ಬ್ರೇಕಿಂಗ್ ನ್ಯೂಸ್
08-05-24 03:20 pm Mangalore Correspondent ಕರಾವಳಿ
ಮಂಗಳೂರು, ಮೇ 8: ನಗರದ ಹಂಪನಕಟ್ಟೆ ಬಳಿಯ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಆಟೋ ಚಾಲಕರು ಮತ್ತು ರೈಲು ಪ್ರಯಾಣಿಕರ ಮಧ್ಯೆ ಹೊಯ್ ಕೈ ನಡೆದಿದ್ದು ತಳ್ಳಾಟ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯರು ಎಂಬುದನ್ನೂ ಗಮನಿಸದೆ ಆಟೋ ಚಾಲಕರು ಅಸಭ್ಯವಾಗಿ ವರ್ತಿಸಿದ್ದಾರೆಂಬ ಆಕ್ಷೇಪ ಕೇಳಿಬಂದಿದೆ.
ಸೆಂಟ್ರಲ್ ರೈಲ್ವೇ ನಿಲ್ದಾಣದ ಹೊರಗೆ ವಾಗ್ವಾದ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಂಗಳವಾರ ಬೆಳಗ್ಗೆ ಚೆನ್ನೈನಿಂದ ದಂಪತಿ ಬಂದಿದ್ದು, ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯಲು ಇಬ್ಬರು ಬಂದಿದ್ದರು. ರೈಲ್ವೇ ನಿಲ್ದಾಣದಲ್ಲಿ ನಿಗದಿತ ಸ್ಥಳಗಳಲ್ಲಿ ಮಾತ್ರ ವಾಹನ ಪಾರ್ಕಿಂಗ್ ಮಾಡಬೇಕು. ನಿಲ್ದಾಣದ ಮುಂದಿನ ಮುಖ್ಯ ಗೇಟ್ ಬಳಿ ಪಿಕಪ್ ಮತ್ತು ಡ್ರಾಪ್ ಗೆ ಮಾತ್ರ ಅನುಮತಿಯಿದ್ದು ಖಾಲಿ ವಾಹನ ತರುವುದಕ್ಕೆ ಅವಕಾಶ ಇಲ್ಲ.
ಇದೇ ವಿಚಾರದಲ್ಲಿ ರೈಲು ಪ್ರಯಾಣಿಕರನ್ನು ಕರೆದೊಯ್ಯಲು ಬಂದಿದ್ದ ಇಬ್ಬರು ಮತ್ತು ಪಾರ್ಕಿಂಗ್ ನೋಡಿಕೊಳ್ಳುವ ಚಂದನ್ ಎಂಬ ವ್ಯಕ್ತಿ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ, ಪಾರ್ಕಿಂಗ್ ನೋಡಿಕೊಳ್ಳುವ ಚಂದನ್ ಪರವಾಗಿ ಆಟೋರಿಕ್ಷಾ ಚಾಲಕರು ಮಧ್ಯಪ್ರವೇಶಿಸಿದ್ದಾರೆ. ಆನಂತರ ವಾಗ್ವಾದ ತಾರಕಕ್ಕೇರಿದ್ದು, ಪ್ರಯಾಣಿಕರ ಜೊತೆಗೆ ಆಟೋ ಚಾಲಕರು ಜಗಳ ನಡೆಸಿದ್ದಾರೆ. ಹೊಡೆದಾಟದ ವಿಡಿಯೋ ಸಾರ್ವಜನಿಕರ ಮೊಬೈಲಿನಲ್ಲಿ ಸೆರೆಯಾಗಿದೆ.
ಈ ಬಗ್ಗೆ ಪೊಲೀಸ್ - ಮಾಧ್ಯಮ ವಾಟ್ಸಪ್ ಗ್ರೂಪಿನಲ್ಲಿ ಪ್ರತಿಕ್ರಿಯೆ ಹಾಕಿರುವ ಮಂಗಳೂರು ಪೊಲೀಸ್ ಕಮಿಷನರ್, ಆಟೋ ಚಾಲಕರ ಗುರುತು ಪತ್ತೆಹಚ್ಚಲಾಗಿದೆ. ಪ್ರಯಾಣಿಕರ ಗುರುತನ್ನೂ ಪರಿಶೀಲನೆ ಮಾಡಲಾಗುತ್ತಿದೆ. ಈ ವಿಷಯದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Fight between auto drivers and passenger go viral in #Mangalore #railwaystation pic.twitter.com/XxbCHbk94e
— Headline Karnataka (@hknewsonline) May 8, 2024
Fight between auto drivers and passenger go viral in Mangalore railway station over parking issues.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm