ಬ್ರೇಕಿಂಗ್ ನ್ಯೂಸ್
08-04-24 06:15 pm Mangalore Correspondent ಕರಾವಳಿ
ಮಂಗಳೂರು, ಎ.8: ಕಾಂಗ್ರೆಸ್ ನಾಯಕರು ಪಕ್ಷವನ್ನು ಮುಸ್ಲಿಂ ಲೀಗ್ ಹಾದಿಯಲ್ಲಿ ಒಯ್ಯುತ್ತಿದ್ದಾರೆ. 1936ರಲ್ಲಿ ಮುಸ್ಲಿಂ ಲೀಗ್ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿದ್ದ ಅಂಶಗಳನ್ನೇ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳುತ್ತಿದ್ದು, ತುಷ್ಟೀಕರಣಕ್ಕಾಗಿ ಮುಸ್ಲಿಮರ ಓಲೈಕೆಯಲ್ಲಿ ತೊಡಗಿದೆ. ಮುಸ್ಲಿಂ ಲೀಗ್ ದೇಶದಲ್ಲಿ ಷರಿಯಾ ಕಾನೂನು ತರುವುದಾಗಿ ಹೇಳಿತ್ತು. ಅದೇ ರೀತಿಯಲ್ಲಿ ಮುಸ್ಲಿಂ ಹಿತಾಸಕ್ತಿಗಳನ್ನು ರಕ್ಷಿಸುವ ಕಾನೂನು ತರುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಮುಸ್ಲಿಮರಿಗೆ ವಿದೇಶಿ ಶಿಕ್ಷಣಕ್ಕಾಗಿ ಸ್ಕಾಲರ್ಶಿಪ್ ನೀಡುವುದಾಗಿ ಹೇಳಿದ್ದಾರೆ. ಕಾಶ್ಮೀರದ 370 ವಿಧಿ, ತ್ರಿವಳಿ ತಲಾಖ್ ಮತ್ತೆ ತರುವುದಾಗಿ ಹೇಳುತ್ತಿದ್ದಾರೆ. ಇವರದ್ದು ಹಿಡನ್ ಉದ್ದೇಶ ಏನೆಂದು ಜನಸಾಮಾನ್ಯರಿಗೆ ತಿಳಿಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ರಾಜ್ಯ ವಕ್ತಾರ ಅಶ್ವತ್ಥ ನಾರಾಯಣ್ ಹೇಳಿದ್ದಾರೆ.
ಸಿದ್ದರಾಮಯ್ಯ ಪದೇ ಪದೇ ಕೇಂದ್ರದ ಅನುದಾನ ಸಿಕ್ಕಿಲ್ಲ, ತೆರಿಗೆ ಪಾಲು ಸಿಗುತ್ತಿಲ್ಲ ಎಂದು ಸುಳ್ಳು ಹೇಳುತ್ತಲೇ ಬಂದಿದ್ದಾರೆ. ತಮ್ಮ ಸರಕಾರದ ನ್ಯೂನತೆ ಮುಚ್ಚಿಕೊಳ್ಳಲು, ದಿವಾಳಿ ಆಗುತ್ತಿರುವ ಆರ್ಥಿಕ ಸ್ಥಿತಿಯನ್ನು ಮುಚ್ಚಿ ಹಾಕಲು ಈ ರೀತಿ ಹೇಳುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಇಲ್ಲವೆಂದು ದೂರುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆ ಸಂಪೂರ್ಣ ನಿಂತೇ ಹೋಗಿದೆ. 2014ರ ಮೊದಲು ತೆರಿಗೆ ರೂಪದಲ್ಲಿ ಕೇಂದ್ರದಿಂದ 28 ಸಾವಿರ ಕೋಟಿ ಹಣ ಕರ್ನಾಟಕಕ್ಕೆ ನೀಡಲಾಗಿದ್ದರೆ, ಕಳೆದ ಹತ್ತು ವರ್ಷಗಳಲ್ಲಿ 2.80 ಲಕ್ಷ ಕೋಟಿ ಹಣವನ್ನು ಕರ್ನಾಟಕಕ್ಕೆ ನೀಡಲಾಗಿದೆ. ಹಾಗಿದ್ದರೂ ಹಿಂದಿ ವಿಚಾರ, ಕರ್ನಾಟಕದ ಅಸ್ಮಿತೆ ಮುಂದಿಟ್ಟು ಟೀಕೆ ಮಾಡುತ್ತಾರೆ. ಕಾಂಗ್ರೆಸ್ ಸಮ ಪ್ರಮಾಣದಲ್ಲಿ ಸ್ಪರ್ಧೆಯನ್ನೇ ಮಾಡುತ್ತಿಲ್ಲ. ಕೇವಲ 200 ಸ್ಥಾನಗಳಲ್ಲಿ ಸ್ಪರ್ಧಿಸಿ ಪ್ರತಿ ಮಹಿಳೆಗೂ ವರ್ಷದಲ್ಲಿ ಒಂದು ಲಕ್ಷ ಕೋಟಿ ಕೊಡುತ್ತೇವೆಂದು ಹೇಳಿದ್ದಾರೆ. 28-30 ಕೋಟಿ ಕುಟುಂಬಗಳಿಗೆ ದೇಶಾದ್ಯಂತ ತಲಾ ಒಂದು ಲಕ್ಷ ರೂ. ನೀಡಲು 30 ಲಕ್ಷ ಕೋಟಿ ಬೇಕಾಗುತ್ತದೆ. ಕೇಂದ್ರ ಸರಕಾರದ ಬಜೆಟ್ ಗಾತ್ರವೇ 40 ಲಕ್ಷ ಕೋಟಿ ಇರುವಾಗ ಇಷ್ಟೊಂದು ಹಣವನ್ನು ಎಲ್ಲಿಂದ ತರುತ್ತೀರಿ.? ಹಣದ ಮೂಲದ ಬಗ್ಗೆಯೇ ಸ್ಪಷ್ಟನೆ ಇಲ್ಲ. ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದೀರಿ ಎಂದು ಟೀಕಿಸಿದರು.
ರಾಜ್ಯದಲ್ಲಿ ಮೋದಿ ಪರವಾದ ವಾತಾವರಣ ಇದ್ದು, ಜನರು ಮೋದಿ ಸರಕಾರಕ್ಕಾಗಿ ಮತ ನೀಡಲಿದ್ದಾರೆ. ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನೂ ಗೆಲ್ಲಲಿದ್ದೇವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿದ್ದ ಒಂದು ಸ್ಥಾನವನ್ನೂ ಕಾಂಗ್ರೆಸ್ ಕಳೆದುಕೊಳ್ಳಲಿದ್ದಾರೆ. ಅಲ್ಲಿನ ಸೋಲು ಬಿಜೆಪಿಗೆ ಮೊದಲ ಗೆಲುವು ಆಗಲಿದೆ. ಕಳೆದ ಬಾರಿ ನಾಮಪತ್ರಕ್ಕೆ ಒಂದು ದಿನ ಇರುವಾಗ ನನ್ನನ್ನು ಪಕ್ಷ ಅಲ್ಲಿನ ಅಭ್ಯರ್ಥಿಯಾಗಿಸಿತ್ತು. ಪಕ್ಷದ ಸೂಚನೆಯಂತೆ ಸ್ಪರ್ಧಿಸಿ, 6.73 ಲಕ್ಷ ಮತಗಳನ್ನು ಪಡೆದಿದ್ದೆ. ಹತ್ತು ದಿನ ಹೆಚ್ಚು ಸಿಗುತ್ತಿದ್ದರೆ ಗೆಲುವು ನನ್ನದಾಗಿರುತ್ತಿತ್ತು ಎಂದು ಅಶ್ವತ್ಥ ನಾರಾಯಣ ಹೇಳಿದರು.
ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಅವರು ಮೂಲಸೌಕರ್ಯ ಕ್ಷೇತ್ರದಲ್ಲಿ 6800 ಕೋಟಿ ರೂಪಾಯಿ ಹೂಡಿಕೆ ಮಾಡಿಸಿದ್ದಾರೆ. ಇದರಿಂದಾಗಿ ಏಳು ಸಾವಿರ ಜನರಿಗೆ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗ ಸಿಕ್ಕಿದೆ. ಮೋದಿ ಸರಕಾರ ದೇಶಾದ್ಯಂತ ರಸ್ತೆ, ರೈಲು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 5 ಲಕ್ಷ ಕೋಟಿ ರೂಪಾಯಿ ವಿನಿಯೋಗ ಮಾಡಿದ್ದೇವೆ. ಅದರ ಪ್ರಕಾರ ಎಷ್ಟು ಲಕ್ಷ ಜನರಿಗೆ ಉದ್ಯೋಗ ಸಿಕ್ಕಿಲ್ಲ. ಇಡೀ ದೇಶದಲ್ಲಿ ಮೋದಿ ಸರಕಾರ ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿಯ ಶಕೆ ಆರಂಭಿಸಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಕೆಲಸಗಳಾಗುತ್ತಿದ್ದು, ಒಟ್ಟು ರಾಷ್ಟ್ರವನ್ನು ಒಂದೇ ಪ್ರಕಾರದಲ್ಲಿ ಮೇಲೆತ್ತಲು ಯೋಜನೆಗಳನ್ನು ಹಾಕಿದ್ದಾರೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ಮತಗಳು ಕಾಂಗ್ರೆಸಿನತ್ತ ಹೋಗಲಾರದೇ ಎಂಬ ಪ್ರಶ್ನೆಗೆ, ಇದು ದೇಶದ ಚುಕ್ಕಾಣಿ ಯಾರಿಗೆ ಎನ್ನುವುದನ್ನು ನಿರ್ಧರಿಸುವ ಚುನಾವಣೆ. ಇದೇ ರೀತಿಯ ಗ್ಯಾರಂಟಿ ಘೋಷಣೆಗಳನ್ನು ಮಧ್ಯಪ್ರದೇಶ, ರಾಜಸ್ಥಾನದಲ್ಲಿಯೂ ಮಾಡಿದ್ದರು. ಅಲ್ಲಿ ಯಾಕೆ ವರ್ಕೌಟ್ ಆಗಿಲ್ಲ. ಗ್ಯಾರಂಟಿ ಕಾರಣಕ್ಕೆ ಮತಗಳು ಚದುರುವುದಕ್ಕೆ ಗ್ಯಾರಂಟಿ ಇಲ್ಲ ಎಂದರು. ಸುದ್ದಿಗೋಷ್ಟಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಚುನಾವಣಾ ನಿರ್ವಹಣಾ ಸಮಿತಿ ಅಧ್ಯಕ್ಷ ನಿತಿನ್ ಕುಮಾರ್ ಇದ್ದರು.
BJP spokesperson Ashwath Narayan criticized the Congress government for its Lok Sabha election manifesto, likening it to the manifesto of the Muslim League before partition. He also slammed the Karnataka Congress state government over allegations of corruption.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm