ಬ್ರೇಕಿಂಗ್ ನ್ಯೂಸ್
19-05-24 03:34 pm Mangalore Correspondent ಕರಾವಳಿ
ಮಂಗಳೂರು, ಮೇ 19: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರನ್ನು ನೇರವಾಗಿ ಸಂಪರ್ಕ ಮಾಡುವ ಮೂಲಕ ಪರಿಷತ್ ಚುನಾವಣೆ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕರೆ ನೀಡಿದರು.
ಅಸೈಗೋಳಿ ಬಂಟರ ಭವನದಲ್ಲಿ ಭಾನುವಾರ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರತಿ ಚುನಾವಣೆಗೂ ಅದರದ್ದೇ ಆದ ಮಹತ್ವವಿದೆ. ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಡಾ.ಧನಂಜಯ ಸರ್ಜಿ ಅವರು, ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಎಲ್.ಬೋಜೇಗೌಡ ಸ್ಪರ್ಧಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿ ಮತದಾರರನ್ನು ನೇರವಾಗಿ ಸಂಪರ್ಕ ಮಾಡಬೇಕು. ಹಾಗಾಗಿ ಶಕ್ತಿಕೇಂದ್ರ, ಮಹಾ ಶಕ್ತಿಕೇಂದ್ರ ಪ್ರಮುಖರು ಚುರುಕಾಗಿ ಕೆಲಸ ಮಾಡಬೇಕು ಎಂದು ಹೇಳಿದರು.



ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ವಿಕಾಸ್, ಈ ಬಾರಿ ಹೆಚ್ಚು ಸದಸ್ಯರು ನೋಂದಣಿ ಆಗಿದ್ದಾರೆ. ಒಬ್ಬ ಕಾರ್ಯಕರ್ತ 20 ಮತದಾರರನ್ನು ತಲುಪಬೇಕು. ಮತದಾರರ ಫೋನ್ ನಂಬರನ್ನು ಪಡೆದು ಮತ ಹಾಕುವ ವಿಧಾನ ತಿಳಿಸಿಕೊಟ್ಟು ಮೊದಲ ಪ್ರಾಶಸ್ತ್ಯದ ಮತವನ್ನು ನಮ್ಮ ಅಭ್ಯರ್ಥಿಗೆ ನೀಡುವಂತೆ ಮನವೊಲಿಸಬೇಕು ಎಂದರು.
ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ವೈದ್ಯಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ, ಇದೀಗ ರಾಜಕೀಯ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಸೇವೆ ಸಲ್ಲಿಸುವ ಸಂಕಲ್ಪ ನನ್ನದು. ಎಲ್ಲ ನೌಕರರು, ಪದವೀಧರರ ಸಮಸ್ಯೆಗಳ ಹರಿಹಾರಕ್ಕಾಗಿ ಸದಾ ತಮ್ಮೊಂದಿಗಿರುತ್ತೇನೆ. ವಿದ್ಯಾವಂತ ಹಾಗೂ ಪ್ರಜ್ಞಾವಂತ ಪದವೀಧರ ಮತದಾರರು ತಮ್ಮ ಮತವನ್ನು ನನಗೆ ನೀಡುವ ಮೂಲಕ ತಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಮಂಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಉದ್ಯೋಗ, ಉನ್ನತ ಶಿಕ್ಷಣ ಸೇರಿದಂತೆ ಬೇರೆ ಬೇರೆ ಕಾರಣಕ್ಕಾಗಿ ಪಟ್ಟಣ, ನಗರ ಪ್ರದೇಶದಲ್ಲಿರುವ ಪದವೀಧರ ಮತದಾರರನ್ನು ನಾವು ತಲುಪಬೇಕು, ದೊಡ್ಡ ಗೆಲುವಾಗಿ ಪರಿವರ್ತನೆ ಮಾಡಬೇಕು, ಪಕ್ಷವು ವಹಿಸಿದ ಹೊಣೆಗಾರಿಕೆಯನ್ನು ಕಾರ್ಯಕರ್ತರು ಸಮರ್ಥವಾಗಿ ನಿರ್ವಹಿಸುತ್ತಾರೆಂಬ ನಂಬಿಕೆ ಇದೆ ಎಂದರು.
ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಗದೀಶ್ ಆಳ್ವ ಮತ್ತಿತರರು ಹಾಜರಿದ್ದರು.
Dr Dhananjay Sarji in Mangalore, seeks voters to vote says will stand as their voice. BJP-JDS alliance candidate for Vidhana Parishad South-West Graduate Constituency election candidate is Dr. Dhananjay Sarji.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm