ಬ್ರೇಕಿಂಗ್ ನ್ಯೂಸ್
19-05-24 08:56 pm Mangalore Correspondent ಕರಾವಳಿ
ಮಂಗಳೂರು, ಮೇ.19: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಯುವಮೋರ್ಚಾ ತಾಲೂಕು ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ ಕ್ರಮವನ್ನು ವಿರೋಧಿಸಿ ಬೆಳ್ತಂಗಡಿ ಠಾಣೆಗೆ ನುಗ್ಗಿ ರಂಪಾಟ ನಡೆಸಿದ್ದ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲೇ ಎಫ್ಐಆರ್ ದಾಖಲಾಗಿದೆ.
ಮೇಲಂತಬೆಟ್ಟು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಸಂಬಂಧಿಸಿ ತಹಸೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದ ಪೊಲೀಸರು ಪ್ರಮೋದ್ ಉಜಿರೆ ಮತ್ತು ಶಶಿರಾಜ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಸ್ಥಳದಲ್ಲಿ ಸ್ಫೋಟಕ ಸಾಮಗ್ರಿ ಪತ್ತೆಯಾಗಿದ್ದರಿಂದ ಸ್ಫೋಟಕ ಕಾಯ್ದೆಯಡಿ ಜಾಮೀನು ರಹಿತ ಕೇಸು ದಾಖಲಾಗಿತ್ತು. ಆದರೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತನ್ನ ಪಕ್ಷದ ಕಾರ್ಯಕರ್ತನೆಂಬ ನೆಲೆಯಲ್ಲಿ ಆತನ ಬಿಡುಗಡೆಗೆ ಒತ್ತಾಯಿಸಿ ಠಾಣೆಯ ಒಳಗೆ ಧರಣಿ ನಡೆಸಿದ್ದಲ್ಲದೆ, ಪೊಲೀಸ್ ಅಧಿಕಾರಿಗಳಿಗೆ ಆವಾಜ್ ಹಾಕಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಪೊಲೀಸ್ ಠಾಣೆ ನಿಮ್ಮ ಅಪ್ಪನ ಮನೆಯ ಆಸ್ತಿಯಾ, ನಮ್ಮ ಸರಕಾರ ಬಂದಾಗ ನಿಮ್ಮನ್ನೆಲ್ಲ ನೋಡಿಕೊಳ್ಳುತ್ತೇನೆ ಎಂದು ಶಾಸಕರು ಬೆದರಿಕೆ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಪ್ರಕರಣದಲ್ಲಿ ಆರೋಪಿ ಶಶಿರಾಜ್ ಶೆಟ್ಟಿ ಬೆಳ್ತಂಗಡಿ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು, ಆತನನ್ನು ನಿನ್ನೆ ರಾತ್ರಿ ಪೊಲೀಸರು ಆತನ ಮನೆಯಿಂದಲೇ ವಶಕ್ಕೆ ಪಡೆದಿದ್ದರು. ಪೊಲೀಸರು ಎಫ್ಐಆರ್ ದಾಖಲಿಸಿ ಬಂಧಿಸಿದ್ದರೂ, ಆತ ತನ್ನ ಪಕ್ಷದ ಕಾರ್ಯಕರ್ತನಾಗಿದ್ದು, ಕೂಡಲೇ ಕಾನೂನು ಬಾಹಿರವಾಗಿ ಬಿಡುಗಡೆ ಮಾಡುವಂತೆ ಶಾಸಕ ಪೂಂಜ ನಿನ್ನೆ ತಡರಾತ್ರಿ ಠಾಣೆಯಲ್ಲಿ ಧರಣಿ ನಡೆಸಿ ಒತ್ತಾಯ ಪಡಿಸಿದ್ದರು. ಅಲ್ಲದೆ, ಠಾಣಾಧಿಕಾರಿಗಳಿಗೆ ಅವಾಚ್ಯವಾಗಿ ಬೈದು ಒತ್ತಡ ಹಾಕಿದ್ದಾರೆ. ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸ್ ಠಾಣೆಯ ಬಗ್ಗೆ ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳನ್ನು ಬಳಸಿ ದುರ್ವರ್ತನೆ ತೋರಿದ್ದಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಐಪಿಸಿ ಕಲಂ 353, 504 ರಡಿ ಕೇಸು ದಾಖಲಿಸಿದ್ದಾರೆ.
ಗೂಂಡಾ ವರ್ತನೆ ಅಕ್ಷಮ್ಯ ; ಗುಂಡೂರಾವ್
ಘಟನೆಯನ್ನು ಖಂಡಿಸಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದು, ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡರೆ, ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜ ಅಕ್ರಮ ಲೂಟಿಕೋರರ ಪರ ನಿಂತು ಸಮಾಜದ ಶಾಂತಿ ಕಾಪಾಡುವ ಪೊಲೀಸರ ವಿರುದ್ಧವೇ ಗೂಂಡಾ ವರ್ತನೆ ತೋರಿದ್ದಾರೆ. ಪೊಲೀಸರ ಜೊತೆಗಿನ ಹರೀಶ್ ಪೂಂಜಾ ಗೂಂಡಾ ವರ್ತನೆ ಅಕ್ಷಮ್ಯ. ಸ್ವತಃ ಬಿಜೆಪಿ ಶಾಸಕರೇ ಮುಂದೆ ನಿಂತು ಸರಕಾರಿ ಅಧಿಕಾರಿಗಳಿಗೆ ಕಾನೂನಾತ್ಮಕವಾಗಿ ಕೆಲಸ ಮಾಡಲು ಅಡ್ಡಿಪಡಿಸುವ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದ ಬಿಜೆಪಿಯ ಯುವಮೋರ್ಚಾ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡರೆ ಬೆಳ್ತಂಗಡಿಯ ಬಿಜೆಪಿ ಶಾಸಕ @HPoonja ಅಕ್ರಮ ಲೂಟಿಕೋರರ ಪರ ನಿಂತು ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವ ಪೊಲೀಸರ ವಿರುದ್ಧವೇ ಗೂಂಡಾ ವರ್ತನೆ ತೋರಿದ್ದಾರೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 19, 2024
ಪೊಲೀಸರ ಮೇಲಿನ ಶಾಸಕ ಹರೀಶ್ ಪೂಂಜಾ ಅವರ ಈ… pic.twitter.com/khBSusA0Ue
Case against MLA Harish Poonja for obstructing police duty in Belthangady station. Beltangady MLA Harish Poonja is facing charges for allegedly interfering in a police investigation related to the illegal storage of dangerous explosives. The Beltangady police station has registered a case against him under IPC sections 353 and 504.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 07:18 pm
Mangalore Correspondent
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
Thokottu, Mangalore: ತೊಕ್ಕೊಟ್ಟು ನಾಗರಿಕರ ಎಪ್ಪತ...
18-07-25 10:11 pm
19-07-25 12:26 pm
Mangalore Correspondent
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm