ಬ್ರೇಕಿಂಗ್ ನ್ಯೂಸ್
10-04-24 07:23 pm Mangalore Correspondent ಕರಾವಳಿ
ಮಂಗಳೂರು, ಎ.10: ಎಪ್ರಿಲ್ 14ರಂದು ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರು ನಗರದ ನಾರಾಯಣ ಗುರು ಸರ್ಕಲ್ ನಿಂದ ಲಾಲ್ ಬಾಗ್, ಪಿವಿಎಸ್ ವೃತ್ತದ ಮೂಲಕ ನವಭಾರತ್ ಸರ್ಕಲ್ ಆಗಿ ಹಂಪನಕಟ್ಟೆಯ ವರೆಗೆ ರೋಡ್ ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಮೋದಿ ಸಮಾವೇಶ ನಡೆಸುವುದೆಂದು ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಸಮಾವೇಶ ರದ್ದುಪಡಿಸಿದ್ದು ಮಂಗಳೂರಿನಲ್ಲಿ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ. ಮಂಗಳೂರು ನಗರದ ಉರ್ವಾ ಬಳಿಯ ನಾರಾಯಣ ಗುರು ಸರ್ಕಲ್ ನಲ್ಲಿ ನಾರಾಯಣ ಗುರುಗಳ ಪ್ರತಿಮೆಗೆ ಅಂದು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಮಾಲಾರ್ಪಣೆ ಮಾಡಲಿದ್ದಾರೆ. ಆನಂತರ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಸತೀಶ್ ಕುಂಪಲ ತಿಳಿಸಿದ್ದಾರೆ.
ಎರಡೂವರೆ ಕಿಮೀ ಉದ್ದಕ್ಕೆ ರೋಡ್ ಶೋ ನಡೆಸುವ ಬಗ್ಗೆ ನಾವು ಕೇಂದ್ರ ಬಿಜೆಪಿ ಕಮಿಟಿಗೆ ಅಹವಾಲು ಕಳಿಸಿದ್ದೇವೆ. ಎಸ್ ಪಿಜಿ ಭದ್ರತಾ ವಿಭಾಗವು ಇಲ್ಲಿನ ಪರಿಸ್ಥಿತಿ ನೋಡಿಕೊಂಡು ಎಷ್ಟು ಉದ್ದಕ್ಕೆ ರೋಡ್ ಶೋ ನಡೆಸುವುದೆಂದು ನಿರ್ಧರಿಸಲಿದ್ದಾರೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ. ಲಾಲ್ ಬಾಗ್, ಬಳ್ಳಾಲ್ ಬಾಗ್ ರಸ್ತೆಯಲ್ಲಿ ರೋಡ್ ಶೋ ನಡೆಸಿದರೆ ಅತಿ ಹೆಚ್ಚು ಜನ ಸೇರುವುದಕ್ಕೆ ಅವಕಾಶ ಇರಲಿದ್ದು ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.
Modi road show on April 14 at 5 pm in mangalore. Initially, it was planned to hold Vijaya Sankalpa Samavesha at Gold Finch City at Kuloor. However, the convention has been cancelled and a road show will be organised in the city.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm