ಬ್ರೇಕಿಂಗ್ ನ್ಯೂಸ್
28-04-24 03:36 pm Mangalore Correspondent ಕರಾವಳಿ
ಮಂಗಳೂರು, ಎ.28: ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು ಕರ್ನಾಟಕದ ಗಡಿಭಾಗದ ಜಿಲ್ಲೆಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ತಪಾಸಣೆ ಕೈಗೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜಾಲ್ಸೂರು, ಬಂಟ್ವಾಳದ ಸಾರಡ್ಕ, ಉಳ್ಳಾಲದ ತಲಪಾಡಿ ಚೆಕ್ ಪೋಸ್ಟ್ ಗಳಲ್ಲಿ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ತಪಾಸಣೆ ಕೈಗೊಂಡಿದ್ದಾರೆ. ಕರ್ನಾಟಕದ ಕೋಳಿ, ಕೋಳಿ ಮಾಂಸ, ಇತರ ಉತ್ಪನ್ನಗಳಿಗೆ ಕೇರಳವೇ ದೊಡ್ಡ ಮಾರುಕಟ್ಟೆ. ಕೇರಳದತ್ತ ತೆರಳಿ ಹಿಂದೆ ಬರುವ ವಾಹನಗಳನ್ನು ಗಡಿಭಾಗಗಳಲ್ಲಿ ಸ್ಯಾನಿಟೈಜ್ ಮಾಡಲಾಗುತ್ತದೆ. ವಾಹನಗಳನ್ನು ಗಡಿಭಾಗದಲ್ಲಿ ಸ್ಯಾನಿಟೈಜ್ ಮಾಡಿದ ನಂತರವೇ ಒಳಗೆ ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಕ್ಕಿಗಳು ಅಥವಾ ಕೋಳಿಗಳು ಶಂಕಾಸ್ಪದ ಸಾವಿಗೀಡಾಗಿರುವುದು ಕಂಡುಬಂದರೆ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು. ಹಕ್ಕಿಜ್ವರ ತಡೆಯುವ ಕ್ರಮಗಳ ಬಗ್ಗೆ ಪಶುವೈದ್ಯರು ರೈತರಿಗೆ ಮಾಹಿತಿ ನೀಡಿದ್ದಾರೆ. ಕೋಳಿ ಸಾಕಣೆ ಕೇಂದ್ರ ಮತ್ತು ಮಾಂಸದ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹಕ್ಕಿಜ್ವರದ ಸೋಂಕು ತಗಲುವ ಸಾಧ್ಯತೆ ಹೆಚ್ಚು. ಜಾಗೃತರಾಗಿರುವಂತೆ ತಿಳಿಸಿದ್ದೇವೆ. ದ.ಕ. ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರ ಕಂಡುಬಂದಿಲ್ಲ. ಹಕ್ಕಿಜ್ವರ ಇದ್ದರೂ ಕೋಳಿ ಮಾಂಸ ಸೇವನೆಯಿಂದ ಮನುಷ್ಯನಿಗೆ ರೋಗ ಹರಡುವುದಿಲ್ಲ. ಫಾರ್ಮ್ ಗಳಲ್ಲಿ ಕೋಳಿಯಿಂದ ಹರಡುವ ಸಾಧ್ಯತೆ ಇರುತ್ತದೆ. ಆದರೆ ಈ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುವುದಿಲ್ಲ. ಆದ್ದರಿಂದ ಯಾರೂ ಗಾಬರಿಪಡುವ ಅಗತ್ಯವಿಲ್ಲ ಎಂದು ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಅರುಣ್ ಶೆಟ್ಟಿ ತಿಳಿಸಿದ್ದಾರೆ.
Following reports of a bird flu outbreak that has affected two panchayats in Alappuzha, the director of the health department has been instructed by State Health Minister Veena George to take the necessary action in accordance with the Kerala Public Health Act of 2023.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm