕಿ ಮೇಲೆ ಮನೆ ನಿರ್ಮಿಸಿದ್ದರು.
ಬಾಲಕನ ತಂದೆ ದಿನೇಶ್ ಹೋಟೆಲ್ ನಡೆಸುತ್ತಿದ್ದು, ಅವರ ಪತ್ನಿ ಬೆಳಗ್ಗೆ ಹೋಟೆಲ್ನಲ್ಲಿ ಕೆಲಸವಿದೆ ಎಂದು ಅಲ್ಲೇ ಮಲಗಿದ್ದರು. ಬಾಲ್ಯದಿಂದಲೂ ಒಬ್ಬನೇ ಮಲಗುವ ಅಭ್ಯಾಸವಿದ್ದ ಬಾಲಕ, ರಾತ್ರಿ ವೇಳೆ ಎದ್ದರೂ ತಂದೆ, ತಾಯಿ ಗಮನಕ್ಕೆ ಬರುತ್ತಿರಲಿಲ್ಲ. ಬಂಟ್ವಾಳ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಆದಿಶ್ಗೆ ಇತ್ತೀಚಿಗಷ್ಟೇ ಪರೀಕ್ಷೆಗಳು ಮುಗಿದಿದ್ದವು.
ನಮ್ಮ ಮಗ ಯಾವಾಗಲೂ ಮೊಬೈಲ್ಅನ್ನು ಹಿಡಿದುಕೊಂಡೇ ಇರುತ್ತಿದ್ದ. ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದನೇ ಅಥವಾ ಏನನ್ನು ನೋಡುತ್ತಿದ್ದ ಎಂಬುದು ಗೊತ್ತಿಲ್ಲ ಎಂದು ಹೆತ್ತವರು ತಿಳಿಸಿದ್ದಾರೆ.
15 year old boy falls from house top and dies while using mobile at Bantwal in Mangalore. The deceased has been identified as Adish. It is said he was highly addicted to mobile phone.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm