ಬ್ರೇಕಿಂಗ್ ನ್ಯೂಸ್
02-12-20 09:30 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮಂಗಳೂರಿನ ಮೀನುಗಾರಿಕಾ ಬೋಟ್ ದುರಂತದಲ್ಲಿ ಮಡಿದ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರಕಾರದಿಂದ ತಲಾ ಆರು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ಬಗ್ಗೆ ಟ್ವೀಟ್ ಮಾಡಿ ಸಿಎಂ ಯಡಿಯೂರಪ್ಪ ಸೂಚನೆಯಂತೆ ತಲಾ ಆರು ಲಕ್ಷ ಬಿಡುಗಡೆಗೊಳಿಸಿದ್ದಾಗಿ ತಿಳಿಸಿದ್ದಾರೆ. ಮತ್ತಷ್ಟು ನೆರವು ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.


ಇಂದು ಮಧ್ಯಾಹ್ನ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೃತರ ಕುಟುಂಬದವರು ಮತ್ತು ಮೀನುಗಾರ ಮುಖಂಡರನ್ನು ಭೇಟಿಯಾಗಿದ್ದ ಸಚಿವ ಶ್ರೀನಿವಾಸ ಪೂಜಾರಿ, ಗರಿಷ್ಠ ಪರಿಹಾರದ ಭರವಸೆ ನೀಡಿದ್ದರು. ಅಲ್ಲದೆ, ನಾಳೆ ಸಂಜೆಯ ವೇಳೆಗೆ ಪರಿಹಾರದ ಬಗ್ಗೆ ತಿಳಿಸುವುದಾಗಿ ಹೇಳಿದ್ದರು. ಇದಲ್ಲದೆ, ಕಾರ್ಯಾಚರಣೆಯಲ್ಲಿ ಕೋಸ್ಟ್ ಗಾರ್ಡ್ ಮತ್ತು ಜಿಲ್ಲಾಡಳಿತದ ಲೋಪ ಆಗಿರುವ ಬಗ್ಗೆ ವರದಿ ಪಡೆದು ತನಿಖೆ ನಡೆಸುವುದಾಗಿ ತಿಳಿಸಿದ್ದರು.
ದುರಂತದಲ್ಲಿ ಆರು ಮಂದಿ ಮೀನುಗಾರರು ಮೃತಪಟ್ಟಿದ್ದು ಬೋಟಿನಲ್ಲಿದ್ದ 19 ಮಂದಿಯನ್ನು ರಕ್ಷಣೆ ಮಾಡಲಾಗಿತ್ತು. ಮಂಗಳವಾರ ನಸುಕಿನಲ್ಲಿ 25 ಜನರಿದ್ದ ಪರ್ಸಿನ್ ಬೋಟ್ ದುರಂತಕ್ಕೀಡಾಗಿತ್ತು.
ಮಂಗಳೂರಿನ ಪಡುಕಡಲಿನಲ್ಲಿ ಮೀನುಗಾರಿಕೆ ದೋಣಿ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಮುಖ್ಯಮಂತ್ರಿ ಶ್ರೀ @BSYBJP ನಿರ್ದೇಶನದ ಮೇರೆಗೆ ತಲಾ 6 ಲಕ್ಷ ರೂ. ಬಿಡುಗಡೆಗೊಳಿಸಲಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದ ಪರವಾಗಿ ಸಾಂತ್ವಾನ ಹೇಳುತ್ತಾ ನೊಂದ ಕುಟುಂಬಗಳ ಪರವಾಗಿ, ಮತ್ತಷ್ಟು ನೆರವಿಗಾಗಿ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ.
— Kota Shrinivas Poojari (@KotasBJP) December 2, 2020
District in-charge minister Kota Srinivas Poojary said that Rs six lac ex-gratia is released to the family of each fisherman who died in the tragedy when the huge boat in which they went for fishing got capsized at around 15 nautical miles from Bunder port of the city.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am