ಬ್ರೇಕಿಂಗ್ ನ್ಯೂಸ್
03-05-24 06:31 pm Mangalore Correspondent ಕರಾವಳಿ
ಮಂಗಳೂರು, ಮೇ.03: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಿ ನೀರು ಪೂರೈಸಬೇಕು. ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ನೀರನ್ನು ಅನಗತ್ಯ ಪೋಲು ಮಾಡುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದ್ದಾರೆ.
ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು. ಮಳೆಯ ಕೊರತೆ, ತಾಪಮಾನ ಹೆಚ್ಚಳದಿಂದಾಗಿ ನೀರಿನ ಸಮಸ್ಯೆ ಪ್ರಾರಂಭವಾಗುತ್ತಿದೆ. ಸಾರ್ವಜನಿಕರು ಅನಗತ್ಯವಾಗಿ ನೀರು ಪೊಲು ಮಾಡದೇ ಸದ್ಭಳಕೆ ಮಾಡಬೇಕು ಹಾಗೂ ನೀರಿನ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು. ಈಗಾಗಲೇ ನೀರಿನ ಸಮಸ್ಯೆ ಪರಿಹರಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಸಾರ್ವಜನಿಕರಿಂದ ಬರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು, ನೀರಿನ ರೇಷನಿಂಗ್ ಮಾಡಲು ಸೂಕ್ತ ವೇಳಾಪಟ್ಟಿಯನ್ನು ತಯಾರಿಸಿ ಸಮರ್ಪಕವಾಗಿ ಎಲ್ಲಾ ಕಡೆ ನೀರು ಪೂರೈಕೆಯಾಗುವಂತೆ ನಿಗಾ ವಹಿಸಬೇಕು ಎಂದು ಮಹಾನಗರಪಾಲಿಕೆಯ ಆಯುಕ್ತರಿಗೆ ಸೂಚಿಸಿದರು.
ಜಿಲ್ಲೆಯ ಪ್ರತಿ ತಾಲ್ಲೂಕುಗಳ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಕ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ಅನ್ನು ರಚಿಸಿ ನೀರಿನ ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳಬೇಕು. ಡ್ಯಾಮ್ ಗಳನ್ನು ಹೊರತುಪಡಿಸಿ ನೀರಿನ ಪರ್ಯಾಯ ಮೂಲಗಳನ್ನು ಖುದ್ದಾಗಿ ಭೇಟಿ ನೀಡಿ ಅದರ ಬಗ್ಗೆ ಪಟ್ಟಿ ತಯಾರಿಸಬೇಕು ಎಂದರು.
ನೀರಿನ ಸಮಸ್ಯೆ ಇರುವ ಸೋಮೇಶ್ವರ ಹಾಗೂ ಕೋಟೆಕಾರು ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಆಗುತ್ತಿದ್ದು, ಅದರ ಬಗ್ಗೆಯೂ ಗಮನಹರಿಸಬೇಕು. ಮುಂದಿನ ಮಳೆಗಾಲದ ವರೆಗೂ ಯಾವುದೇ ರೀತಿಯ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು ಎಂದರು.


ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಮೆಸ್ಕಾಂ, ಆರೋಗ್ಯ ಇಲಾಖೆಗಳೂ ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ತಯಾರಾಗಿರಬೇಕು. ಮಳೆಗಾಲ ಆಗಮಿಸುವ ಮೊದಲೇ ಯಾವೆಲ್ಲಾ ಪ್ರದೇಶಗಳಲ್ಲಿ ಭೂಕುಸಿತ, ಪ್ರವಾಹ ಹಾಗೂ ಸಂಪರ್ಕಕ್ಕೆ ಸಿಗದೆ ಇರುವ ಪ್ರದೇಶಗಳ ಬಗ್ಗೆ ಮಾಹಿತಿ ಕಲೆ ಹಾಕಬೇಕು ಹಾಗೂ ಯಾವುದೇ ರೀತಿಯ ಹಾನಿ ಉಂಟಾಗದಂತೆ ರಕ್ಷಣಾ ವ್ಯವಸ್ಥೆಗಳನ್ನು ಮಾಡಬೇಕು ಎಂದರು.
ರಸ್ತೆ ಕಡಿತಗೊಂಡು ಸಂಪರ್ಕಕ್ಕೆ ಸಿಗದ ಪ್ರದೇಶದಲ್ಲಿ ಗರ್ಭಿಣಿಯರು ವಯಸ್ಸಾದವರ ಪಟ್ಟಿಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ಅವರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ವ್ಯವಸ್ಥೆ ಆಗಬೇಕು ಎಂದರು. ನೆಟ್‍ವರ್ಕ್ ಸಿಗದ ಪ್ರದೇಶದಲ್ಲಿ ಜನರಿಂದ ಮಾಹಿತಿ ಪಡೆಯಲು ಮತ್ತು ಅವರಿಗೆ ಮಾಹಿತಿಯನ್ನು ನೀಡಲು ಪರ್ಯಾಯ ವ್ಯವಸ್ಥೆಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್, ಪೊಲೀಸ್ ವರಿಷ್ಟಾಧಿಕಾರಿ ರಿಷ್ಯಂತ್ ಸಿಬಿ, ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮೋಹಾಪಾತ್ರ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Strict action against those wasting water unnecessarily in Mangalore says DC. Due to extreme heat weather water crisis have begin in Mangalore. They for DC Mullai Muhilan as requested public not to waste water.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm