ಬ್ರೇಕಿಂಗ್ ನ್ಯೂಸ್
24-04-24 06:24 pm Mangalore Correspondent ಕರಾವಳಿ
ಮಂಗಳೂರು, ಎ.24: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರ ಬಗ್ಗೆ ಬಂಟರ ಬ್ರಿಗೇಡ್ ಹೆಸರಲ್ಲಿ ಕರಪತ್ರ ಮುದ್ರಿಸಿ, ಆಕ್ಷೇಪಾರ್ಹ ವಿಚಾರಗಳನ್ನು ಬರೆದು ಜಾತಿ, ಜಾತಿಗಳ ನಡುವೆ ದ್ವೇಷ ಹಬ್ಬಿಸುವ ಯತ್ನ ನಡೆದಿದ್ದು ಬಿಜೆಪಿ ಕಾನೂನು ಪ್ರಕೋಷ್ಠದಿಂದ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ.
ಕರಪತ್ರದಲ್ಲಿ ಬ್ರಿಜೇಶ್ ಚೌಟರ ಭಾವಚಿತ್ರ ಬಳಸಿ ಆಕ್ಷೇಪಾರ್ಹ ವಿಚಾರಗಳನ್ನು ಮುದ್ರಿಸಿ, ಮತದಾರರಲ್ಲಿ ದ್ವೇಷ ಹಬ್ಬಿಸುವ ಯತ್ನ ನಡೆದಿದೆ. ಎದುರಾಳಿ ಕಾಂಗ್ರೆಸ್ ಅಭ್ಯರ್ಥಿಯೇ ಈ ಕೃತ್ಯವನ್ನು ಮಾಡಿದ್ದಾರೆ. ಈ ರೀತಿಯ ಕರಪತ್ರವನ್ನು ಮುದ್ರಿಸಿ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಜಾತಿಗಳ ನಡುವೆ ದ್ವೇಷ ಬಿತ್ತಿ ಅದರ ದುರ್ಲಾಭವನ್ನು ಕಾಂಗ್ರೆಸ್ ಅಭ್ಯರ್ಥಿ ಪಡೆಯುತ್ತಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕಾನೂನು ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ದೇವಿಪ್ರಸಾದ್ ಸಾಮಾನಿ ಒತ್ತಾಯಿಸಿದ್ದಾರೆ.
ಬಂಟ ಬ್ರಿಗೇಡ್ ಎನ್ನುವ ಯಾವುದೇ ಸಂಸ್ಥೆ ಅಸ್ತಿತ್ವದಲ್ಲಿಲ್ಲ. ಅಂತಹ ಸಂಸ್ಥೆ ಹೆಸರಲ್ಲಿ ಕರಾವಳಿ ಭಾಗದಲ್ಲಿ ಯಾವುದೇ ಕಾರ್ಯ ಚಟುವಟಿಕೆ ನಡೆಸುವುದು ಕಂಡುಬಂದಿಲ್ಲ. ಚುನಾವಣೆಗೆ ಎರಡು ದಿನ ಇರುವಾಗ ಮತದಾರರಿಗೆ ಪ್ರಭಾವ ಬೀರುವ ಉದ್ದೇಶದಿಂದ ಈ ರೀತಿಯ ಕೃತ್ಯ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇಂತಹ ವಿಚಾರಗಳನ್ನು ಪಸರಿಸಿ ಚುನಾವಣೆಯಲ್ಲಿ ಲಾಭ ಮಾಡಲು ಯತ್ನಿಸುತ್ತಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಅಧಿಕಾರಿಯಲ್ಲಿ ಒತ್ತಾಯಿಸಿದ್ದಾರೆ.
Brijesh Chowta, Banta brigade letterhead in Mangalore creates rivalry among communities, a case has been filed in connection to this matter.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am