ಬ್ರೇಕಿಂಗ್ ನ್ಯೂಸ್
02-12-20 02:29 pm Mangalore Correspondent ಕರಾವಳಿ
ಮಂಗಳೂರು, ಡಿ.2 : ಬೋಟ್ ದುರಂತದಲ್ಲಿ ನಾಪತ್ತೆಯಾಗಿದ್ದ ಎಲ್ಲ ಆರು ಮಂದಿಯ ಮೃತದೇಹಗಳನ್ನು ಸಮುದ್ರದಿಂದ ಮೇಲೆತ್ತಲಾಗಿದೆ. ಬೆಳಗ್ಗೆ ಚಿಂತನ್ ಮತ್ತು ಅನ್ಸಾರ್ ಎಂಬ ಇಬ್ಬರ ಶವ ಪತ್ತೆಯಾಗಿತ್ತು. ಮಧ್ಯಾಹ್ನ ಸುಮಾರಿಗೆ ಜಿಯಾವುಲ್ಲಾ ಮತ್ತು ಹಸೈನಾರ್ ಎಂಬಿಬ್ಬರ ಶವವನ್ನು ನೀರಿನಿಂದ ಮೇಲೆತ್ತಲಾಗಿದೆ.
ಮೃತದೇಹಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಶವಗಳು ಬಾತುಕೊಂಡಿದ್ದು ಮುಖ ಗುರುತು ಹಿಡಿಯಲಾರದಷ್ಟು ಚರ್ಮ ಕಳಚಿ ಹೋಗಿದೆ.

ನಿನ್ನೆ ಸಂಜೆ ಪಾಂಡುರಂಗ ಸುವರ್ಣ ಮತ್ತು ಪ್ರೀತಮ್ ಎಂಬಿಬ್ಬರ ಮೃತದೇಹ ಪತ್ತೆಯಾಗಿತ್ತು. ಕೋಸ್ಟ್ ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ವೇಳೆ ಕಾರ್ಯಾಚರಣೆ ನಿಲ್ಲಿಸಿ, ಮತ್ತೆ ಇಂದು ಬೆಳಗ್ಗಿನಿಂದ ಹುಡುಕಾಟ ನಡೆದಿತ್ತು. ಮೃತರು ಬೋಳಾರ, ಬೊಕ್ಕಪಟ್ಣ ಆಸುಪಾಸಿನ ನಿವಾಸಿಗಳಾಗಿದ್ದರು.



ಮೀನುಗಾರಿಕಾ ಬಂದರಿನ ಬೆಂಗರೆ ಪ್ರದೇಶದ ನೇರಕ್ಕೆ ಸುಮಾರು 15 ನಾಟಿಕಲ್ ಮೈಲು ದೂರದಲ್ಲಿ ಮಂಗಳವಾರ ನಸುಕಿನಲ್ಲಿ ದಾರುಣ ಘಟನೆ ಸಂಭವಿಸಿತ್ತು. ಬೋಳಾರದ ಪ್ರಶಾಂತ್ ಎಂಬವರ ಮಾಲಕತ್ವದ ‘ಶ್ರೀರಕ್ಷಾ’ ಹೆಸರಿನ ಪರ್ಸಿನ್ ಬೋಟು ಸೋಮವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆಗೆ ತೆರಳಿತ್ತು.
ಬೋಟ್‌ನಲ್ಲಿ ಸುಮಾರು 25 ಮಂದಿ ಮೀನುಗಾರರು ಇದ್ದರು. ದುರಂತದಲ್ಲಿ ಆರು ಮಂದಿ ನಾಪತ್ತೆಯಾಗಿದ್ದರು. 19 ಮಂದಿಯನ್ನು ಇತರೇ ಮೀನುಗಾರಿಕಾ ಬೋಟ್ ಮೂಲಕ ರಕ್ಷಣೆ ಮಾಡಲಾಗಿತ್ತು.
Video:
The Bodies of all four of the fishermen who went missing after their boat capsized in deep-sea on Monday were retrieved during a daylong reduce operation on Wednesday morning.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm