ಬ್ರೇಕಿಂಗ್ ನ್ಯೂಸ್
13-05-24 07:27 pm Udupi Correspondent ಕರಾವಳಿ
ಉಡುಪಿ, ಮೇ 13: ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ಸಿಗದ ಬೇಸರದಲ್ಲಿದ್ದ ಮಾಜಿ ಶಾಸಕ ರಘುಪತಿ ಭಟ್ ಬಂಡಾಯದ ಬಾವುಟ ಹಾರಿಸಿದ್ದಾರೆ. ನಾನು ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಬಿಜೆಪಿ ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡಲಿದ್ದೇನೆ ಎಂದು ಮಾಜಿ ಶಾಸಕ ರಘುಪತಿ ಭಟ್ ಘೋಷಣೆ ಮಾಡಿದ್ದಾರೆ.
ಬಿಜೆಪಿ ಪಕ್ಷ ಉಚ್ಛಾಟನೆ ಮಾಡಿದರೂ ನಾನು ಬಿಜೆಪಿ ಕಾರ್ಯಕರ್ತ. ನನಗೆ ಬಿ ಫಾರಂ ಕೊಡಿ, ಭೌಗೋಳಿಕವಾಗಿ ಕರಾವಳಿಗೆ ಮಾನ್ಯತೆ ಕೊಡಿ. ಕರಾವಳಿಯನ್ನು ಏನು ಮಾಡಿದರೂ ನಡೆಯುತ್ತದೆ ಎಂಬ ಭಾವನೆ ನಿಮ್ಮಲ್ಲಿದ್ದರೆ ಬಿಟ್ಟುಬಿಡಿ. ಟಿಕೆಟ್ ಘೋಷಣೆ ಬದಲಾವಣೆ ಮಾಡಿ, ನನಗೆ ಅವಕಾಶ ಕೊಡಲಿ ಎಂದು ಭಟ್ ಹೇಳಿದ್ದಾರೆ.
ನಾನು ಮೇ 16ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಪಕ್ಷದ ಕಾರ್ಯಕರ್ತರಿಗೆ ಬಹಳ ನೋವಾಗಿದೆ, ಒತ್ತಾಯ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡ್ತೇನೆ. ಇದು ಬಂಡಾಯವಲ್ಲ, ಪಕ್ಷದ ವಿರುದ್ಧ ಸ್ಪರ್ಧೆ ಮಾಡುತ್ತಿಲ್ಲ. ಕರಾವಳಿ ಭಾಗದ ಧ್ವನಿಯಾಗಿ, ಕೆಲಸ ಮಾಡಬೇಕೆಂದು ನಿರ್ಧರಿಸಿದ್ದೇನೆ.
ಕರಾವಳಿ ಭಾಗವನ್ನು ಬಿಜೆಪಿ ನಿರ್ಲಕ್ಷ್ಯ ಮಾಡಿದೆ. ನೈರುತ್ಯ ಪದವೀಧರ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿ ಕೆಲಸ ಮಾಡಿದ್ದೆ. ಕಳೆದ ಚುನಾವಣೆಯಲ್ಲಿ ಮಾಹಿತಿ ನೀಡದೆ ಶಾಸಕನಾಗಿದ್ದ ನನಗೆ ಟಿಕೆಟ್ ತಪ್ಪಿಸಲಾಗಿತ್ತು. ರಾಜಕೀಯ ನಿವೃತ್ತಿ ತೆಗೆದುಕೊಳ್ಳುವ ಆಲೋಚನೆ ಮಾಡಿದ್ದೆ. ಆರ್ ಎಸ್ ಎಸ್, ಪಕ್ಷದ ನಾಯಕರ ಬಳಿ ನಿವೃತ್ತಿ ಬಗ್ಗೆ ಹೇಳಿದ್ದೆ. ಪದವೀಧರ ಕ್ಷೇತ್ರದ ಬೇಡಿಕೆ ಇಟ್ಟಾಗ ಭರವಸೆಯ ಮಾತುಗಳನ್ನಾಡಿದ್ದರು.
ಎಲ್ಲಾ ಸ್ತರದ ನಾಯಕರಲ್ಲಿ ಪರಿಷತ್ತಿನ ಟಿಕೆಟ್ ಕೇಳಿದ್ದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ 38 ಸಾವಿರ ಮತದಾರರ ಸೇರ್ಪಡೆ ಮಾಡಿದ್ದೇವೆ. ಟಿಕೆಟ್ ಈಗ ಶಿವಮೊಗ್ಗದ ಡಾ. ಧನಂಜಯ ಸರ್ಜಿಗೆ ಘೋಷಣೆಯಾಗಿದೆ. ಒಂದು ವರ್ಷದ ಹಿಂದೆ ಪಕ್ಷಕ್ಕೆ ಬಂದ ಹೊಸಬರಿಗೆ ಟಿಕೆಟ್ ಕೊಡಲಾಗಿದೆ. ನನ್ನ ಮನಸ್ಸಿನ ಬೇಸರ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದೆ. ಧನಂಜಯ ಸರ್ಜಿ ಸಂಘ ಪರಿವಾರದ ವಿರುದ್ಧ ಕೆಲಸ ಮಾಡಿದವರು. ಯಾವ ಕಾರಣಕ್ಕೆ ಟಿಕೆಟ್ ಕೊಟ್ಟಿದ್ದೀರಿ ಎಂದು ಯಾರೂ ಸ್ಪಷ್ಟಪಡಿಸಿಲ್ಲ. ಜಾತಿ, ಹಣದ ಬಲದಿಂದ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಹಂಚಿಕೆಯಾಗಿದೆ.
ಬಸವರಾಜ ಬೊಮ್ಮಾಯಿ, ಅಶೋಕ್, ನಳಿನ್ ಕಟೀಲ್ ಇದ್ದ ಸಭೆಯಲ್ಲೇ ಕ್ಷೇತ್ರದ ಬೇಡಿಕೆ ಇಟ್ಟಿದ್ದೆ. ಬಿಎಸ್ ಯಡಿಯೂರಪ್ಪ, ವಿಜಯೇಂದ್ರ ಅವರಿಗೂ ಮಾಹಿತಿ ನೀಡಿದ್ದೆ. ಸಭೆಯಲ್ಲಿ ನನಗೆ ಸೂಕ್ತ ಸ್ಥಾನಮಾನದ ಭರವಸೆ ನೀಡಲಾಗಿತ್ತು. ಪಕ್ಷದಿಂದ ಆದ ನೋವುಗಳನ್ನೆಲ್ಲಾ ಹೇಳಿದ್ದೇನೆ. ಯಾರು ನನ್ನ ಟಿಕೆಟ್ ತಪ್ಪಿಸಿದ್ದಾರೋ ಗೊತ್ತಿಲ್ಲ. ಇದು ಚಿಹ್ನೆ ಇಲ್ಲದ ಚುನಾವಣೆ. ಹಾಗಾಗಿ ನನ್ನ ಸ್ಪರ್ಧೆಯಿಂದ ಪಕ್ಷಕ್ಕೆ ತೊಂದರೆ ಆಗುವುದಿಲ್ಲ. ಈ ಭಾಗದ ಕಾರ್ಯಕರ್ತರು, ಮತದಾರರ ಪರವಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.
Udupi former MLA Raghupati bhat quits BJP stands independent. I am troubled by the party's decision" said former MLA Raghupati Bhat after the announcement of BJP tickets of teachers and graduate constituencies.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm