Vijayendra, Mangalore, Annamalai: ಎಪ್ರಿಲ್ 20ರಂದು ವಿಜಯೇಂದ್ರ ಬಂಟ್ವಾಳಕ್ಕೆ, 22ರಂದು ಅಣ್ಣಾಮಲೈ ಮಂಗಳೂರಿನಲ್ಲಿ ಪ್ರಚಾರ, ಎರಡು ಸುತ್ತಿನಲ್ಲಿ ಮನೆ ಮನೆ ಅಭಿಯಾನ

16-04-24 08:53 pm       Mangalore Correspondent   ಕರಾವಳಿ

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬೂತ್ ಮಟ್ಟದಲ್ಲಿ ಒಂದು ಸುತ್ತಿನ ಮನೆ ಮನೆ ಸಂಪರ್ಕ ಆಗಿದೆ. 1876 ಬೂತ್ ಗಳಲ್ಲಿಯೂ ಪ್ರಚಾರ ಕಾರ್ಯ ಕೈಗೊಂಡಿದ್ದೇವೆ.

ಮಂಗಳೂರು, ಎ.16: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬೂತ್ ಮಟ್ಟದಲ್ಲಿ ಒಂದು ಸುತ್ತಿನ ಮನೆ ಮನೆ ಸಂಪರ್ಕ ಆಗಿದೆ. 1876 ಬೂತ್ ಗಳಲ್ಲಿಯೂ ಪ್ರಚಾರ ಕಾರ್ಯ ಕೈಗೊಂಡಿದ್ದೇವೆ. ಇನ್ನೊಂದು ಸುತ್ತಿನ ಮನೆ ಮನೆ ಸಂಪರ್ಕ ಆಗಲಿದೆ. ಅದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಜಿಲ್ಲೆಯಲ್ಲಿ ಪ್ರಚಾರಕ್ಕೆ ಬರಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಎಪ್ರಿಲ್ 20ರಂದು ಬಿವೈ ವಿಜಯೇಂದ್ರ ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. 22ರಂದು ಅಣ್ಣಾಮಲೈ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಅಣ್ಣಾಮಲೈ ಮಂಗಳೂರು ಹಾಗೂ ಪುತ್ತೂರಿಗೆ ತೆರಳಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 61 ಕಡೆ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. ಎಪ್ರಿಲ್ 19ರಂದು ಮಂಗಳೂರಿನಲ್ಲಿ ವಕೀಲರ ಸಮಾವೇಶ ನಡೆಯಲಿದ್ದು, ಅದರಲ್ಲಿ ಪಕ್ಷದ ರಾಷ್ಟ್ರೀಯ ನಾಯಕ ಗೌರವ್ ಭಾಟಿಯಾ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Vijayendra to visit Mangalore on 20, annamalai on 22nd for BJP house campaigning.