ಬ್ರೇಕಿಂಗ್ ನ್ಯೂಸ್
30-11-20 01:03 pm Mangalore Correspondent ಕರಾವಳಿ
ಮಂಗಳೂರು, ನ.30: ಮೀನು ಹಿಡಿಯಲು ಬಲೆ ಹಾಕುತ್ತಿದ್ದಾಗ ತಮ್ಮದೇ ಬಲೆಯಲ್ಲಿ ಸಿಕ್ಕಿಹಾಕಿಕೊಂಡು ಯುವಕನೊಬ್ಬ ಪ್ರಾಣ ಕಳೆದುಕೊಂಡ ದುರಂತ ಘಟನೆ ಬೈಕಂಪಾಡಿ ಬಳಿ ಸಮುದ್ರದಲ್ಲಿ ಸಂಭವಿಸಿದೆ.
ಬೈಕಂಪಾಡಿಯ ಹೊಸಹಿತ್ಲು ನಿವಾಸಿ ನವೀನ್ ಕರ್ಕೇರ (32) ಮೃತರು. ಸಮುದ್ರ ದಡದಲ್ಲಿ ದೋಣಿಯಲ್ಲಿ ಪ್ರಯಾಣಿಸುತ್ತಾ ಮೀನಿಗೆ ಬಲೆ ಹಾಕುತ್ತಿದ್ದರು. ಈ ಸಂದರ್ಭದಲ್ಲಿ ಬಲೆಗೆ ನವೀನ್ ಕಾಲು ಸಿಲುಕಿದ್ದು ಅಲೆಗಳ ಹೊಡೆತಕ್ಕೆ ನೀರಿಗೆ ಬಿದ್ದು ಮುಳುಗಿದ್ದಾರೆ. ನವೀನ್ ನುರಿತ ಈಜುಗಾರರಾಗಿದ್ದರೂ ಬಲೆಯಲ್ಲಿ ಕಾಲು ಸಿಕ್ಕಿದ್ದರಿಂದ, ನೀರಿನಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ.
ಕೂಡಲೇ ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ಗಮನಿಸಿ, ಅವರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅವರು ಅಷ್ಟರಲ್ಲೇ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದರು.
ನವೀನ್ ಅವಿವಾಹಿತರಾಗಿದ್ದು ಕುಟುಂಬದಲ್ಲಿ ನಾಲ್ಕನೇ ಮಗನಾಗಿದ್ದ. ವಿಚಿತ್ರ ಅಂದರೆ, ಎಲ್ಲ ಸೋದರರೂ ಇದೇ ರೀತಿ ದುರಂತದಲ್ಲಿ ಮೃತಪಟ್ಟಿದ್ದರು. ತಂದೆ ಹಿಂದೆಯೇ ಮೃತರಾಗಿದ್ದು ಮೂವರು ಸೋದರರ ಪೈಕಿ, ಓರ್ವ ಮಡಿಕೇರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಇನ್ನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈಗ ನವೀನ್ ಸಾವಿನೊಂದಿಗೆ ವಯಸ್ಸಾದ ತಾಯಿ ಒಬ್ಬಂಟಿಯಾಗಿದ್ದಾರೆ.
In a tragic incident which happened at sea near Baikampady, Mangalore here on Sunday, November 29, a fisherman got tangled inside a net he was spreading to catch fish, and lost his life.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm