ಬ್ರೇಕಿಂಗ್ ನ್ಯೂಸ್
04-04-24 02:36 pm Mangalore Correspondent ಕರಾವಳಿ
ಮಂಗಳೂರು, ಎ.4: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಭಾರೀ ಸಂಖ್ಯೆಯ ಕೇಸರಿ ಕಾರ್ಯಕರ್ತರ ಹೆದ್ದೆರೆಯೊಂದಿಗೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಬೆಳಗ್ಗೆ ಶರವು, ಕುದ್ರೋಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಬಂಟ್ಸ್ ಹಾಸ್ಟೆಲ್ ಚುನಾವಣಾ ಕಚೇರಿ ಮುಂಭಾಗದಲ್ಲಿ ಸೇರಿದ್ದ ಸಾವಿರಾರು ಕಾರ್ಯಕರ್ತರನ್ನು ನೋಡಿ ಕೈಮುಗಿಯುತ್ತಲೇ ತೆರೆದ ವಾಹನಕ್ಕೇರಿದರು. ಸಂಸದ ನಳಿನ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ, ಪುತ್ತೂರಿನ ರೆಬೆಲ್ ಸ್ಟಾರ್ ಅರುಣ್ ಪುತ್ತಿಲ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ತೆರೆದ ವಾಹನದಲ್ಲಿ ಅಭ್ಯರ್ಥಿ ಬೃಜೇಶ್ ಚೌಟರಿಗೆ ಸಾಥ್ ನೀಡಿದರು.
ಭಾರೀ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ಬಿಜೆಪಿಗೆ ಜೈಕಾರ, ಮೋದಿಗೆ ಜೈಕಾರ ಕೂಗುತ್ತಲೇ ಅಂಬೇಡ್ಕರ್ ವೃತ್ತ, ಹಂಪನಕಟ್ಟೆ ಮೂಲಕ ಕ್ಲಾಕ್ ಟವರ್ ರಸ್ತೆಯಾಗಿ ಪುರಭವನದ ಮುಂಭಾಗದಲ್ಲಿ ಸೇರಿದರು. ವಿಶೇಷ ಅಂದ್ರೆ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿವಿ ಅವರೂ ಕಾರ್ಯಕರ್ತರ ಜೊತೆಗೆ ಕಾಲ್ನಡಿಗೆಯಲ್ಲಿ ಸಾಗಿಬಂದರು. ಆನಂತರ, ಮೆರವಣಿಗೆಯ ವಾಹನಕ್ಕೆ ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರೂ ಜೊತೆಯಾದರು.
ಸಮಾವೇಶದಲ್ಲಿ ಕಾರ್ಯಕರ್ತರ ಪ್ರೀತಿ, ವಿಶ್ವಾಸಕ್ಕೆ ಋಣಿಯಾಗಿದ್ದೇನೆ. ನಿಮ್ಮ ವಿಶ್ವಾಸಕ್ಕೆ ಕುಂದು ಬರದಂತೆ ಪ್ರಧಾನಿ ಮೋದಿಯವರ ವಿಕಸಿತ ಭಾರತದ ಕಲ್ಪನೆ ಸಾಕಾರಗೊಳಿಸಲು ಪ್ರಯತ್ನಿಸುತ್ತೇನೆ. ನಿಮ್ಮೆಲ್ಲರ ಆಶಯದಂತೆ ಹಿಂದುತ್ವದ ಭದ್ರಕೋಟೆಯನ್ನು ಉಳಿಸಿಕೊಳ್ಳೋಣ. ಅತಿ ಹೆಚ್ಚು ಮತಗಳಿಂದ ನನ್ನನ್ನು ಗೆಲ್ಲಿಸಿ ಎಂದು ಕೇಳಿಕೊಂಡರು. ಸಭೆಯ ನಡುವೆಯೇ ಸಂಸದ ನಳಿನ್ ಕುಮಾರ್ ಮತ್ತು ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಜೊತೆಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಅಂದಾಜು ಹತ್ತು ಸಾವಿರದಷ್ಟು ಕಾರ್ಯಕರ್ತರು ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಸೇರಿದ್ದಲ್ಲದೆ, ಹಿಂದುತ್ವ, ಕೇಸರಿ ಕೋಟೆಯ ಪರವಾಗಿ ಜೈಕಾರ ಹಾಕಿದರು. ಮಹಿಳಾ ಕಾರ್ಯಕರ್ತರು ಗೆಲ್ಲುವಿರಿ ಕ್ಯಾಪ್ಟನ್ ನೀವು ಎಂಬ ಹಾಡಿಗೆ ತಮ್ಮ ಕೇಸರಿ ಶಾಲನ್ನು ತಲೆಯ ಮೇಲಿನಿಂದ ಬೀಸುತ್ತಲೇ ಹೆಜ್ಜೆ ಹಾಕಿದರು.
ಬಿಜೆಪಿಗರಿಗೆ ಜೆಡಿಎಸ್ ಮುಖಂಡರ ಸಾಥ್
ಎನ್ ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆ ಆಗಿರುವುದರಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಜೆಡಿಎಸ್ ನಾಯಕರೂ ಬಿಜೆಪಿಯೊಂದಿಗೆ ಜೊತೆಯಾದರು. ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಮೆರವಣಿಗೆ ವಾಹನದಲ್ಲಿ ಇದ್ದರಲ್ಲದೆ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಯ ವೇಳೆಯೂ ಜೊತೆಗಿದ್ದರು. ಜೆಡಿಎಸ್ ಹಿರಿಯ ಮುಖಂಡ ಎಂಬಿ ಸದಾಶಿವ, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಮೆರವಣಿಗೆಯಲ್ಲಿದ್ದರು. ಬಿಜೆಪಿ ಬಾವುಟದ ಜೊತೆಗೆ ಜೆಡಿಎಸ್ ಬಾವುಟವನ್ನೂ ಕೆಲವು ಕಾರ್ಯಕರ್ತರು ಹಿಡಿದುಕೊಂಡಿದ್ದರು. ಜೆಡಿಎಸ್ ಪಕ್ಷದ ಮುಸ್ಲಿಂ ಮುಖಂಡರು ನಾಪತ್ತೆಯಾಗಿದ್ದರು.
Dakshina Kannada's Mangalore BJP MP candidate, Capt Brijesh Chowta, filed his nomination at the DC office on Thursday, April 4, for the forthcoming Lok Sabha elections. Supporters of Capt Chowta organized a procession from the BJP election office at Bunts Hostel to Townhall in thousands.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am